ನನ್ನನ್ನು ಮದುವೆಯಾಗಿ ಏಳು ಬಾರಿ ಗರ್ಭಪಾತ ಮಾಡಿಸಿದ ; ರಾಜಕಾರಣಿ ಸೀಮನ್ ವಿರುದ್ಧ ನಟಿ ವಿಜಯಲಕ್ಷ್ಮಿ ಆರೋಪ!
ಕನ್ನಡದ ನಾಗಮಂಡಲ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ವಿಜಯಲಕ್ಷ್ಮಿ(Vijayalakshmi), ತಮಿಳುನಾಡಿನ ಹೆಸರಾಂತ ರಾಜಕಾರಣಿ ಸೀಮನ್ (Seaman) ವಿರುದ್ಧ ಮತ್ತೆ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದಾರೆ. ತಮ್ಮನ್ನು ಸೀಮನ್ ಮದುವೆಯಾಗಿ ಏಳು ಬಾರಿ ಗರ್ಭಪಾತ ಮಾಡಿಸಿದ್ದಾನೆ ಎಂದು ಅವರು ದೂರಿನಲ್ಲಿ ಬರೆದಿದ್ದಾರೆ.
ತಿರುವಳ್ಳೂರಿನ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆಯನ್ನೂ ನೀಡಿರುವ ನಟಿ ವಿಜಯಲಕ್ಷ್ಮಿ, ‘200ರಲ್ಲಿ ತಾವು ನಾಮ್ ತಮಿಳರ್ ಕಟ್ಚಿ (ಎನ್.ಟಿಕೆ) ನಾಯಕರೂ ಆಗಿರುವ ಸೀಮನ್ ಜೊತೆ ಮದುವೆಯಾಗಿದ್ದೇನೆ. ಆನಂತರ ಅವರು ನನಗೆ ಮೋಸ ಮಾಡುತ್ತಲೇ ಹೋದರು. ನನ್ನ ಚಿನ್ನಾಭರಣ ದೋಚಿದರು. ಏಳು ಬಾರಿ ಗರ್ಭಪಾತ ಮಾಡಿಸಿದ್ದಾರೆ. ಅವರಿಂದ ನನಗೆ ಲೈಂಗಿಕ ದೌರ್ಜನ್ಯ ಕೂಡ ಆಗಿದೆ’ ಎಂದು ಹೇಳಿಕೆ ದಾಖಲಿಸಿದ್ದಾರೆ.
ತಿರುವಳ್ಳೂರಿನ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆಯನ್ನೂ ನೀಡಿರುವ ನಟಿ ವಿಜಯಲಕ್ಷ್ಮಿ, ‘200ರಲ್ಲಿ ತಾವು ನಾಮ್ ತಮಿಳರ್ ಕಟ್ಚಿ (ಎನ್.ಟಿಕೆ) ನಾಯಕರೂ ಆಗಿರುವ ಸೀಮನ್ ಜೊತೆ ಮದುವೆಯಾಗಿದ್ದೇನೆ. ಆನಂತರ ಅವರು ನನಗೆ ಮೋಸ ಮಾಡುತ್ತಲೇ ಹೋದರು. ನನ್ನ ಚಿನ್ನಾಭರಣ ದೋಚಿದರು. ಏಳು ಬಾರಿ ಗರ್ಭಪಾತ ಮಾಡಿಸಿದ್ದಾರೆ. ಅವರಿಂದ ನನಗೆ ಲೈಂಗಿಕ ದೌರ್ಜನ್ಯ ಕೂಡ ಆಗಿದೆ’ ಎಂದು ಹೇಳಿಕೆ ದಾಖಲಿಸಿದ್ದಾರೆ.
ಈ ಘಟನೆಯ ಕುರಿತು ವಿಜಯಲಕ್ಷ್ಮಿ ಪರ ಹೋರಾಟ ಮಾಡುತ್ತಿರುವ ತಮಿಳರ್ ಮುನ್ನೆಟ್ರ ಪಡೈಯ ಅಧ್ಯಕ್ಷೆ ವೀರಲಕ್ಷ್ಮಿ ಕೂಡ ಪ್ರತಿಕ್ರಿಯೆ ನೀಡಿದ್ದು, ಹಲವಾರು ವರ್ಷಗಳಿಂದ ಈ ಕುರಿತು ಹೋರಾಟ ಮಾಡುತ್ತಿದ್ದೇವೆ. ಅವರು ಪ್ರಭಾವಿ ರಾಜಕಾರಣಿ ಆಗಿರುವುದರಿಂದ ನ್ಯಾಯ ಸಿಗುತ್ತಿಲ್ಲ. ಈ ಬಾರಿ ನಮಗೆ ಶಿಕ್ಷೆ ಕೊಡಿಸುತ್ತೇವೆ ಎಂಬ ನಂಬಿಕೆ ಬಂದಿದೆ ಎಂದಿದ್ದಾರೆ.
ನಟಿ ಅಪರ್ಣಾ ಸಾವಿಗೆ ಮತ್ತೊಂದು ತಿರುವು: ದಿನಕ್ಕೊಂದು ಸ್ಫೋಟಕ ಮಾಹಿತಿ
ಕಳೆದ ವಾರವಷ್ಟೇ ನೇಣಿಗೆ ಶರಣಾಗಿದ್ದ (Suicide) ಮಲಯಾಳಂ ಖ್ಯಾತ ನಟಿ ಅಪರ್ಣಾ ನಾಯರ್ (Aparna Nair) ಸಾವಿನ ಸುದ್ದಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತದೆ. ಅಪರ್ಣಾ ಸಾವಿಗೆ ಪತಿಯ ಮತ್ತೊಂದು ಸಂಬಂಧ ಎಂದು ಹೇಳಲಾಗುತ್ತಿದ್ದು, ಸ್ವತಃ ಅಪರ್ಣಾ ತಂಗಿಯ ಜೊತೆಯೇ ಪತಿ ಅಫೇರ್ ಇಟ್ಟುಕೊಂಡಿದ್ದ ಎಂದು ತಿಳಿದು ಬಂದಿದೆ.
ಅಪರ್ಣಾ ತಂಗಿಯೊಂದಿಗೆ ಪತಿಯು ಸಂಬಂಧ ಇಟ್ಟುಕೊಂಡಿರುವ ವಿಚಾರವಾಗಿ ಹಲವಾರು ಬಾರಿ ಮನೆಯಲ್ಲಿ ಗಲಾಟೆ ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಗೂ ಅಪರ್ಣಾ ದೂರು ನೀಡಿದ್ದರು. ಆದರೂ ಪತಿ ಸರಿ ಹೋಗಿರಲಿಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ. ಈ ನಡೆಯೇ ಅಪರ್ಣಾ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ.
ಈ ಹಿಂದೆ ಅಪರ್ಣಾ ಅವರ ಪತಿಯ ಕುಡಿತವೇ ಸಾವಿಗೆ ಕಾರಣವೆಂದು ಎಫ್.ಐ.ಆರ್ ನಲ್ಲಿ ದಾಖಲಾಗಿತ್ತು. ಗಂಡನ ಕುಡಿತದ ಚಟಕ್ಕೆ ಅಪರ್ಣಾ ಬೇಸತ್ತು ಹೋಗಿದ್ದರಿಂದ, ಈ ವಿಚಾರವನ್ನು ಹಲವಾರು ಬಾರಿ ತಮ್ಮ ತಾಯಿಯ ಜೊತೆ ಹಂಚಿಕೊಂಡಿದ್ದರಂತೆ. ಸಾವಿಗೂ ಎರಡು ಗಂಟೆ ಮುಂಚೆ ತಾಯಿಗೆ ಕರೆ ಮಾಡಿ, ತನ್ನ ನೋವನ್ನು ಹೇಳಿಕೊಂಡಿದ್ದರು ಎಂದು ಅಪರ್ಣಾ ಸಹೋದರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗಸ್ಟ್ 31ರ ಸಂಜೆ 7.30ರ ಹೊತ್ತಿಗೆ ಅಪರ್ಣಾ ಅವರ ದೇಹ ನೇಣು (Suicide) ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿತ್ತು. ಅವರ ತಾಯಿ ಮತ್ತು ಸಹೋದರಿ ಕೂಡಲೇ ಅಪರ್ಣಾ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆ ತಲುಪುವುದರ ಹೊತ್ತಿಗೆ ಅಪರ್ಣಾ ಉಸಿರು ಚೆಲ್ಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದರು.
ತಿರುವನಂತಪುರಂ (Thiruvananthapuram) ನಿವಾಸದಲ್ಲಿ ಪತಿ, ಇಬ್ಬರು ಮಕ್ಕಳೊಂದಿಗೆ ಅಪರ್ಣಾ ವಾಸಿಸುತ್ತಿದ್ದರು. ಕೇವಲ 31ನೇ ವಯಸ್ಸಿನಲ್ಲೇ ಕುಟುಂಬ ಮತ್ತು ಅಪಾರ ಅಭಿಮಾನಿಗಳನ್ನು ನಟಿ ಅಗಲಿದ್ದಾರೆ. ತನಿಖೆ (Investigation) ನಡೆಸುತ್ತಿರುವ ಪೊಲೀಸರಿಗೆ ದಿನಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಅಂತಿಮವಾಗಿ ಅಪರ್ಣಾ ಸಾವಿಗೆ ಕಾರಣ ಏನು ಎನ್ನುವುದು ಕೋರ್ಟಿನಲ್ಲೇ ಅಂತಿಮವಾಗಬೇಕಿದೆ.