ಕೋಲಾರ: ಪೋಷಕರು ಡಾನ್ಸ್ ಕ್ಲಾಸ್‌ಗೆ (Dance Class) ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು (Young Woman) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಮನನೊಂದು ಯುವತಿ ಆತ್ಮಹತ್ಯೆ
ಕೋಲಾರ ಜಿಲ್ಲೆಯ ಬಂಗಾರಪೇಟೆ (Bangarapet) ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿನ್ನಕೋಟೆ ಗ್ರಾಮದ ಕೀರ್ತನಾ (18) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಇತ್ತೀಚೆಗೆ ಡಾನ್ಸ್‌ಗೆ ಹೋಗಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಾರೆ. ಈ ಹಿನ್ನೆಲೆ ಕೀರ್ತನಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಡಾನ್ಸ್ ಎಂದರೆ ತುಂಬಾ ಇಷ್ಟಪಡುತ್ತಿದ್ದ ಕೀರ್ತನಾ ಡಾನ್ಸ್ ಕ್ಲಾಸ್‌ಗೆ ಹೋಗಬೇಡ ಎಂದು ಹೇಳಿದ ಪೋಷಕರ ಮಾತಿನಿಂದ ಮನನೊಂದು ನೇಣಿಗೆ ಶರಣಾಗಿದ್ದಾಳೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವು
ರಾಮನಗರ, ಸೆ.21: ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಮನಗರ (Ramanagara) ತಾಲೂಕಿನ ಹೊಸೂರು ಗೊಲ್ಲಳ್ಳಿ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಕೌಶಿಕ್(12) ಮೃತ ರ್ದುದೈವಿ. 6ನೇ ತರಗತಿ ಓದುತ್ತಿದ್ದ ಕೌಶಿಕ್, ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ನೀರಿನ ಟ್ಯಾಂಕ್ಗೆ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿದು ಈ ದುರ್ಘಟನೆ ನಡೆದಿದೆ. ಘಟನೆಗೆ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿರುವ ಕೌಶಿಕ್ ಮೃತದೇಹ ಇಡಲಾಗಿದ್ದು, ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹಲವು ಬಾರಿ ಮನವಿ ಮಾಡಿದ್ದ ವಿದ್ಯಾರ್ಥಿಗಳು
ಈ ಹಿಂದೆ ವಿದ್ಯಾರ್ಥಿಗಳು ಹಲವು ಬಾರಿ ಮನವಿ ಮಾಡಿದ್ದರೂ, ಶಾಲಾ ಮಂಡಳಿ ಮಾತ್ರ ಇದಕ್ಕೆ ಕ್ಯಾರೆ ಅಂದಿರಲಿಲ್ಲ. ಇದೀಗ ಬೆಳಿಗ್ಗೆ ಸ್ನಾನಕ್ಕೆ ತೆರಳಿದಾಗ ಮೈಮೇಲೆ ಗೋಡೆ ಬಿದ್ದಿದೆ. ಇದರಿಂದ ಕೌಶಿಕ್ ತಲೆ ಮೇಲೆ ಬಲವಾದ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಈ ವೇಳೆ ಕೌಶಿಕ್ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.