ಮೂಡಬಿದ್ರೆ : ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಯುವಕ ಸ್ಥಳದಲ್ಲೇ ಸಾವು
ಮೂಡುಬಿದಿರೆ: ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.6ರ ರಾತ್ರಿ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ.
ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ದುರ್ಘಟನೆಯಲ್ಲಿ ಮೃತಪಟ್ಟ ಯುವಕ. ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ತನ್ನ ಜುಪಿಟರ್ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೆಳ್ತಂಗಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಬರುತ್ತಿದ್ದ ಕಾರು ಕಲ್ಲಬೆಟ್ಟು ಬಳಿ ಢಿಕ್ಕಿ ಹೊಡೆದಿದೆ.
ಆಗ ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟ ಪ್ರದೀಪ್ ಅವರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದ್ದು ಸ್ಥಳದಲ್ಲೇ ಆಸು ನೀಗಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮೃತ ಪ್ರದೀಪ್ ಅವರು ಇಂದು ತನ್ನ 39 ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವವರಿದ್ದರು. ಆದರೆ ವಿಧಿ ಇದಕ್ಕೆ ಅವಕಾಶವನ್ನು ನೀಡದೆ ಹಿಂದಿನ ದಿನವೇ ತನ್ನತ್ತ ಬರಮಾಡಿಕೊಂಡಿದೆ.
ಜಪ್ಪು ಮಾರ್ನಮಿಕಟ್ಟೆಯಲ್ಲಿ ಸರಣಿ ಅಪಘಾತ- ಚಾಲಕ ಪೊಲೀಸ್ ವಶಕ್ಕೆ..!
ಮಂಗಳೂರು: ಮಂಗಳೂರು ನಗರದ ಜಪ್ಪು ಮಾರ್ನಮಿಕಟ್ಟೆಯಲ್ಲಿ ಬುಧವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದ್ದು, ಮೂರು ಕಾರು ಮತ್ತು ಒಂದು ಸ್ಕೂಟರ್ ಜಖಂಗೊಂಡಿವೆ. ಘಟನೆಗೆ ಸಂಬಂಧಿಸಿ ಓರ್ವ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇರಳ ನೊಂದಾಯಿತ ಕಾರನ್ನು ಅದರ ಚಾಲಕ ಅತಿ ವೇಗ ಹಾಗೂ ಅಜಾಗ್ರತೆಯಿಂದ ಚಲಾಯಿಸಿಕೊಂಡು ಬಂದು ಎದುರಿನಿಂದ ಬರುತ್ತಿದ್ದ ಎರಡು ಕಾರು ಹಾಗೂ ಒಂದು ಸ್ಕೂಟರ್ ಗೆ ಢಿಕ್ಕಿ ಹೊಡೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಕೇರಳ ನೊಂದಾಯಿತ ಕಾರಿನ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕಾರು ಚಾಲಕ ಮದ್ಯಪಾನ ಸೇವಿಸಿದ್ದನೆಂಬ ಆರೋಪ ಕೇಳಿ ಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.