ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೇನಾ ತರಬೇತಿ ವಿಮಾನ ಪತನ: ಪೈಲೆಟ್ ಸೇಫ್

Twitter
Facebook
LinkedIn
WhatsApp
ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಚಾಮರಾಜನಗರ: ಇಲ್ಲಿನ ಭೋಗಾಪುರ ಗ್ರಾಮದಲ್ಲಿ ನಡೆದ ಲಘು ವಿಮಾನ ದುರಂತದಲ್ಲಿ ಗಾಯಗೊಂಡ ಇಬ್ಬರು ಪೈಲಟ್ ಗಳನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಬಂದ ವಾಯುಸೇನೆ ಹೆಲಿಕಾಪ್ಟರ್ ನಲ್ಲಿ ಇಬ್ಬರನ್ನೂ ಕರೆದುಕೊಂಡು ಹೋಗಲಾಗಿದೆ.

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆಕಾಶದಲ್ಲಿ ತರಬೇತಿ ನೀಡುತ್ತಿದ್ದ ವೇಳೆ ವಿಮಾನ ಪತನಗೊಂಡಿದೆ. ಪುರುಷ ಪೈಲಟ್ ತೇಜಪಾಲ್ (43)​ ಮಹಿಳೆ ಪೈಲಟ್ ಭೂಮಿಕಾ​ಗೆ ತರಬೇತಿ ನೀಡುತ್ತಿದ್ದರು. ಈ ವೇಳೆ ಆಕಾಶದಲ್ಲೇ ವಿಮಾನ ಪತನಗೊಂಡಿದೆ. ಕೂಡಲೇ ಎಚ್ಚೆತ್ತುಕೊಂಡ ಪುರುಷ ಮತ್ತು ಮಹಿಳಾ ತರಬೇತಿ ಪೈಲಟ್​ ಕೂಡಲೇ ಪ್ಯಾರಾಚೂಟ್​ ಮೂಲಕ ತಮ್ಮ ಜೀವ ಉಳಿಸಿಕೊಂಡಿದ್ದಾರೆ.

ಹೀಗಾಗಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಬೆಂಗಳೂರಿನ ಹೆಚ್​ಎಎಲ್​ ಏರ್​ಪೋರ್ಟ್​ನಿಂದ ತೆರಳಿದ್ದ ವಿಮಾನ, ಭೋಗಪುರ ಬಳಿ ಪತಗೊಂಡಿದೆ. ಇನ್ನು ವಿಮಾನ ಛಿದ್ರ ಛಿದ್ರವಾಗಿದ್ದು, ಅದರ ಬಿಡಿ ಭಾಗಗಗಳು ಎಲ್ಲೆಂದರಲ್ಲಿ ಬಿದ್ದಿವೆ. ಅತ್ತ ನೆಲಕ್ಕೆ ಬಿದ್ದ ವಿಮಾನ ನುಜ್ಜು ನುಜ್ಜಾಗಿ ತುಂಡರಿಸಿ ಬಿದ್ದಿವೆ. ಪೈಲೆಟ್​​ಗಳನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಘಟನಾ ಸ್ಥಳಕ್ಕೆ ಸಂತೆಮರಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ