ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಮ್ಮನ ಎದೆಹಾಲು ಕುಡಿದು ಮಲಗಿದ್ದ 3 ತಿಂಗಳ ಮಗು ಮೃತ್ಯು!

Twitter
Facebook
LinkedIn
WhatsApp
ಅಮ್ಮನ ಎದೆಹಾಲು ಕುಡಿದು ಮಲಗಿದ್ದ 3 ತಿಂಗಳ ಮಗು ಮೃತ್ಯು!

ತಿರುವನಂತಪುರಂ: ಅಮ್ಮನ ಎದೆಹಾಲು (Breast Milk) ಕುಡಿದು ಮಲಗಿದ್ದ ಮೂರು ತಿಂಗಳ ಪುಟ್ಟ ಕಂದಮ್ಮ ಮೃತಪಟ್ಟ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ.

ಜಯಕೃಷ್ಣನ್ ಹಾಗೂ ಜನಿಮೋಲ್ ದಂಪತಿಯ ಮಗ ಜಿತೇಶ್ ಮೃತ ದುರ್ದೈವಿ ಕಂದಮ್ಮ. ಮಗುವಿಗೆ ಹಾಲುಣಿಸಿ ನಿದ್ದೆ ಮಾಡುತ್ತಿದ್ದಂತೆಯೇ ಇತ್ತ ಜನಿಮೋಲ್ ಕೂಡ ನಿದ್ದೆಗೆ ಜಾರಿದ್ದಾರೆ. ಆದರೆ ಮರುದಿನ ಮಗು ಮುಂಜಾನೆ ಎದ್ದೇಳದನ್ನು ಅರಿತ ದಂಪತಿ ಕೂಡಲೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ವೈದ್ಯರ ಬಳಿ ಮಗುವನ್ನು ತೋರಿಸಿದ ದಂಪತಿ ಎಷ್ಟು ಕರೆದರೂ ಮಗು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಅಲವತ್ತುಕೊಂಡಿದ್ದಾರೆ. ಬಳಿಕ ಪರೀಕ್ಷೆ ನಡೆಸಿದ ವೈದ್ಯರು ಮಗುವಿನ ಹೃದಯಬಡಿತದಲ್ಲಿ ವ್ಯತ್ಯಾಸವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದಾರೆ. ಅಂತೆಯೇ ಪೋಷಕರು ಎಸ್‍ಐಟಿ ಆಸ್ಪತ್ರೆಗೆ ಕರೆದುಕೊಮಡು ಹೋಗಿದ್ದಾರೆ. ಅಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

ಮಗು ಸಾವನ್ನಪ್ಪಿರುವ ಆಘಾತಕಾರಿ ವಿಚಾರವನ್ನು ಕಂದಮ್ಮನ ಪೋಷಕರಿಗೆ ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಎದೆಹಾಲು ಮಗುವಿನ ಶ್ವಾಸನಾಳದಲ್ಲಿ ಸಿಲುಕಿಕೊಂಡು ಉಸಿರಾಡಲು ಕಷ್ಟವಾಗಿ ಮಗು ಮೃತಪಟ್ಟಿರುವುದಾಗಿ ವಿವರಿಸಿದ್ದಾರೆ.

ತೆಲಂಗಾಣದಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ಐವರ ಸಾವು

ಹೈದರಾಬಾದ್: ಲಾರಿ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಬುಧವಾರ ಬೆಳಗ್ಗೆ ತೆಲಂಗಾಣದ (Telangana) ವಾರಂಗಲ್‍ನ (Warangal) ಯೆಲ್ಲಂಡ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ (Accident) ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

ಅಪಘಾತಕ್ಕೀಡಾದ ಆಟೋದಲ್ಲಿದ್ದವರು ಜೇನು ಸಂಗ್ರಹಿಸಲು ಕಾಡಿಗೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಲಾರಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ ಸೇರಿದಂತೆ ಮೃತರ ಶವಗಳು ಛಿದ್ರಗೊಂಡಿದ್ದು, ಯಾರ ಗುರುತು ಪತ್ತಿಯಾಗಿಲ್ಲ ಎಂದು ವರ್ಧನ್ನಪೇಟೆ ಪೊಲೀಸರು ತಿಳಿಸಿದ್ದಾರೆ.

ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಲಾರಿ ಚಾಲಕ ಮದ್ಯ ಸೇವಿಸಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ