ಶನಿವಾರ, ಮೇ 18, 2024
ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಶಸ್ವಿ ಶಸ್ತ್ರ ಚಿಕಿತ್ಸೆಗೆ ಒಳಗಾದ ಮಹಮ್ಮದ್ ಶಮಿ; ಫೋಟೋ ಮೂಲಕ ಟ್ವೀಟರ್ ನಲ್ಲಿ ಪೋಸ್ಟ್..!

Twitter
Facebook
LinkedIn
WhatsApp
ಯಶಸ್ವಿ ಶಸ್ತ್ರ ಚಿಕಿತ್ಸೆಗೆ ಒಳಗಾದ ಮಹಮ್ಮದ್ ಶಮಿ; ಫೋಟೋ ಮೂಲಕ ಟ್ವೀಟರ್ ನಲ್ಲಿ ಪೋಸ್ಟ್..!

ಭಾರತ ಕ್ರಿಕೆಟ್‌ ತಂಡದ ಅನುಭವಿ ವೇಗಿ, ಕಳೆದ ವಿಶ್ವಕಪ್‌ ಟೂರ್ನಿಯಲ್ಲಿ (World Cup 2023) ಮೊನಚಾದ ಪ್ರದರ್ಶನದ ಮೂಲಕವೇ ದೇಶದ ಗಮನ ಸೆಳೆದಿದ್ದ ಮೊಹಮ್ಮದ್‌ ಶಮಿ (Mohammed Shami) ಅವರು ಲಂಡನ್‌ನಲ್ಲಿ ಎಡಪಾದದ ಶಸ್ತ್ರಚಿಕಿತ್ಸೆಗೆ (Surgery) ಒಳಗಾಗಿದ್ದಾರೆ. ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕುರಿತು ಮೊಹಮ್ಮದ್‌ ಶಮಿ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಅಭಿಮಾನಿಗಳಿಗೆ ಸಂದೇಶವನ್ನೂ ರವಾನಿಸಿದ್ದಾರೆ.

“ನಾನು ಯಶಸ್ವಿಯಾಗಿ ಪಾದದ ಸ್ನಾಯುರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಸಂಪೂರ್ಣವಾಗಿ ಗುಣಮುಖನಾಗಲು ಒಂದಷ್ಟು ಸಮಯ ಬೇಕಾಗುತ್ತದೆ. ಆದರೆ, ಶೀಘ್ರದಲ್ಲೇ ಗುಣಮುಖನಾಗುವ ವಿಶ್ವಾಸವಿದೆ” ಎಂದು ಫೋಟೊಗಳ ಸಮೇತ ಮೊಹಮ್ಮದ್‌ ಶಮಿ ಪೋಸ್ಟ್‌ ಮಾಡಿದ್ದಾರೆ. ಇವರ ಪೋಸ್ಟ್‌ಗೆ ಸಾವಿರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದು, ಶೀಘ್ರವೇ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದಾರೆ.

ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ತಮ್ಮ ಮೊನಚಾದ ಬೌಲಿಂಗ್​ ದಾಳಿಯಿಂದ ತಂಡಕ್ಕೆ ಹಲವು ಗೆಲುವು ತಂದುಕೊಟ್ಟಿದ್ದರು. ಆರಂಭಿಕ ಮೂರು ಪಂದ್ಯಗಳಲ್ಲಿ ಆಡುವ ಅವಕಾಶ ಸಿಗದಿದ್ದರೂ, ಆ ಬಳಿಕ ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ ಎನಿಸಿಕೊಂಡಿದ್ದರು. ವಿಶ್ವಕಪ್​ ಬಳಿಕ ಶಮಿ ಗಾಯದ ಸಮಸ್ಯೆಯಿಂದ ಭಾರತ ಪರ ಆಡಿಲ್ಲ.

ಐಪಿಎಲ್‌ನಿಂದ ಹೊರಗೆ? ಶಮಿ ಅವರು ವಿಶ್ವಕಪ್ ವೇಳೆಯೇ ಪಾದದ ನೋವಿನಿಂದ ಬಳಲುತ್ತಿದ್ದರು. ಆದರೆ ಅವರು ಈ ಗಾಯಕ್ಕೆ ಚುಚ್ಚು ಮದ್ದು ತೆಗೆದುಕೊಂಡು ದೇಶಕ್ಕಾಗಿ ಆಡಿದ ವಿಚಾರ ತಡವಾಗಿ ಬೆಳಕಿಗೆ ಬಂದಿತ್ತು. ಇದಕ್ಕೆ ದೇಶವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಅವರು ಲಂಡನ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು ಮುಂದಿನ ತಿಂಗಳು ಆರಂಭಗೊಳ್ಳಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ. ಆದರೆ ಬಿಸಿಸಿಐ ಯಾವುದೇ ಅಧಿಕೃತ ಮಾಹಿತಿಯನ್ನು ಇದುವರೆಗೆ ನೀಡಿಲ್ಲ.

ಮೊಹಮ್ಮದ್ ಶಮಿ ಅವರು ಗುಜರಾತ್​ ಟೈಟಾನ್ಸ್​ ತಂಡದ ಆಟಗಾರನಾಗಿದ್ದು ಈ ಬಾರಿ ತಂಡವನ್ನು ಶುಭಮನ್​ ಗಿಲ್​ಮುನ್ನಡೆಸುತ್ತಿದ್ದಾರೆ. ಈ ಹಿಂದೆ ನಾಯಕನಾಗಿದ್ದ ಹಾರ್ದಿಕ್​ ಪಾಂಡ್ಯ ಮುಂಬೈ ತಂಡ ಸೇರಿದ್ದಾರೆ. ಉತ್ತಮ ಬೌಲಿಂಗ್​ ಫಾರ್ಮ್​ನಲ್ಲಿದ್ದ ಶಮಿ ಅವರು ಐಪಿಎಲ್​ನಿಂದ ಹಿಂದೆ ಸರಿದರೆ ಗುಜರಾತ್​ ತಂಡಕ್ಕೆ ಭಾರಿ ಹಿನ್ನಡೆಯಾಗುವುದು ಖಚಿತ. ಏಕೆಂದರೆ ಅನುಭವಿಯಾಗಿ ತಂಡದಲ್ಲಿದ್ದ ಏಕೈಕ ವೇಗಿ ಅವರಾಗಿದ್ದರು.​

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ