ಮೂಡುಬಿದಿರೆ : ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಮದುವೆಯಾಗಿ ಕೇರಳದಲ್ಲಿ ಪತ್ತೆ.!
Twitter
Facebook
LinkedIn
WhatsApp
ಮೂಡುಬಿದಿರೆ: ಮೂಡುಬಿದಿರೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಕೇರಳದಲ್ಲಿ ಮದುವೆಯಾಗಿ ಪತ್ತೆಯಾಗಿದ್ದಾಳೆ. ಮೂಡುಬಿದಿರೆಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ವರ್ಷದ ಬಿಪಿಟಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿ ಆದಿರಾ ಶುಕ್ರವಾರ ನಾಪತ್ತೆಯಾಗಿದ್ದರು.
ಇದೀಗ ಕೇರಳದಲ್ಲಿ ಮದುವೆಯಾಗಿ ಪತ್ತೆಯಾಗಿದ್ದಾರೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ(19) ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್‌ನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿದ್ದರು. ಬಳಿಕ ಕಾಲೇಜಿಗೆ ಹೋಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಆಕೆಯ ಹೆತ್ತವರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದರು.
ಈಕೆ ಹಾಸ್ಟೆಲ್‌ನಲ್ಲಿ ವಾಸವಾಗಿ ಶಿಕ್ಷಣ ಪಡೆಯುತ್ತಿದ್ದರು. ಇದೀಗ ಬೈಂದೂರಿನ ನಿವಾಸಿಯಾಗಿರುವ ಪ್ರಿಯಕರನನ್ನು ಮದುವೆಯಾಗಿ ಪತ್ತೆಯಾಗಿದ್ದಾರೆ.