ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Matsya 6000: ಭಾರತೀಯ ವಿಜ್ಞಾನಿಗಳ ಮಹತ್ವಾಕಾಂಕ್ಷಿ ಸಮುದ್ರಯಾನ ಯೋಜನೆ ಆರಂಭ!

Twitter
Facebook
LinkedIn
WhatsApp
Matsya 6000: ಭಾರತೀಯ ವಿಜ್ಞಾನಿಗಳ ಮಹತ್ವಾಕಾಂಕ್ಷಿ ಸಮುದ್ರಯಾನ ಯೋಜನೆ ಆರಂಭ!

ನವದೆಹಲಿ: ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ಸೂರ್ಯನ ಅನ್ವೇಷಣೆಗೆ ಆದಿತ್ಯ ಎಲ್‌-1 ನೌಕೆಯನ್ನ ಕಳುಹಿಸಿರುವ ಭಾರತ ಇದೀಗ ಸಮುದ್ರಯಾನದತ್ತ (Project Samudrayaan) ಚಿತ್ತ ಹರಿಸಿದೆ.

ಭಾರತೀಯ ವಿಜ್ಞಾನಿಗಳ (Indian Scientists) ಮಹತ್ವಾಕಾಂಕ್ಷಿ ಸಮುದ್ರಯಾನ ಯೋಜನೆ ಆರಂಭಕ್ಕೆ ಸಿದ್ಧತೆ ಶುರುವಾಗಿದೆ. ಬರೋಬ್ಬರಿ 6 ಸಾವಿರ ಮೀಟರ್ ಸಮುದ್ರದ ಆಳಕ್ಕೆ ಮೂವರು ಸಂಶೋಧಕರನ್ನ ಕಳಿಸಲು ಸಿದ್ಧತೆ ನಡೆಯುತ್ತಿದೆ. ಇದಕ್ಕಾಗಿ ದೇಶೀಯ ನಿರ್ಮಿತ ಜಲಾಂತರ್ಗಾಮಿ ನೌಕೆ ಸಿದ್ಧವಾಗಿದೆ. ಸಮುದ್ರದ ಆಳದಲ್ಲಿ ಇರಬಹುದಾದ ಬೆಲೆ ಬಾಳುವ ಲೋಹಗಳಾದ ನಿಕ್ಕಲ್, ಮ್ಯಾಂಗನೀಸ್, ಕೋಬಾಲ್ಟ್‌ ಲೋಹಗಳ ನಿಕ್ಷೇಪ ಪತ್ತೆ ಹಚ್ಚಲು ಈ ಯೋಜನೆ ಸಹಕಾರಿಯಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

Matsya 6000: ಭಾರತೀಯ ವಿಜ್ಞಾನಿಗಳ ಮಹತ್ವಾಕಾಂಕ್ಷಿ ಸಮುದ್ರಯಾನ ಯೋಜನೆ ಆರಂಭ!

ತಜ್ಞರನ್ನು ಸಮುದ್ರದ ಆಳಕ್ಕೆ ಕರೆದೊಯ್ಯುವ ಜಲಾಂತರ್ಗಾಮಿ ನೌಕೆಗೆ ಮತ್ಸ್ಯ (Matsya 6000)ಎಂದು ಹೆಸರಿಡಲಾಗಿದೆ. ಕಳೆದ ಎರಡು ವರ್ಷಗಳಿಂದ ಈ ನೌಕೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಚೆನ್ನೈ ಸಮೀಪದ ಸಾಗರ ತೀರದಲ್ಲಿ ಬಂಗಾಳ ಕೊಲ್ಲಿಯಲ್ಲಿ ಈ ಜಲಾಂತರ್ಗಾಮಿ ನೌಕೆಯ ಮೊದಲ ಸಮುದ್ರ ಪರೀಕ್ಷೆ ನಡೆಯಲಿದ್ದು, 2024ರ ಆರಂಭದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳುವ ನಿರೀಕ್ಷೆ ಇದೆ.

ಈ ಕುರಿತು ಮಾಹಿತಿ ನೀಡಿರುವ ಕೇಂದ್ರದ ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ. ರವಿಚಂದ್ರನ್, ಆಳ ಸಮುದ್ರ ಯೋಜನೆ ಅಡಿಯಲ್ಲಿ ಸಮುದ್ರಯಾನ ಕಾರ್ಯಕ್ರಮ ರೂಪಿಸಲಾಗಿದೆ. 2024ರ ಮೊದಲ ತ್ರೈಮಾಸಿಕದಲ್ಲಿ ಈ ನೌಕೆಯನ್ನು ಸಮುದ್ರದ 500 ಮೀಟರ್ ಆಳಕ್ಕೆ ಇಳಿಸಿ ಮೊದಲ ಪರೀಕ್ಷಾರ್ಥ ಪ್ರಯೋಗ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಈ ಯೋಜನೆ 2026ರ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಎನ್‌ಐಒಟಿ ನಿರ್ದೇಶಕ ಜಿ.ಎ ರಾಮದಾಸ್‌, 2.1 ಮೀಟರ್‌ ವ್ಯಾಸದ ಗೋಳಾಕಾರದಲ್ಲಿ ಈ ಜಲಾಂತರ್ಗಾಮಿಯನ್ನ ವಿನ್ಯಾಸಗೊಳಿಸಲಾಗಿದೆ. 6 ಸಾವಿರ ಮೀಟರ್‌ ಆಳಕ್ಕೆ ಕಳುಹಿಸಬೇಕಿರುವುದರಿಂದ 600 ಬಾರ್‌ ಒತ್ತಡ (ಸಮುದ್ರಮಟ್ಟದ ಒತ್ತಡಕ್ಕಿಂತ 600 ಪಟ್ಟು ಹೆಚ್ಚು) ತಡೆದುಕೊಳ್ಳುವ ಸಾಮರ್ಥ್ಯಕ್ಕೆ ತಕ್ಕಂತೆ ಜಲಾಂತರ್ಗಾಮಿಯನ್ನ ಸಿದ್ಧಪಡಿಸಲಾಗಿದೆ. 12 ರಿಂದ 16 ಗಂಟೆಗಳ ಕಾಲ ಕಾರ್ಯನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗಿದೆ. 96 ಗಂಟೆಗಳ ಕಾಲ ಆಕ್ಸಿಜನ್‌ ಇದರಲ್ಲಿ ಲಭ್ಯವಿರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈವರೆಗೆ ಅಮೆರಿಕ, ರಷ್ಯಾ, ಜಪಾನ್, ಫ್ರಾನ್ಸ್‌ ಹಾಗೂ ಚೀನಾ ದೇಶಗಳು ಮಾತ್ರ ಈ ಮಾದರಿಯ ಮಾನವ ಸಹಿತ ಜಲಾಂತರ್ಗಾಮಿ ನೌಕೆಗಳನ್ನು ಅಭಿವೃದ್ಧಿಪಡಿಸಿವೆ. ಈ ನೌಕೆ ಮೂಲಕ ಅಮೂಲ್ಯ ಲೋಹಗಳಾದ ನಿಕ್ಕಲ್, ಕೋಬಾಲ್ಟ್, ಮ್ಯಾಂಗನೀಸ್, ಹೈಡ್ರೋಥರ್ಮಲ್ ಸಲ್ಫೈಡ್ಸ್‌ ಹಾಗೂ ಗ್ಯಾಸ್ ಹೈಡ್ರೇಟ್ಸ್‌ಗಳನ್ನು ಪತ್ತೆ ಹಚ್ಚಲು ತೀರ್ಮಾನಿಸಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist