Mohammad Shami : ಪಾಕಿಸ್ತಾನವನ್ನು ನಿಂದಿಸುವುದು ನನ್ನ ರಕ್ತದಲ್ಲಿಯೇ ಇದೆ ; ಮೊಹಮ್ಮದ್ ಶಮಿ.!
ಟೀಮ್ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿ(Mohammed Shami) ಅವರು ಸಾದಾ ಜಗಳಕ್ಕೆ ಬರುವ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ. ಕ್ರಿಕೆಟ್ ಮೈದಾನದಲ್ಲಾಗಲಿ, ಸಾಮಾಜಿಕ ಮಾಧ್ಯಮವಾಗಲಿ ಪಾಕಿಸ್ತಾನವನ್ನು ಎದುರಿಸಲು ಮತ್ತು ನಿಂದಿಸಲು ಎಂದಿಗೂ ಹಿಂಜರಿಯುವುದಿಲ್ಲ. ಇದು ನನ್ನ ರಕ್ತದಲ್ಲಿಯೇ ಬಂದಿದೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ.
ಸುದ್ದಿವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ನಿರೂಪಕರೊಬ್ಬರು, ನೀವು ಪಾಕಿಸ್ತಾನವನ್ನು ಹೆಚ್ಚು ನಿಂದಿಸುತ್ತೀರಿ ಎಂದು ಹೇಳಿದರು. ಇದಕ್ಕೆ ತಕ್ಷಣ ಉತ್ತರ ನೀಡಿದ ಶಮಿ(Shami), ಇದು ನನ್ನ ರಕ್ತದಲ್ಲಿದೆ(“ವೋ ತೋ ಖೂನ್ ಮೇ ಹೈ) ಎಂದು ಹೇಳಿದ್ದಾರೆ.
ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿದ್ದ ಹಸನ್ ರಾಝಾ ಅವರಿಗೆ ಶಮಿ(Shami) ಅವರು ತಕ್ಕ ತಿರುಗೇಟು ನೀಡಿದ್ದರು. ಭಾರತ ತಂಡಕ್ಕೆ ಐಸಿಸಿ ಮತ್ತು ಬಿಸಿಸಿಐ(ICC And BCCI) ಸೇರಿಕೊಂಡು ವಿಶೇಷ ಚೆಂಡನ್ನು ನೀಡುತ್ತಿದೆ. ಹೀಗಾಗಿ ಶಮಿ(Shami) ಮತ್ತು ಉಳಿದ ಬೌಲರ್ಗಳು ವಿಕೆಟ್ ಈ ರೀತಿ ವಿಕೆಟ್ ಕೀಳುತ್ತಿದ್ದಾರೆ ಎಂದು ಹಸನ್ ರಾಝಾ ಹೇಳಿದ್ದರು. ಇದಕ್ಕೆ ತಿರಿಗೇಟು ನೀಡಿದ್ದ ಶಮಿ, ‘ಇದು ಗಲ್ಲಿ ಕ್ರಿಕೆಟ್ ಅಲ್ಲ. ವಿಶ್ವಕಪ್ ಟೂರ್ನಿ. ಇಲ್ಲಿ ಆಟಗಾರರಿಂದ ಇಂತಹ ಪ್ರದರ್ಶನಗಳೇ ಮೂಡಿ ಬರುವುದು” ಎಂದು ಶಮಿ ರಾಝಾಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು.
ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ತೋರಿ ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್ ಉರುಳಿಸಿ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್ ಕಿತ್ತ ಬೌಲರ್ ಎನಿಸಿಕೊಂಡಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ(Mohammad Shami) ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು.