ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

Twitter
Facebook
LinkedIn
WhatsApp
ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಬೀದರ್: ಮರಾಠಾ ಮೀಸಲಾತಿಗಾಗಿ ಮಹಾರಾಷ್ಟ್ರದಲ್ಲಿ (Maharastra) ಹೋರಾಟ ತೀವ್ರಗೊಂಡಿದೆ. ಕೆಎಸ್‍ಆರ್ ಟಿಸಿ ಬಸ್‍ಗೆ (KSRTC Bus) ಬೆಂಕಿಹಚ್ಚಿ ಮರಾಠಾ ಪುಂಡರು ಪುಂಡಾಟ ಮೆರೆದಿದ್ದಾರೆ.

ಮಹಾರಾಷ್ಟ್ರದ ಉಮ್ಮರ್ಗಾದ ತುರುರಿ ಬಳಿ ಬಸ್ ಹೊತ್ತಿ ಉರಿದಿದೆ. ಇದಕ್ಕೂ ಮುನ್ನ ಬಸ್‍ನ ಗ್ಲಾಸ್ ಹಾಗೂ ಕಿಟಕಿಗಳ ಗಾಜು ಪುಡಿಪುಡಿ ಮಾಡಿದ್ದಾರೆ. ಘಟನೆಯಲ್ಲಿ ಡ್ರೈವರ್, ಕಂಡಕ್ಟರ್ ಸೇರಿ ಬಸ್‍ನಲ್ಲಿದ್ದ 46 ಮಂದಿ ಪ್ರಯಾಣಿಕರು ಬಚಾವ್ ಆಗಿದ್ದಾರೆ.

ಈ ಬಸ್ ಬೀದರ್ (Bidar) ಜಿಲ್ಲೆ ಭಾಲ್ಕಿ ತಾಲೂಕಿನ ಡಿಪೋಗೆ ಸೇರಿದ್ದಾಗಿದೆ. ಭಾಲ್ಕಿಯಿಂದ ಪುಣೆಗೆ (Pune) ಹೊರಟಿತ್ತು. ಈ ವೇಳೆ ಕಿಡಿಗೇಡಿಗಳು ದುಷ್ಕೃತ್ಯ ಮೆರೆದಿದ್ದಾರೆ. ಇದು ಕನ್ನಡ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಮುಂಜಾಗ್ರತಾ ಕ್ರಮವಾಗಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮವು ಮಹಾರಾಷ್ಟ್ರಕ್ಕೆ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ಹೊರಡುವ ಬಸ್ ಸಂಚಾರಗಳೆಲ್ಲವನ್ನು ಬಂದ್ ಮಾಡಲಾಗಿದೆ. ಅಲ್ಲದೇ ಈಗಾಗಲೇ ಮಹಾರಾಷ್ಟ್ರ ವ್ಯಾಪ್ತಿಯೊಳಗಿರುವ ಬಸ್‍ಗಳು ಸಮೀಪದ ಡಿಪೋ ಇಲ್ಲವೇ ಪೊಲೀಸ್ ಠಾಣೆಯೊಳಗೆ ನಿಲ್ಲಿಸಲು ಕೆಕೆಆರ್ ಟಿಸಿ ಎಂಡಿ ರಾಚಪ್ಪ ಅವರು ತಮ್ಮ ನಿಗಮದ ಬಸ್ ಚಾಲಕ, ನಿರ್ವಾಹಕರಿಗೆ ಸೂಚನೆ ನೀಡಿದ್ದಾರೆ

ಬೀದರ್‌ನಲ್ಲಿ ಲೋಕಾ ದಾಳಿ – ಬೆಳ್ಳಂಬೆಳಗ್ಗೆ ಅರಣ್ಯ ಅಧಿಕಾರಿಗೆ ಶಾಕ್‌

ಬೀದರ್‌: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ಲೋಕಾಯುಕ್ತ ಪೊಲೀಸರು (Lokayukta Police)ದಾಳಿ ಮಾಡಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ.

ಬೀದರ್ ನಗರದ ಕೆಇಬಿ ರಸ್ತೆಯಲ್ಲಿರುವ ಅರಣ್ಯ ಇಲಾಖೆಯ (Forest Department) ಆರ್‌ಎಫ್‌ಓ ಬಸವರಾಜ್‌ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಒಂದು ವರ್ಷದಿಂದ ಬೀದರ್‌ ಅರಣ್ಯ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಆರ್‌ಎಫ್‌ಒ (RFO) ಆಗಿ ಕಾರ್ಯನಿರ್ವಸುತ್ತಿರುವ ಬಸವರಾಜ ಮೇಲೆ ಅಕ್ರಮ ಆಸ್ತಿಗಳಿಕೆ (Disproportionate Assets) ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

ಅರಣ್ಯ ಇಲಾಖೆಯ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದು ಕಲಬುರಗಿಯ ನಿವಾಸದ ಮೇಲೂ ದಾಳಿ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಕರ್ನೂಲ್ ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗಿದ್ದು ಲೋಕಾಯುಕ್ತ ಪೊಲೀಸರಿಂದ ಪರಿಶೀಲನೆ ಮುಂದುವರಿದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ