ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೊಹಮ್ಮದ್ ಶಮಿಗೆ ಪಶ್ಚಿಮ ಬಂಗಾಳದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಪಕ್ಕಾ.?

Twitter
Facebook
LinkedIn
WhatsApp
ಮೊಹಮ್ಮದ್ ಶಮಿಗೆ ಪಶ್ಚಿಮ ಬಂಗಾಳದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಪಕ್ಕಾ.?

ಲೋಕಸಭೆ ಚುನಾವಣೆಗೆ(Lok Sabha Election 2024) ಎಲ್ಲ ಪಕ್ಷಗಳು ಭಾರೀ ತಯಾರಿ ನಡೆಸುತ್ತಿದೆ. ಈಗಾಗಲೇ ಬಿಜೆಪಿ ಮೊದಲ ಹಂತದಲ್ಲಿ ಪ್ರಬಲ ಅಭ್ಯರ್ಥಿಗಳ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಇದೀಗ ಟೀಮ್​ ಇಂಡಿಯಾದ ಸ್ಟಾರ್​ ವೇಗಿ ಮೊಹಮ್ಮದ್ ಶಮಿ(Mohammed Shami) ಕೂಡ ​ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.

ಹೌದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಿಂದ ಮೊಹಮ್ಮದ್ ಶಮಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಆಲೋಚಿಸುತ್ತಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮೂಲಗಳನ್ನು ಉದ್ದೇಶಿಸಿ ಇಂಡಿಯಾ ಟುಡೇ ವರದಿ ಮಾಡಿದೆ. ವರದಿಗಳ ಪ್ರಕಾರ, ಲೋಕಸಭೆ ಚುನಾವಣೆಯಲ್ಲಿ ಶಮಿ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ನಿಲ್ಲಿಸುವ ಪ್ರಸ್ತಾಪವನ್ನು ಭಾರತೀಯ ಜನತಾ ಪಕ್ಷದಲ್ಲಿ ಚರ್ಚಿಸಲಾಗಿದ್ದು, ಈಗಾಗಲೇ ಬಿಜೆಪಿಯ ಹಲವು ನಾಯಕರು ಮತ್ತು ಮುಖಂಡರು ಶಮಿಯನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಈ ಚರ್ಚೆ ಜೋರಾಗುತ್ತಿದ್ದಂತೆ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಶಮಿ ಅವರ ಭೇಟಿಯ ಫೋಟೊ ಒಂದು ವೈರಲ್​ ಆಗಿದೆ. ಆದರೆ, ಶಮಿ ಈ ವಿಚಾರದಲ್ಲಿ ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ.

ಮೋದಿ ಹಾರೈಕೆ ಶಮಿ ಅವರು ಏಕದಿನ ವಿಶ್ವಕಪ್​ ಬಳಿಕ ಗಾಯಗೊಂಡು ಇತ್ತೀಚೆಗೆ ಲಂಡನ್​ನಲ್ಲಿ ತಮ್ಮ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಫೋಟೊವನ್ನು ಮೊಹಮ್ಮದ್‌ ಶಮಿ ತಮ್ಮ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ಮೋದಿ, ‘ನೀವು ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ಉತ್ತಮ ಆರೋಗ್ಯವನ್ನು ಪಡೆಯಲು ಬಯಸುತ್ತೇವೆ.! ನೀವು ಧೈರ್ಯದಿಂದ ಈ ಗಾಯವನ್ನು ಜಯಿಸುತ್ತೀರಿ ಎಂದು ನನಗೆ ವಿಶ್ವಾಸವಿದೆ” ಎಂದು ಮೋದಿ ಹಾರೈಸಿದ್ದರು.

ರಾಮ ಮಂದಿರ, ಮೋದಿಗೆ ಬೆಂಬಲ ಸೂಚಿಸಿದ್ದ ಶಮಿ

ಶಮಿ ಕೂಡ ರಾಮ ಮಂದಿರ ಕಟ್ಟಿ ಜೈಶ್ರೀರಾಮ್​ ಕೂಗುವುದರಿಂದ ಯಾರಿಗೂ ತೊಂದರೆ ಇಲ್ಲ ಎಂದು ಹೇಳಿದ್ದರು. ಜತೆಗೆ ಮೋದಿ ಆಡಳಿತದ ಬಗ್ಗೆಯೂ ಶಮಿ ಬಹಿರಂಗವಾಗಿಯೇ ಮೆಚ್ಚುಗೆಯ ಮಾತುಗಳನ್ನಾಡಿದ್ದರು. “ನರೇಂದ್ರ ಮೋದಿ ಅವರು ದೇಶಕ್ಕಾಗಿ ದುಡಿಯುತ್ತಿದ್ದು, ಅವರ ಪರ ನಿಲ್ಲುತ್ತೇವೆ” ಎಂದು ಹೇಳಿದ್ದರು. ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಶಮಿ, “ನಾವು ನಮ್ಮ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕು. ಇದರಿಂದ ದೇಶವು ಏಳಿಗೆ ಹೊಂದುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಏಳಿಗೆಗಾಗಿ ದುಡಿಯುತ್ತಿದ್ದಾರೆ. ನಾವು ಕೂಡ ಅವರಿಗೆ ಬೆಂಬಲ ನೀಡಬೇಕು. ದೇಶದ ಪ್ರವಾಸೋದ್ಯಮದ ಏಳಿಗೆಗೆ ಕೈಜೋಡಿಸಬೇಕು” ಎಂದು ಹೇಳಿದ್ದರು.

ಈ ಎಲ್ಲ ಸನ್ನಿವೇಶಗಳನ್ನು ನೋಡುವಾಗ ಶಮಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಮಾನ ಕೂಡ ಮೂಡುತ್ತದೆ. ಶಮಿಯನ್ನು ಕಣಕ್ಕಿಳಿಸುವುದು ಬಂಗಾಳದ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಎನ್ನಲಾಗಿದೆ. ಉತ್ತರ ಪ್ರದೇಶ ಮೂಲದವರಾದರು ಶಮಿ ದೇಶೀಯ ಕ್ರಿಕೆಟ್​ನಲ್ಲಿ ಬಂಗಾಳವನ್ನು ಪ್ರತಿನಿಧಿಸುತ್ತಾರೆ. ಹೀಗಾಗಿ ಅವರಿಗೆ ಬಂಗಾಳದಲ್ಲಿಯೂ ಅಪಾರ ಸಂಖ್ಯೆಯ ಅಭಿಮಾನಿ ಬಳಗವಿದೆ. ಇದಲ್ಲದೆ ಬಂಗಾಳದಲ್ಲಿ ಬಿಜೆಪಿಗೆ ಇನ್ನೂ ಅಷ್ಟಾಗಿ ಪ್ರಾಬಲ್ಯ ಸಾಧಿಸಲು ಸಾಧ್ಯವಾಗಿಲ್ಲ. ಇದೀಗ ಶಮಿಯ ಮೂಲಕ ಈ ಪ್ರಾಬಲ್ಯ ಸಾಧಿಸಲು ಬಿಜೆಪಿ ಯೋಚಿಸುತ್ತಿದೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist