ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೂನ್ 4 ರಂದು ಕೇರಳಕ್ಕೆ ಪ್ರವೇಶಿಸಲಿದೆ ಮುಂಗಾರು ; ಮಾನ್ಸೂನ್ ಮುನ್ನವೇ ಕರ್ನಾಟಕದಲ್ಲೂ ಮಳೆ ಸಾಧ್ಯತೆ!

Twitter
Facebook
LinkedIn
WhatsApp
mcms

ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೈಋತ್ಯ ಮಾನ್ಸೂನ್ ಪ್ರತಿ ಬಾರಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.

ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮುಂಗಾರು ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1 ರಂದು ದೇವರ ನಾಡು ದಕ್ಷಿಣ ರಾಜ್ಯ ಪ್ರವೇಶಿಸಿತ್ತು.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಶಿಗ್ಗಾಂವಿ, ತರೀಕೆರೆ, ಸುಬ್ರಹ್ಮಣ್ಯ, ಮಂಚಿಕೆರೆ, ಲೋಂಡಾ, ಸವಣೂರು, ಕಡೂರು, ಬಾಳೆಹೊನ್ನೂರು, ಸುತ್ತೂರು, ಆನವಟ್ಟಿ, ಶಿವಮೊಗ್ಗ, ಮಲವಳ್ಳಿ, ಲೋಕಾಪುರ, ಸಂಕೇಶ್ವರ, ಹಾವೇರಿ, ಗದಗ, ಮುದಗಲ್, ಧಾರವಾಡ, ಕೆಂಭಾವಿ, ಚನ್ನಗಿರಿ, ರಾಮನಗರ, ಅಜ್ಜಂಪುರ, ಮದ್ದೂರು, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು ಯಾವುದೇ ಸಂದರ್ಭದಲ್ಲಿ ಮಳೆಯಾಗಬಹುದು ಎಂದು ನಿರೀಕ್ಷಿಲಾಗಿದೆ. ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ