ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

MRPL ಉದ್ಯೋಗದಲ್ಲಿ ಕರಾವಳಿ ಜನತೆಗೆ ಆದ ಅನ್ಯಾಯ ವನ್ನು ಲೋಕಸಭೆಯಲ್ಲಿ ಪ್ರಶ್ನಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ

Twitter
Facebook
LinkedIn
WhatsApp
MRPL ಉದ್ಯೋಗದಲ್ಲಿ ಕರಾವಳಿ ಜನತೆಗೆ ಆದ ಅನ್ಯಾಯವನ್ನು  ಲೋಕಸಭೆಯಲ್ಲಿ ಪ್ರಶ್ನಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ

ನವದೆಹಲಿ: ಮಂಗಳೂರಿನ MRPL ಕಂಪನಿಯಲ್ಲಿ ಉದ್ಯೋಗಾವಕಾಶಗಳು ಸ್ಥಳೀಯರಿಗೆ ನೀಡದೆ ಹೊರಗಿನವರಿಗೆ ನೀಡುತ್ತಿರುವ ವಿಷಯವನ್ನು ಸಂಸದ ಪ್ರಜ್ವಲ್ ರೇವಣ್ಣ ಬುಧವಾರ ಸಂಸತ್ ನಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ಮಗಳೂರಿನ ಎಂ.ಆರ್.ಪಿ. ಎಲ್ ನ ಉದ್ಯೋಗವನ್ನು ಸ್ಥಳೀಯರಿಗೆ ನೀಡುವಂತೆ ಇತ್ತೀಚೆಗೆ ದಕ್ಷಿಣ ಕನ್ನಡದಲ್ಲಿ ಪ್ರತಿಭಟನೆ ನಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ? ಎಂಆರ್ ಪಿಎಲ್ ನಲ್ಲಿ ಇರುವ ಉದ್ಯೋಗಗಳು ಮತ್ತು ಸ್ಥಳೀಯರಿಗೆ ನೀಡಿರುವ ಉದ್ಯೋಗ ವಿವರಗಳನ್ನು ನೀಡಿ ಎಂದು ಹಾಸನ ಸಂಸದ ಪ್ರಜ್ವಲ್ ಸದನದಲ್ಲಿ ಪ್ರಶ್ನೆ ಕೇಳಿದ್ದಾರೆ.
ಸಾರ್ವಜನಿಕ ಉದ್ಯಮಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂಬ ನಿಯಮಗಳಿವೆಯೇ?. ಇದ್ದರೆ ಎಂಆರ್ ಪಿಎಲ್ ನಲ್ಲಿ ಸ್ಥಳೀಯರಿಗೆ ಉದ್ಯೋಗ ನಿರಾಕರಿಸಲು ಕಾರಣವೇನು?. ನಿಯಮ ಉಲ್ಲಂಘಿಸಿದ್ದಕ್ಕೆ ಕಂಪನಿಯ ಯಾವ ಅಧಿಕಾರಿಯ ಮೇಲೆ ಕ್ರಮಕೈಗೊಳ್ಳಲಾಗಿದೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಇದಕ್ಕೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ಪರೇಶ್ವರ್ ತೇಲಿ ಲಿಖಿತ ಉತ್ತರ ನೀಡಿದ್ದು, ಎಂಆರ್ ಪಿಎಲ್ ನಲ್ಲಿ ಉದ್ಯೋಗಕ್ಕೆ ಆಗ್ರಹಿಸಿ ಸ್ಥಳೀಯರು ಇತ್ತೀಚೆಗೆ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಎಂಆರ್ ಪಿಎಲ್ ಸಾರ್ವಜನಿಕ ವಲಯದ ಉದ್ಯಮವಾಗಿದ್ದು, ಅಲ್ಲಿನ ಉದ್ಯೋಗದ ನೇಮಕಾತಿಯಲ್ಲಿ ಸರ್ಕಾರದ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಸ್ಥಳೀಯರಿಗೆ ಉದ್ಯೋಗ ನೀಡುತ್ತಿದೆ ಎಂದು ಹೇಳಿ ನೇಮಕಾತಿಗೊಂಡವರ ಪಟ್ಟಿಯನ್ನು ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಮುಖಂಡ ಸಮೃದ್ಧಿ ಮಂಜುನಾಥ್, ಮಂಗಳೂರಿನ MRPL ಉದ್ದಿಮೆಯಲ್ಲಿನ ಉದ್ಯೋಗಾವಕಾಶಗಳು ಸ್ಥಳೀಯರಿಗೆ ಸಿಗದ ಕುರಿತಾಗಿ ಉತ್ತರಿಸುವಂತೆ ಪ್ರಜ್ವಲ್ ರೇವಣ್ಣ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ, ಸರ್ಕಾರದಿಂದ ಸಿಕ್ಕ ಉತ್ತರ ನಿರಾಶಾದಾಯಕವಾಗಿರುವುದು ಬೇಸರದ ಸಂಗತಿ. ನಿಮ್ಮ ಪ್ರಯತ್ನಕ್ಕೆ ಧನ್ಯವಾದಗಳು ಸಂಸದರೇ ಎಂದು ತಿಳಿಸಿದ್ದಾರೆ.
ಇತ್ತಿಚೆಗೆ ನಡೆದ MRPL ನೇಮಕಾತಿಯಲ್ಲಿ ಉತ್ತರ ಭಾರತೀಯರಿಗೆ ಅತೀ ಹೆಚ್ಚಿನ ಪ್ರಸ್ತಾವ್ಯ ಕೊಟ್ಟು ಸ್ಥಳೀಯ ತುಳುನಾಡಿನವರಿಗೆ ಕೇವಲ ನಾಲ್ಕು ಉದ್ಯೋಗ ಕೊಟ್ಟಿರುವ ಬಗ್ಗೆ ಬಾರಿ ಹೋರಾಟ ನಡೆದಿತ್ತು.

ಈ ನಡುವೆ ಬಿಜೆಪಿಯ ರಾಜ್ಯಾಧ್ಯಕ್ಷರು ಆಗಿರುವ ಸಂಸದ ನಳಿನ್ ಕುಮಾರ್ ಕಟೀಲ್ ಈ ನೇಮಕಾತಿಯನ್ನು ತಡೆಹಿಡಿಯಲಾಗಿದೆ ಎಂದಿದ್ದಾದರೂ ಸ್ಥಳಿಯ ಸಂಸದರ ಮಾತಿಗೆ ಬೆಲೆಯೇ ಇಲ್ಲವೆಂಬಂತೇ ನೇಮಕಾತಿ ನಡೆಯಿತು.
ಹೋರಾಟಗಾರರಿಗೆ ಬೆಂಬಲ ಸೂಚಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಂಗಳೂರಿನಲ್ಲಿ ಪ್ರತಿಭಟನೆಗೂ ಭಾಗವಹಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು