ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೋದಿ ಪ್ರಭಾವಕ್ಕೆ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವಿನತ್ತ ಮುನ್ನಡೆ...!

Twitter
Facebook
LinkedIn
WhatsApp
ಮೋದಿ ಪ್ರಭಾವಕ್ಕೆ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವಿನತ್ತ ಮುನ್ನಡೆ...!

ರಾಜಸ್ಥಾನ ವಿಧಾನಸಭಾ ಚುನಾವಣೆಯ (Rajasthan Results 2023) ಮತ ಎಣಿಕೆಯ ಮುನ್ನಡೆ ಪ್ರವೃತ್ತಿ ಲಭ್ಯವಾಗಿದ್ದು, ಬೆಳಗ್ಗೆ 9.30ರ ಹೊತ್ತಿಗೆ ಕಾಂಗ್ರೆಸ್‌ ಮತ್ತು ಬಿಜೆಪಿ (Congress-BJP fight) ನಡುವೆ ಕತ್ತುಕತ್ತಿನ ಹಣಾಹಣಿ ನಡೆಯುತ್ತಿದೆ ರಾಜಸ್ಥಾನದಲ್ಲಿ ಸದ್ಯ ಕಾಂಗ್ರೆಸ್‌ ಆಡಳಿತದಲ್ಲಿದೆ. ರಾಜಸ್ಥಾನದ ಜನರು ಪ್ರತಿ ಚುನಾವಣೆಯಲ್ಲೂ ಆಡಳಿತವನ್ನು ಬದಲಾವಣೆ ಮಾಡುವ ಪ್ರವೃತ್ತಿಯನ್ನು ಹೊಂದಿದ್ದಾರೆ. ಸದ್ಯದ ಟ್ರೆಂಡ್‌ ಅದನ್ನೇ ತೋರಿಸುತ್ತಿದೆ.

ರಾಜಸ್ಥಾನದಲ್ಲಿ 199 ಕ್ಷೇತ್ರಗಳಿದ್ದು ಬಿಜೆಪಿ 101 ಮತ್ತು ಕಾಂಗ್ರೆಸ್‌ 84 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. 14 ಕ್ಷೇತ್ರದಲ್ಲಿ ಇತರರು ಮುನ್ನಡೆಯಲ್ಲಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿಯ ವಸುಂಧರಾ ರಾಜೇ, ಕಾಂಗ್ರೆಸ್‌ನ ಸಚಿನ್‌ ಪೈಲಟ್‌ ಮುನ್ನಡೆಯಲ್ಲಿದ್ದಾರೆ.

ಇಲ್ಲಿ 14 ಕ್ಷೇತ್ರಗಳಲ್ಲಿ ಪಕ್ಷೇತರರು ಮತ್ತು ಇತರರು ಮುನ್ನಡೆಯಲ್ಲಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಇಲ್ಲಿ ಇವರೇ ನಿರ್ಣಾಯಕರಾಗುವ ಸಾಧ್ಯತೆ ಕಾಣಿಸುತ್ತಿದೆ.

ಮಧ್ಯಪ್ರದೇಶದಲ್ಲಿ ಮತ ಎಣಿಕೆ ಕಾರ್ಯವು (MP Election Results) ಭರದಿಂದ ಸಾಗುತ್ತಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿದ್ದು, ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ಗುರಿಯತ್ತ ಸಾಗುತ್ತಿದೆ. ಆದಾಗ್ಯೂ, ರಾಜ್ಯದಲ್ಲಿ ಕಾಂಗ್ರೆಸ್‌ ತೀವ್ರ ಪೈಪೋಟಿ ನೀಡುತ್ತಿದ್ದು, ಇನ್ನೂ ಒಂದೆರಡು ಗಂಟೆಗಳಲ್ಲಿ ವಿಧಾನಸಭೆ ಚುನಾವಣೆ (Madhya Pradesh Assembly Election 2023) ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಲಾಗುತ್ತಿದೆ.

ಯಾವ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಮುನ್ನಡೆ?

ಬಿಜೆಪಿ 118
ಕಾಂಗ್ರೆಸ್‌ 93
ಇತರೆ 4

 

ಮಧ್ಯಪ್ರದೇಶದಲ್ಲಿ ಒಟ್ಟು 230 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, ಮ್ಯಾಜಿಕ್‌ ನಂಬರ್‌ 116 ಆಗಿದೆ. ಈಗಾಗಲೇ ಬಿಜೆಪಿಯು 118 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಆರಂಭಿಕ ಹಂತದ ಟ್ರೆಂಡ್‌ ಆಗಿರುವುದರಿಂದ ಮುಂದಿನ ಒಂದೆರಡು ಗಂಟೆಗಳವರೆಗೆ ಸ್ಪಷ್ಟವಾಗಿ ಏನೂ ಹೇಳಲು ಆಗುವುದಿಲ್ಲ ಎಂದು ರಾಜಕೀಯ ತಜ್ಞರು ವಿಶ್ಲೇಷಣೆ ನಡೆಸಿದ್ದಾರೆ.

ಛತ್ತೀಸ್‌ಗಢ ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ (Chhattisgarh Election Results 2023) ಕಾಂಗ್ರೆಸ್ ಅನ್ನು ಹಿಂದಿಕ್ಕಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬೆಳಗ್ಗಿನ ಟ್ರೆಂಡ್‌ಗಳಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸಮಬಲ ತೋರಿಸಿದ್ದವು. 10 ಗಂಟೆಯ ಹೊತ್ತಿಗೆ ಬಿಜೆಪಿ ಮೇಲುಗೈ ಸಾಧಿಸಿತು.

ಆರಂಭಿಕ ಟ್ರೆಂಡ್‌ಗಳು ಎಕ್ಸಿಟ್ ಪೋಲ್ ಭವಿಷ್ಯವಾಣಿಗಳಿಗೆ ಅನುಗುಣವಾಗಿದ್ದವು. ಆಡಳಿತಾರೂಢ ಪಕ್ಷ ತನ್ನ ಪ್ರತಿಸ್ಪರ್ಧಿ ಬಿಜೆಪಿಗಿಂತ ತುಸು ಮೇಲುಗೈ ಸಾಧಿಸಿತ್ತು. ನಂತರದ ಟ್ರೆಂಡ್‌ಗಳಲ್ಲಿ ಬಿಜೆಪಿ 49 ಹಾಗೂ ಕಾಂಗ್ರೆಸ್‌ 38 ಸ್ಥಾನಗಳಲ್ಲಿ ಮುನ್ನಡೆ ತೋರಿಸಿದವು. ಛತ್ತೀಸ್‌ಗಢ ಅಸೆಂಬ್ಲಿ 90 ಸ್ಥಾನಗಳನ್ನು ಹೊಂದಿದೆ. ಅಂಚೆ ಮತಪತ್ರಗಳು ಚಲಾವಣೆಯಾದ ಒಟ್ಟು ಮತಗಳಲ್ಲಿ ಅತ್ಯಂತ ಕಡಿಮೆ ಶೇಕಡಾವಾರು ಪ್ರಮಾಣವನ್ನು ಹೊಂದಿವೆ.

ನಾಲ್ಕು ಎಕ್ಸಿಟ್ ಪೋಲ್‌ಗಳು ಕಾಂಗ್ರೆಸ್ ಬಹುಮತದ ಗೆರೆ 46 ಸ್ಥಾನ ದಾಟುತ್ತದೆ ಎಂದು ನಿರೀಕ್ಷಿಸಿದ್ದವು. ಇನ್ನೆರಡು ಪೋಲ್‌ಗಳು 42-44 ಮತ್ತು ಉಳಿದ ಮೂರು 40ಕ್ಕಿಂತ ಹೆಚ್ಚು ಸ್ಥಾನ ನೀಡಿದ್ದವು. ಒಂಬತ್ತು ಎಕ್ಸಿಟ್ ಪೋಲ್‌ಗಳಲ್ಲಿ ಎರಡು ಮಾತ್ರ ಬಿಜೆಪಿಗೆ ರಾಜ್ಯವನ್ನು ಗೆಲ್ಲಲು ಅಗತ್ಯವಿರುವ 46+ ಸ್ಥಾನ ದೊರೆಯಲಿದೆ ಎಂದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist