ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ 9 ತಿಂಗಳ ಹಸುಗೂಸು ಸ್ಥಳದಲ್ಲೇ ಸಾವು!

Twitter
Facebook
LinkedIn
WhatsApp
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ 9 ತಿಂಗಳ ಹಸುಗೂಸು ಸ್ಥಳದಲ್ಲೇ ಸಾವು!

ಬೆಂಗಳೂರಿನಲ್ಲಿ ನಿನ್ನೆ ಬೆಳ್ಳಂ ಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಬೆಸ್ಕಾಂ ಸಿಬ್ಬಂದಿ (BESCOM) ನಿರ್ಲಕ್ಷ್ಯಕ್ಕೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ (Death). ಬೆಂಗಳೂರಿನ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ತಾಯಿ ಸೌಂದರ್ಯ(23), 9 ತಿಂಗಳ ಮಗು ಲೀಲಾ ಮೃತಪಟ್ಟ ತಾಯಿ-ಮಗು. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ

ಮೃತ ಸೌಂದರ್ಯ ತಮ್ಮ ಮಗುವಿನ ಜೊತೆಗೆ ತಮಿಳುನಾಡಿನಿಂದ ಬೆಂಗಳೂರಿನ ಮನೆಗೆ ವಾಪಸ್ ಆಗುತ್ತಿದ್ದರು. ಮುಂಜಾನೆ 5 ಗಂಟೆಗೆ ಮನೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಮುಂಜಾನೆ 5 ಗಂಟೆ ವೇಳೆ ಕತ್ತಲಿದ್ದ ಕಾರಣ ರಸ್ತೆ ಬದಿ ಕಟ್ ಆಗಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್​​ ವೈಯರ್​​​ ಕಾಣಿಸದೇ ತುಳಿದಿದ್ದಾರೆ. ಈ ವೇಳೆ ಕರೆಂಟ್ ಶಾಕ್ ಹೊಡೆದು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 304ಎ ಅಡಿ ಪ್ರಕರಣ ದಾಖಲಾಗಿದೆ. ಎಇ ಚೇತನ್‌, ಜೆಇ ರಾಜಣ್ಣ, ಬೆಸ್ಕಾಂ ಸ್ಟೇಷನ್ ಆಪರೇಟರ್ ಮಂಜು ಸೇರಿ ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇನ್ನು ಮೃತ ಸೌಂದರ್ಯ ಕಾಡುಗೋಡಿಯ ಎ.ಕೆ.ಗೋಪಾಲ್ ಕಾಲೋನಿಯ ನಿವಾಸಿ. ಬೆಂಗಳೂರಿನ ಸೌಂದರ್ಯರನ್ನು ಚೆನ್ನೈಗೆ ಮದುವೆ ಮಾಡಿಕೊಡಲಾಗಿತ್ತು. ದೀಪಾವಳಿ ಹಬ್ಬ ಆಚರಿಸಲು ಗಂಡ, ಹೆಂಡತಿ, ಮಗು ಊರಿಗೆ ಹೋಗಿದ್ದರು. ಇಂದು ಮುಂಜಾನೆ ಊರಿನಿಂದ ಹಸುಗೂಸು ಜೊತೆ ದಂಪತಿ ಬೆಂಗಳೂರಿಗೆ ಬಂದಿದ್ದಾರೆ. 

ಬಸ್ ಇಳಿದು ಮನೆಗೆ ನಡೆದು ಹೋಗುವಾಗ ರಸ್ತೆಯಲ್ಲಿ ತಂತಿ ತುಂಡಾಗಿ ಬಿದ್ದಿದ್ದನ್ನು ನೋಡದೆ ತಂತಿ ಮೇಲೆ ಸೌಂದರ್ಯ ಕಾಲಿಟ್ಟಿದ್ದಾರೆ. ಇದರಿಂದ ವಿದ್ಯುತ್ ಶಾಕ್ ಹೊಡೆದು ಬೆಂಕಿ ಹತ್ತಿಕೊಂಡಿದ್ದು ಪತಿ ಎದುರೇ ಪತ್ನಿ ಹಾಗೂ 9 ತಿಂಗಳ ಹಸುಗೂಸು ಸಜೀವದಹನವಾಗಿದ್ದಾರೆ. ಬೆಸ್ಕಾಂಗೆ ಕರೆ ಮಾಡಿ ಒಂದು ಗಂಟೆಯಾದ್ರೂ ಸ್ಥಳಕ್ಕೆ ಯಾರೂ ಬಂದಿಲ್ಲ. ಸೂಕ್ತ ಸಮಯಕ್ಕೆ ಸ್ಥಳೀಯ ನಿವಾಸಿಗಳೂ ಸಹಾಯಕ್ಕೆ ಬಂದಿಲ್ಲ. ಇದರಿಂದ ಕಣ್ಣ ಮುಂದೆ ಹೆಂಡತಿ, ಮಗು ಪ್ರಾಣಬಿಟ್ಟರೂ ಏನು ಮಾಡಲಾಗದ ಸ್ಥಿತಿಯಲ್ಲಿ ಸಂತೋಷ್ ಇದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ