ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೆಲಂಗಾಣದಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಭಟನೆ!

Twitter
Facebook
LinkedIn
WhatsApp
ತೆಲಂಗಾಣದಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಭಟನೆ!

ಚಿಕ್ಕಬಳ್ಳಾಪುರ: ಕರ್ನಾಟಕದ ಕಾಂಗ್ರೆಸ್‌ ಗ್ಯಾರಂಟಿಗಳ (Congress Guarantee) ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಪಕ್ಷದ ಅಭ್ಯರ್ಥಿಯೊಬ್ಬರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ತೆಲಂಗಾಣದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಪ್ರತಿಭಟನೆ ನಡೆಸಿದ್ದಾರೆ.

ತೆಲಂಗಾಣದಲ್ಲಿ (Telangana) ಕಾಂಗ್ರೆಸ್‌ ಪರವಾಗಿ ಶಾಸಕ ಪ್ರದೀಪ್‌ ಈಶ್ವರ್‌ ಚುನಾವಣಾ ಪ್ರಚಾರದಲ್ಲಿದ್ದರು. ಇದರ ನಡುವೆಯೇ ತೆಲಂಗಾಣ ಸಚಿವ ಪ್ರತಾಪ್ ರೆಡ್ಡಿ ಸ್ವಗ್ರಾಮದ ವೆಲುಪುರದಲ್ಲಿ ಅಂಬೇಡ್ಕರ್‌ ಪ್ರತಿಮೆ ಎದುರು ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ಪ್ರದೀಪ್‌ ಈಶ್ವರ್‌ ಪ್ರತಿಭಟನೆ ನಡೆಸುತ್ತಿದ್ದಾರೆ.

ಶಾಸಕ ಪ್ರದೀಪ್‌ ಈಶ್ವರ್‌, ಬಾಲಕೊಂಡ ಕ್ಷೇತ್ರದಲ್ಲಿ ಚುನಾವಣಾ ಉಸ್ತುವಾರಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುತ್ಯಾಲ ಸುನೀಲ್ ಕುಮಾರ್ ಪರ ಪ್ರಚಾರ ನಡೆಸುತ್ತಿದ್ದಾರೆ. ಇದೇ ಕ್ಷೇತ್ರದ ಕೆಸಿಆರ್‌ ಪಕ್ಷದ ಅಭ್ಯರ್ಥಿ ಪ್ರತಾಪ್ ರೆಡ್ಡಿ ಅವರು ಕರ್ನಾಟಕದ ಕಾಂಗ್ರೆಸ್‌ ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡಿದ್ದರು. ಕರ್ನಾಟಕದಲ್ಲೇ ಕಾಂಗ್ರೆಸ್ ಗ್ಯಾರಂಟಿಗಳು ಅನುಷ್ಟಾನ ಆಗಿಲ್ಲ ಎಂದು ಪ್ರಚಾರ ಮಾಡಿದ್ದರು.

ಹೀಗಾಗಿ ಸಚಿವ ಪ್ರತಾಪ್ ರೆಡ್ಡಿ ವಿರುದ್ಧ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ. ರೆಡ್ಡಿ ವಿರುದ್ಧ ಕರ್ನಾಟಕದ ಶಾಸಕ ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಫ್ಲೈಟ್ ಟಿಕೆಟ್, ಕಾರು ಎಲ್ಲವೂ ಸಿದ್ಧವಾಗಿದೆ. ಬನ್ನಿ ಕರ್ನಾಟಕಕ್ಕೆ ಹೋಗೋಣ. ಕರ್ನಾಟಕದ ಯಾವುದಾದರೂ ಹಳ್ಳಿಗೆ ಹೋಗೋಣ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯಾಗಿಲ್ವಾ ಅಂತ ತೋರಿಸ್ತೀವಿ ಎಂದು ಧರಣಿಗೆ ಕುಳಿತಿರುವ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದಾರೆ.

ಸಹಿ ಯಾಕೆ ಮಾಡಬಾರದು? ಮಾಡಿದ್ರೆ ತಪ್ಪೇನು? – ಒಕ್ಕಲಿಗ ಸಂಘದ ಪತ್ರಕ್ಕೆ ಸಹಿ ಹಾಕಿದ್ದನ್ನು ಒಪ್ಪಿಕೊಂಡ ಡಿಕೆಶಿ

ಬೆಂಗಳೂರು: ಸಹಿ ಯಾಕೆ ಮಾಡಬಾರದು? ಮಾಡಿದರೆ ತಪ್ಪೇನು? ಅದು ನಮ್ಮ ಸಮಾಜದ ನಿರ್ಣಯ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಹೇಳಿದ್ದಾರೆ.

ಕಾಂತರಾಜು ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (Kantharaju Caste Census and Socio-Economic Survey) ವರದಿಯನ್ನು ಸರ್ಕಾರ ಸ್ವೀಕಾರ ಮಾಡದಂತೆ ಸಹಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಡಿಕೆಶಿ ಪ್ರತಿಕ್ರಿಯಿಸಿ ಸಹಿ ಹಾಕಿದ್ದನ್ನು ಒಪ್ಪಿಕೊಂಡರು.

ನಮ್ಮ ಸಮಾಜದ ನಿರ್ಣಯ ಬೇರೆ ರಾಜಕೀಯ ಬೇರೆ. ನಾನು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಿದ್ದೇವೆ. ಸಮಾಜದ ಮುಖಂಡರು ವೈಜ್ಞಾನಿಕವಾಗಿ ಆಗಬೇಕು ಎಂದು ಹೇಳಿದ್ದಾರೆ ಎಂದರು.

ಕಾಂತರಾಜು ವರದಿ ತಿರಸ್ಕರಿಸುವಂತೆ ಒಕ್ಕಲಿಗರ ಸಂಘದ (Vokkaliga Community) ಆಗ್ರಹ ಪತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಹಿ ಹಾಕಿದ್ದಾರೆ. ಡಿಸಿಎಂ ಮಾತ್ರವಲ್ಲದೇ ಕಾಂಗ್ರೆಸ್ (Congress) ಪಕ್ಷದ ಬಹುತೇಕ ಒಕ್ಕಲಿಗ ನಾಯಕರು, ಇತರೇ ಪಕ್ಷಗಳ ಪ್ರಮುಖರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.  

ನವೆಂಬರ್ 24ಕ್ಕೆ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಆಯೋಗ ವರದಿ ಸಲ್ಲಿಸಲು ನಿರ್ಧರಿಸಿರುವ ಈ ಹೊತ್ತಲೇ ನಿರೀಕ್ಷೆಯಂತೆ ಸರ್ಕಾರದ ಒಳಗೆ-ಹೊರಗಿನಿಂದ ಜಾತಿಗಣತಿ ವರದಿ ಕಿಚ್ಚು ಹಬ್ಬತೊಡಗಿದೆ.

ಒಕ್ಕಲಿಗ ಸಂಘದ ಪತ್ರಕ್ಕೆ ಸಹಿ ಹಾಕಿದ ಕಾಂಗ್ರೆಸ್‌ ನಾಯಕರು ಯಾರು?
* ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ
* ಚಲುವರಾಯಸ್ವಾಮಿ, ಸಚಿವ
* ರಾಮಲಿಂಗಾರೆಡ್ಡಿ, ಸಚಿವ
* ಎಂ.ಸಿ. ಸುಧಾಕರ್, ಸಚಿವ
* ಟಿ.ಬಿ. ಜಯಚಂದ್ರ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ
* ಶಿವಲಿಂಗೇಗೌಡ, ಶಾಸಕ
* ಎಂ. ಕೃಷ್ಣಪ್ಪ, ಶಾಸಕ
* ಶರತ್ ಬಚ್ಚೇಗೌಡ, ಶಾಸಕ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ