ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಸ್ಟರ್ ಸ್ಟ್ರೋಕ್ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ; ಕರಾವಳಿ ರಾಜಕೀಯದಲ್ಲಿ ಸಂಚಲನ!!

Twitter
Facebook
LinkedIn
WhatsApp
ಮಾಸ್ಟರ್ ಸ್ಟ್ರೋಕ್ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ; ಕರಾವಳಿ ರಾಜಕೀಯದಲ್ಲಿ ಸಂಚಲನ!!
ಪುತ್ತೂರು: ಮಹತ್ವದ ಬೆಳವಣಿಗೆ ಒಂದರಲ್ಲಿ ಬಿಜೆಪಿಯ ರೆಬೆಲ್ ನಾಯಕ ಅರುಣ್ ಕುಮಾರ್ ಪುತ್ತಿಲ(Arun Kumar Puttila) ಬಿಜೆಪಿಗೆ ಮರಳಿ ಸೇರುವ ಮೂಲಕ ಕಾಂಗ್ರೆಸ್ ನಿರೀಕ್ಷೆಯನ್ನು ತಲೆಕೆಳಗೆ ಮಾಡಿದ್ದಾರೆ.

ಈ ಮೂಲಕ ಬಿಜೆಪಿ ಮತ್ತೊಂದು ಮಾಸ್ಟರ್ ಸ್ಟ್ರೋಕ್ ಎಸೆದಿದ್ದು ಇದು ಕಾಂಗ್ರೆಸ್ ಪಾಳಯದಲ್ಲಿ ಹೊಸ ಆತಂಕಕ್ಕೆ ಕಾರಣವಾಗಿದೆ.

ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುತ್ತಿಲ ಪರಿವಾರ ಎಂಬ ಸಂಘಟನೆಯಲ್ಲಿ ತೊಡಗಿಸಿಕೊಂಡು ರಾಜಕೀಯದಲ್ಲಿ ಸಂಚಾಲನ ಮೂಡಿಸಿದ ಅಪಾರ ಜನ ಬೆಂಬಲ ಪಡೆದ ಯುವ ನಾಯಕ ಅರುಣ್ ಕುಮಾರ್ ಪುತ್ತಿಲ ಇಂದು ಸಂಜೆ ರಾಜ್ಯಧ್ಯಕ್ಷರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಸಂಪೂರ್ಣ ಬೆಂಬಲ ನೀಡುವ ಭರವಸೆಯನ್ನು ನೀಡುತ್ತರೆ ಎಂದು ತಿಳಿದುಬಂದಿದೆ.

ನಳೀನ್ ಕುಮಾರ್ ಕಟೀಲ್ ಅವರಿಗೆ ಎದುರಾಳಿಯಾಗಿ ಬೆಳೆದು ದಿಟ್ಟತನ ಪ್ರದರ್ಶಿಸಿದ ಇವರು ಇತ್ತೀಚೆಗೆ ಪುತ್ತೂರಿನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಮತವನ್ನು ಪಡೆದು ಕೆಲವೇ ಅಂತರದಲ್ಲಿ ಅಶೋಕ್ ರೈ ಎದುರು ಸೋಲನ್ನು ಅನುಭವಿಸಿದರು. ತದನಂತರ ಪಂಚಾಯತಿ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರದಿಂದ ಹಲವಾರು ಗೆದ್ದು ಇತಿಹಾಸವನ್ನು ನಿರ್ಮಿಸಿದ್ದರು. ಅಂತೆಯೇ ಎರಡು ಮೂರು ತಿಂಗಳ ಹಿಂದೆ ರಾಜ್ಯಾಧ್ಯಕ್ಷರು ಇವರ ಜೊತೆ ಬಿಜೆಪಿ ಸೇರ್ಪಡೆಯ ಬಗ್ಗೆ ಮಾತುಕತೆಯನ್ನು ಮಾಡಿದ್ದರು ಆದರೂ ಇದನ್ನು ಇವರು ತಿರಸ್ಕರಿಸಿದ್ದರು.

ಆದರೆ ಇತ್ತೀಚಿನ ದಿನಗಳ ಬೆಳವಣಿಗೆಯಲ್ಲಿ ನಳೀನ್ ಕುಮಾರ್ ಕಟೀಲ್ ಅವರಿಗೆ ಲೋಕಸಭಾ ಚುನಾವಣೆಯ ಟಿಕೆಟ್ ವಂಚಿತರಾದ ಬೆನ್ನಲ್ಲೇ ಇವರು ಬಿಜೆಪಿ ಸೇರ್ಪಡೆಯಾಗಿದ್ದು ಕರಾವಳಿ ಭಾಗದಲ್ಲಿ ಸಂಚಾಲನ ಮೂಡಿಸಿದೆ.

ಇನ್ನು ಕ್ಯಾಪ್ಟನ್ ಬ್ರಿಗೇಸ್ ಚೌಟ ಅವರಿಗೆ ತನ್ನ ಸಂಪೂರ್ಣವಾದ ಬೆಂಬಲವನ್ನು ಸೂಚಿಸಿದ್ದು ದೊಡ್ಡ ಅಂತಾರದಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕೊಡುತ್ತೇನೆ ಎಂಬ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. ಪುತ್ತಿಲ ಪರಿವಾರದಿಂದ ಅರುಣ್ ಕುಮಾರ್ ಪುತ್ತಿಲ ರವರು ಪಕ್ಷೇತರವಾಗಿ ಸ್ಪರ್ಧಿಸುತ್ತಾರೆ ಎಂಬ ಭರವಸೆಯಿಂದ ಬಹಳ ಉಮ್ಮಸಿನಿಂದ ಕಾಯುತ್ತಾ ಇದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ದೊಡ್ಡ ಹೊಡೆತ ಬಿದ್ದಂತಿದೆ.
ಕಾಂಗ್ರೆಸ್ ಪಕ್ಷದಿಂದ ಬಹುತೇಕ ಪದ್ಮರಾಜ್ ರವರು ಅಭ್ಯರ್ಥಿಯಾಗುತ್ತಾರೆಂದು ತಿಳಿದು ಬಂದಿದೆ.

ಅಧ್ಯಕ್ಷ ಗಾದಿಯಲ್ಲಿ ಪುತ್ತಿಲ!

ಇದೀಗ ಪುತ್ತಿಲ ಅವರಿಗೆ ಬಿಜೆಪಿಯಲ್ಲಿ ಯಾವ ಹುದ್ದೆ ನೀಡಿತ್ತಾರೆ ಎನ್ನುವುದೇ ಬಹುದೊಡ್ಡ ಪ್ರಶ್ನೆ. ಜಿಲ್ಲೆಯ ಏಳು ಮಂಡಲಗಳ ಪೈಕಿ ಬಾಕಿ ಇಟ್ಟಿರುವ ಪುತ್ತೂರು ಮಂಡಲ ಅಧ್ಯಕ್ಷತೆಗೆ ಆಯ್ಕೆ ಪ್ರಕ್ರಿಯೆ ನಡೆಸುವ ಸಾಧ್ಯತೆ ಇದೆ. ಇದಕ್ಕೆ ಅರುಣ್ ಪುತ್ತಿಲ ಅವರ ಹೆಸರನ್ನೇ ಸೂಚಿಸುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ