ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಮತ್ತು ಉತ್ತರ ಕನ್ನಡ ಸೇರಿದಂತೆ ರಾಜ್ಯದಲ್ಲಿ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ!

Twitter
Facebook
LinkedIn
WhatsApp
ಕರಾವಳಿ ಮತ್ತು ಉತ್ತರ ಕನ್ನಡ ಸೇರಿದಂತೆ ರಾಜ್ಯದಲ್ಲಿ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ!

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.

ಉಪ್ಪಿನಂಗಡಿಯಲ್ಲಿ ಹೆಚ್ಚು ಮಳೆಯಾಗಿದೆ, ಮದ್ದೂರು, ವಿರಾಜಪೇಟೆ, ಸರಗೂರು, ಚನ್ನಪಟ್ಟಣ, ಶಿಗ್ಗಾಂ, ಸಾಲಿಗ್ರಾಮ, ಹುಣಸೂರು, ಪೊನ್ನಂಪೇಟೆ, ಮಡಿಕೇರಿ, ಮಂಡ್ಯ, ಪುತ್ತೂರು, ಕೊಳ್ಳೇಗಾಲ, ನಾಪೋಕ್ಲು, ಮಂಡ್ಯ, ಮಡಿಕೇರಿ, ಪುತ್ತೂರು, ಮೂರ್ನಾಡು, ಕೊಟ್ಟಿಗೆಹಾರ, ಮಾಣಿ, ಮಂಗಳೂರು, ಬೆಂಗಳೂರು, ಶ್ರೀರಂಗಪಟ್ಟಣ, ಸುಳ್ಯ, ಭಾಗಮಂಡಲ, ಸೋಮವಾರಪೇಟೆ, ರಾಮನಗರದಲ್ಲಿ ಮಳೆಯಾಗಿದೆ.

ಕಲಬುರ್ಗಿಯಲ್ಲಿ 34.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ವಿಜಯಪುರದಲ್ಲಿ 18.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯ ಹಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ 3-4 ಡಿಗ್ರಿ ಸೆಲ್ಸಿಯಸ್​ನಷ್ಟು ಮತ್ತು ಕೆಲವು ಕಡೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಗರಿಷ್ಠ ತಾಪಮಾನ ಹೆಚ್ಚಾಗಲಿದೆ.

ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ನಿರೀಕ್ಷೆ ಇದೆ.

ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ