ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಮುಂಗಾರು ಚುರುಕು ; ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸಾಧ್ಯತೆ!

Twitter
Facebook
LinkedIn
WhatsApp
images 18

ರಾಜ್ಯಾದ್ಯಂತ ಮುಂಗಾರು(Monsoon) ದುರ್ಬಲಗೊಂಡಿದೆ, ಆದರೂ ಒಂದು ದಿನ ಮಳೆ(Rain) ಬಂದರೆ ಮತ್ತೊಂದು ದಿನ ಬಿಡುವು ಪಡೆದುಕೊಳ್ಳುತ್ತಿದೆ. ಬಿಟ್ಟೂ ಬಿಟ್ಟು ಬರುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 2ರವರೆಗೂ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.ಬಸವಕಲ್ಯಾಣ, ಮಂಗಳೂರು, ಕೋಟ, ಕುಂದಾಪುರ, ಅಂಕೋಲಾ, ಕ್ಯಾಸಲ್​ರಾಕ್, ಕೊಟ್ಟಿಗೆಹಾರ, ಉಡುಪಿ, ಕಾರ್ಕಳ, ಕಾರವಾರ, ಗುಂಜಿ, ಪುತ್ತೂರು, ಧರ್ಮಸ್ಥಳ, ಸುಬ್ರಹ್ಮಣ್ಯ, ಸಿದ್ದಾಪುರ, ಹೊನ್ನಾವರ, ಗೋಕರ್ಣ, ಬೇಲಿಕೇರಿ, ಲೋಂಡಾ, ಕಲಘಟಗಿ, ಭಾಲ್ಕಿ, ನಿಟ್ಟೂರು, ಸಕಲೇಶಪುರದಲ್ಲಿ ಮಳೆಯಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ