ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

MS Dhoni Team India: ವಿಶ್ವಕಪ್‌ನಲ್ಲಿ ಕೆಟ್ಟ ನಿರ್ವಹಣೆ, ಎಂಎಸ್‌ ಧೋನಿಗೆ ಬಿಸಿಸಿಐ ಬುಲಾವ್‌?

Twitter
Facebook
LinkedIn
WhatsApp
MS Dhoni Team India: ವಿಶ್ವಕಪ್‌ನಲ್ಲಿ ಕೆಟ್ಟ ನಿರ್ವಹಣೆ, ಎಂಎಸ್‌ ಧೋನಿಗೆ ಬಿಸಿಸಿಐ ಬುಲಾವ್‌?

ನವದೆಹಲಿ (ನ.15): ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದ 2022ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ ಹಂತದಲ್ಲಿ ಸೋಲು ಕಾಣುವುದರೊಂದಿಗೆ, ವಿಶ್ವಕಪ್‌ ಗೆಲ್ಲುವ ಭಾರತ ತಂಡದ ಬಹುದಿನಗಳ ಆಸೆ ಭಗ್ನವಾಗಿದೆ. ತಂಡ ಮತ್ತೊಮ್ಮೆ ಸೆಮಿಫೈನಲ್‌ನಲ್ಲಿಯೇ ಸೋಲು ಕಂಡಿದ್ದು ಅಭಿಮಾನಿಗಳಿಗೆ ಮಾತ್ರವಲ್ಲ ಸ್ವತಃ ಬಿಸಿಸಿಐ ಅಧಿಕಾರಿಗಳಿಗೂ ಬೇಸರ ತಂದಿದೆ. ವಿಶ್ವಕಪ್‌ಗಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡರೂ, ಸೂಕ್ತ ಆಟಗಾರರನ್ನು ಆಯ್ಕೆ ಮಾಡಿಕೊಂಡರೂ ನಿರೀಕ್ಷಿತ ಫಲಿತಾಂಶವನ್ನು ಪಡೆದುಕೊಳ್ಳಲು ತಂಡ ವಿಫಲವಾಗಿದೆ. ಈ ಬಾರಿ ಆಸ್ಟ್ರೇಲಿಯಾದಲ್ಲಿ ತಂಡ ಆಡಿರುವ ರೀತಿ ಬಿಸಿಸಿಐಗೆ ಆಘಾತ ತಂದಿದೆ. ಯಾವುದೇ ಪಂದ್ಯದಲ್ಲೂ ಟೀಮ್ ಇಂಡಿಯಾ ಅಧಿಕಾರಯುತ ಗೆಲುವು ದಾಖಲು ಮಾಡಿರಲಿಲ್ಲ, ಅದರ ಬೆನ್ನಿಗೆ ಸೆಮಿಫೈನಲ್‌ನಲ್ಲಿ 10 ವಿಕೆಟ್‌ ಸೋಲು. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಟಿ20 ತಂಡದ ಸಂಪೂರ್ಣ ಚಹರೆಯನ್ನೇ ಬದಲಿಸಲು ಬಿಸಿಸಿಐ ಯೋಚನೆ ಮಾಡಿದೆ. ಆದರೆ, ತಂಡದಲ್ಲಿನ ಸಂಪೂರ್ಣ ಬದಲಾವಣೆಗೆ ಬಿಸಿಸಿಐ ಸಿದ್ಧವಾಗಿದೆಯೇ ಹಾಗೂ ಬದಲಾವಣೆ ಮಾಡಲು ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎನ್ನುವುದೇ ಮುಖ್ಯ ಪ್ರಶ್ನೆಯಾಗಿ ಉಳಿದುಕೊಂಡಿದೆ.

ಟೆಲಿಗ್ರಾಫ್‌ ಪತ್ರಿಕೆಯ ವರದಿಯ ಪ್ರಕಾರ, ಏಕದಿನ ಹಾಗೂ ಟೆಸ್ಟ್‌ ತಂಡದಲ್ಲಿ ಬದಲಾವಣೆ ಬಗ್ಗೆ ಬಿಸಿಸಿಐ ಹೆಚ್ಚಿನ ಗಮನ ನೀಡಿಲ್ಲ. ಆದರೆ, ಟಿ20 ಮಾದರಿಯ ತಂಡದ ಸ್ವರೂಪ, ತಂಡದ ಆಟಗಾರರ ಆಯ್ಕೆ ಪ್ರಕ್ರಿಯೆ ಎಲ್ಲವೂ ಬದಲಾಗಲಿದೆ. ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ವಿಚಾರವಾಗಿ ಬಿಸಿಸಿಐ ಆಂತರಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಹಾರ್ದಿಕ್‌ ಪಾಂಡ್ಯ ಅವರನ್ನು ಟಿ20 ಮಾದರಿಯ ನಾಯಕನ್ನಾಗಿ ಘೋಷಣೆ ಮಾಡಬೇಕೋ ಅಥವಾ ಟಿ20 ಮತ್ತು ಏಕದಿನ ಮಾದರಿಗಳಿಗೆ ಬೇರೆ-ಬೇರೆ ನಾಯಕರು ಹಾಗೂ ಕೋಚ್‌ಗಳು ಇರಬೇಕೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇವೆಲ್ಲದರ ನಡುವೆ ಮಾಜಿ ನಾಯಕ ಎಂಎಸ್‌ ಧೋನಿಯನ್ನು ಮತ್ತೆ ಟೀಮ್‌ ಇಂಡಿಯಾ ಬಳಗದಲ್ಲಿ ಸೇರಿಸಲು ಬಿಸಿಸಿಐ ಉತ್ಸುಕವಾಗಿದೆ ಎನ್ನುವುದು ಮುಖ್ಯವಾದ ವಿಚಾರವಾಗಿದೆ. ಐಸಿಸಿ ಟೂರ್ನಿಗಳಲ್ಲಿ ಟೀಮ್‌ ಇಂಡಿಯಾ ಹೇಗೆ ಆಡಬೇಕು, ಆಟಗಾರರ ಸಿದ್ಧತೆ ಯಾವೆಲ್ಲಾ ರೀತಿ ಇರಬೇಕು ಎನ್ನುವುದರ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಸಿಐ, ಎಂಎಸ್‌ ಧೋನಿಗೆ ವಹಿಸಲು ಇಚ್ಛಿಸಿದೆ.

ತಂಡದಲ್ಲಿ ಧೋನಿ ಪಾತ್ರವೇನು?: 2021ರ ಟಿ20 ವಿಶ್ವಕಪ್‌ ಸಮಯದಲ್ಲೂ ಎಂಎಸ್‌ ಧೋನಿ ಟೀಮ್‌ ಇಂಡಿಯಾದ ಮೆಂಟರ್‌ ಆಗಿ ಕೆಲಸ ಮಾಡಿದ್ದರು. ಆದರೆ, ಕೇವಲ ಅದೊಂದು ಟೂರ್ನಿಗಾಗಿ ಬಿಸಿಸಿಐ ಧೋನಿ ಅವರಿಗೆ ಈ ಜವಾಬ್ದಾರಿ ನೀಡಿತ್ತು. ತಂಡ ವಿಶ್ವಕಪ್‌ನಲ್ಲಿ ನಿರ್ಗಮಿಸುವುದರೊಂದಿಗೆ ಧೋನಿ ಕೆಲಸವೂ ಮುಗಿದಿತ್ತು. ಆದರೆ, ಧೋನಿ ಈ ತಂಡದಲ್ಲಿ ಮೇಜರ್‌ ಇಂಪಾಕ್ಟ್‌ ಮಾಡದೇ ಇರಲು ಕಾರಣ ಅವರಿಗೆ ಸಿಕ್ಕ ಕಡಿಮೆ ಅವಧಿ. ಆದರೆ, ಈ ಬಾರಿ ಧೋನಿಗೆ ಖಾಯಂ ಆಗಿ ಮೆಂಟರ್‌ ಸ್ಥಾನ ನೀಡಲು ನಿರ್ಧರಿಸಿದೆ. ಧೋನಿಯ ಮಾರ್ಗದರ್ಶನದೊಂದಿಗೆ ಐಸಿಸಿ ಟೂರ್ನಿಗಳಲ್ಲಿ ತಂಡ ಹೇಗೆ ಯಶಸ್ಸಿನ ದಾರಿಗೆ ಏರಬೇಕು ಎನ್ನುವುದರ ಬಗ್ಗೆ ತರಬೇತಿ ಪಡೆದುಕೊಳ್ಳಲಿದೆ.

ವರದಿಯ ಪ್ರಕಾರ, ಐಪಿಎಲ್ 2023 ರ ನಂತರ ಎಂಎಸ್ ಧೋನಿ ಐಪಿಎಲ್‌ಗೆ ವಿದಾಯ ಹೇಳಲಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಅವರಿಗೆ ಟೀಮ್‌ ಇಂಡಿಯಾದ ಜೊತೆ ಇರಲು ಸಮಯವೂ ಇರುತ್ತದೆ. ಟಿ 20 ಸ್ವರೂಪದಲ್ಲಿ ಟೀಮ್ ಇಂಡಿಯಾದೊಂದಿಗೆ ಕೆಲಸ ಮಾಡಲು ಬಿಸಿಸಿಐ ಅವರನ್ನು ಕೇಳುವ ಸಾಧ್ಯತೆ ಇದೆ. ತಂಡದ ಮುಖ್ಯ ಕೋಚ್‌ ಆಗಿರುವ ರಾಹುಲ್‌ ದ್ರಾವಿಡ್‌ಗೆ ಮೂರೂ ಸ್ವರೂಪಗಳಲ್ಲಿ ಏಕಕಾಲದಲ್ಲಿ ಕೆಲಸ ಮಾಡುವುದು ಕಷ್ಟವಾಗುತ್ತಿದೆ.

2022ರ ಟಿ-20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೋತು ಇನ್ನೂ ಒಂದು ವಾರ ಕಳೆದಿಲ್ಲ ಮತ್ತು ಇದ್ದಕ್ಕಿದ್ದಂತೆ ಬೆಳವಣಿಗೆ ತೀವ್ರಗೊಳ್ಳಲು ಆರಂಭಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಬಿಸಿಸಿಐ ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುತ್ತದೆಯೇ ಅಥವಾ ವಿಷಯಗಳನ್ನು ಸುಗಮವಾಗಿ ನಿಭಾಯಿಸುತ್ತದೆಯೇ ಎನ್ನುವುದು ಮುಂದಿನ ಪ್ರಶ್ನೆ. ಮುಂದಿನ ಟಿ20 ವಿಶ್ವಕಪ್ 2024 ರಲ್ಲಿ ನಿಗದಿಯಾಗಿದ.ೆ ಆದರೆ ಅದಕ್ಕೂ ಮೊದಲು 2023 ರಲ್ಲಿ ಏಕದಿನ ವಿಶ್ವಕಪ್ ಇದೆ. ಅಂತಹ ಪರಿಸ್ಥಿತಿಯಲ್ಲಿ, ಮಂಡಳಿಯು ಈಗಾಗಲೇ ಹೊಸ ಯೋಜನೆಯಲ್ಲಿ ತೊಡಗಿ, ರೋಹಿತ್‌ ಶರ್ಮ ಅವರನ್ನು ನಾಯಕ ಸ್ಥಾನದಿಂದ ತೆಗೆದುಹಾಕಲಿದೆಯೇ ಎನ್ನುವ ಪ್ರಶ್ನೆ ಕಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist