ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿಯಲ್ಲಿ ಹಿಂಗಾರು ಮಳೆ ಚುರುಕು ; 4 ದಿನಗಳ ಕಾಲ ಗುಡುಗು ಸಹಿತ ಮಳೆ ಮುನ್ಸೂಚನೆ!

Twitter
Facebook
LinkedIn
WhatsApp
ಕರಾವಳಿಯಲ್ಲಿ ಹಿಂಗಾರು ಮಳೆ ಚುರುಕು ; 4 ದಿನಗಳ ಕಾಲ ಗುಡುಗು ಸಹಿತ ಮಳೆ ಮುನ್ಸೂಚನೆ!

ಮಂಗಳೂರು ನವೆಂಬರ್ 05 : ಕರಾವಳಿಯಲ್ಲಿ ಹಿಂಗಾರು ಮಳೆ ಮುಂದುವರಿದಿದ್ದು, ನವೆಂಬರ್ 7ರವರೆಗೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಸಂಜೆ ಬಳಿಕ ಗುಡುಗು, ಸಿಡಿಲು, ಮಿಂಚು ಸಹಿತ ಸಾಧಾರಣ ಮಳೆ ಸುರಿಯುತ್ತಿದೆ.

ಶುಕ್ರವಾರ ರಾತ್ರಿ ಕೂಡ ದ.ಕ.ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಗುಡುಗು, ಮಿಂಚಿನ ಮಳೆಯಾಗಿದೆ. ಅಪರಾಹ್ನ ಮಂಗಳೂರು ಮಾತ್ರವಲ್ಲ ಗ್ರಾಮಾಂತರಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ನವೆಂಬರ್ 5ರಿಂದ ನವೆಂಬರ್ 7ರ ವರೆಗೆ ದ.ಕ.ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆ ನಿರೀಕ್ಷಿಸಲಾಗಿದೆ.

ಕಡಬ ಗರಿಷ್ಠ ಮಳೆ: ಶನಿವಾರ ಬೆಳಗ್ಗಿನ ವರೆಗೆ ದ.ಕ.ಜಿಲ್ಲೆಯ ಕಡಬದಲ್ಲಿ ಗರಿಷ್ಠ 52.2 ಮಿಲಿ ಮೀಟರ್ ಮಳೆಯಾಗಿದ್ದು, ದಿನದ ಸರಾಸರಿ ಮಳೆ 28.8 ಮಿ.ಮೀ. ಆಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ 27.2 ಮಿ.ಮೀ, ಬಂಟ್ವಾಳ 17.5 ಮಿ.ಮೀ, ಮಂಗಳೂರು ತಾಲೂಕಿನಲ್ಲಿ 8.3 ಮಿ.ಮೀ, ಪುತ್ತೂರು 36.4 ಮಿ.ಮೀ, ಸುಳ್ಯ 36.9 ಮೂಡುಬಿದಿರೆ 15.4 ಮಿ.ಮೀ, ಮೂಲ್ಕಿ 7.4 ಮಿ.ಮೀ, ಉಳ್ಳಾಲ 9.2 ಮಿ.ಮೀ. ಮಳೆ ದಾಖಲಾಗಿದೆ.

ರಾಜ್ಯದ ಹವಾಮಾನ ವರದಿ: 06-11-2023

ರಾಜ್ಯದಲ್ಲಿ ಇನ್ನು 2 ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಜೋರು ಮಳೆ ಸುರಿಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಗುಡುಗು ಮಿಂಚು ಸಹಿತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 31-25
ಶಿವಮೊಗ್ಗ: 29-21
ಬೆಳಗಾವಿ: 30-21
ಮೈಸೂರು: 28-21

ಮಂಡ್ಯ: 28-21
ಮಡಿಕೇರಿ: 23-17
ರಾಮನಗರ: 28-21
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-18

ಕೋಲಾರ: 27-21
ತುಮಕೂರು: 27-21
ಉಡುಪಿ: 31-24
ಕಾರವಾರ: 31-26
ಚಿಕ್ಕಮಗಳೂರು: 26-19
ದಾವಣಗೆರೆ: 30-21

ಹುಬ್ಬಳ್ಳಿ: 29-21
ಚಿತ್ರದುರ್ಗ: 29-21
ಹಾವೇರಿ: 30-22
ಬಳ್ಳಾರಿ: 29-22
ಗದಗ: 29-22
ಕೊಪ್ಪಳ: 30-22

ರಾಯಚೂರು: 31-23
ಯಾದಗಿರಿ: 33-23
ವಿಜಯಪುರ: 33-22
ಬೀದರ್: 31-21
ಕಲಬುರಗಿ: 33-22
ಬಾಗಲಕೋಟೆ: 33-23

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ