ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Mukesh: ನಟಿ ಮೇಲೆ ಅತ್ಯಾಚಾರ ಆರೋಪ; ನಟ, ರಾಜಕಾರಣಿ ಮುಕೇಶ್ ಬಂಧನ

Twitter
Facebook
LinkedIn
WhatsApp
malayalam actor Mukesh

ಲಯಾಳಂ (Malayalam) ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರೋ ಜಸ್ಟಿಸ್ ಹೇಮಾ ವರದಿ ಒಬ್ಬೊಬ್ಬರ ತಲೆದಂಡಕ್ಕೆ  ಕಾರಣವಾಗಿತ್ತು. ಈಗ ಮತ್ತೊಂದು ಹಂತ ತಲುಪಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದೆ (Arrest). ಖ್ಯಾತ ನಟ ಹಾಗೂ ರಾಜಕಾರಣಿ ಮುಕೇಶ್ (Mukesh) ಅವರನ್ನು ಬಂಧಿಸಲಾಗಿದೆ.

ಕೊಚ್ಚಿಯ ಕೋಸ್ಟಲ್ ಪೊಲೀಸ್ ಆಫೀಸಿನಲ್ಲಿ ಮುಕೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಎಐಜಿ ಪೂಂಗಾಝಾಲಿ ನೇತೃತ್ವದಲ್ಲಿ ನಡೆದ ವಿಚಾರಣೆಯ ನಂತರ ಮುಕೇಶ್ ಬಂಧನವಾಗಿದೆ.

ಮಹಿಳಾ ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಡಳಿತಾರೂಢ ಸಿಪಿಐ(ಎಂ) ಶಾಸಕ ಹಾಗೂ ನಟ ಎಂ ಮುಖೇಶ್ ಅವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಮಂಗಳವಾರ ಔಪಚಾರಿಕವಾಗಿ ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಶಾಸಕರನ್ನು ಬಂಧಿಸಲಾಗಿತ್ತು. ಅವರ ವೈದ್ಯಕೀಯ ಪರೀಕ್ಷೆ ಮತ್ತು ಪುರುಷತ್ವ ಪರೀಕ್ಷೆಯನ್ನು ನಡೆಸಲಾಯಿತು. ಈ ತಿಂಗಳ ಆರಂಭದಲ್ಲಿ ಅವರು ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರಿಂದ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಅವರ ವಕೀಲರು ಖಚಿತಪಡಿಸಿದ್ದಾರೆ.

ಇಂದು ಬೆಳಗ್ಗೆ 9.45ಕ್ಕೆ ಇಲ್ಲಿನ ಕರಾವಳಿ ಪೊಲೀಸ್‌ ಹೆಡ್‌ಕ್ವಾರ್ಟರ್‌ನಲ್ಲಿರುವ ಎಸ್‌ಐಟಿ ಎದುರು ಮುಕೇಶ್‌ ಅವರು ವಿಚಾರಣೆಗೆ ಹಾಜರಾಗಿದ್ದು, ಮೂರೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.

ಮುಖೇಶ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಒಂದು ವಡಕ್ಕಂಚೇರಿ ಪೊಲೀಸ್ ಠಾಣೆಯಲ್ಲಿ ಮತ್ತು ಇನ್ನೊಂದು ಮರಡು ಪೊಲೀಸರು ನಟನ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಬಾಲಕಿಯ ಕೊಂದು ದೇಹ ಎಸೆದಿದ್ದ ಮುಖ್ಯೋಪಾಧ್ಯಾಯ ಅರೆಸ್ಟ್​

ಗುಜರಾತ್​ನ ದೋಹಾದ್ ಜಿಲ್ಲೆಯ ಪಿಪಾಲಿಯಾ ಎಂಬಲ್ಲಿನ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ, ಆಕೆ ಕೂಗಿಕೊಂಡಾಗ, ಆಕೆಯನ್ನು ಹತ್ಯೆ ಮಾಡಿ ಎಸೆದು ಹೋಗಿದ್ದ ಇದೀಗ ಆತನನ್ನು ಬಂಧಿಸಲಾಗಿದೆ.

1ನೇ ತರಗತಿ ಓದುತ್ತಿದ್ದ ಬಾಲಕಿಯ ಶವ ಸೆ.19ರಂದು ಶಾಲಾ ಕಾಂಪೌಂಡ್‌ನಲ್ಲಿ ಪತ್ತೆಯಾಗಿದ್ದು, ಆಕೆಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಪ್ರಕರಣದ ತನಿಖೆಗಾಗಿ ಒಟ್ಟು 10 ತಂಡಗಳನ್ನು ರಚಿಸಲಾಗಿದೆ ಎಂದು ದೋಹಾದ್ ಪೊಲೀಸ್ ವರಿಷ್ಠಾಧಿಕಾರಿ ರಾಜದೀಪ್ ಸಿಂಗ್ ಝಾಲಾ ಹೇಳಿದ್ದಾರೆ.

ತನಿಖೆಯ ವೇಳೆ, ಪೋಷಕರು ಬಾಲಕಿಯನ್ನು ಶಾಲೆಯ ಮುಖ್ಯೋಪಾಧ್ಯಾಯ ಗೋವಿಂದ್ ನಾಥ್ ಅವರ ಕಾರಿನಲ್ಲಿ ಶಾಲೆಗೆ ಕಳುಹಿಸಿದ್ದಾರೆ ಎಂಬುದು ಪೊಲೀಸರಿಗೆ ತಿಳಿದುಬಂದಿದೆ. ಆಕೆ ಶಾಲೆಯಿಂದ ಹಿಂತಿರುಗದಿದ್ದಾಗ, ಹುಡುಗಿಯ ಪೋಷಕರು ನಾಥ್ ಬಳಿ ವಿಚಾರಿಸಿದ್ದರು, ಆದರೆ ಆತ ನಾನು ಆಕೆಯನ್ನು ಶಾಲೆಗೆ ಬಿಟ್ಟಿದ್ದೆಯಷ್ಟೆ ನನಗೇನು ಗೊತ್ತಿಲ್ಲ ಎಂದು ಹೇಳಿದ್ದಾನೆ.

ತನಿಖೆಯ ನಂತರ ಪೊಲೀಸರು ಗೋವಿಂದ್ ನಾಥ್ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದರು. ವಿಚಾರಣೆಯ ಸಮಯದಲ್ಲಿ, ನಾಥ್​ ಅತ್ಯಾಚಾರ ಪ್ರಯತ್ನವನ್ನು ವಿರೋಧಿಸಿದ್ದರಿಂದ ಹುಡುಗಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ಆಕೆ ಕಿರುಚಲು ಆರಂಭಿಸಿದಳು ಎಂದು ನಾಥ್ ಹೇಳಿದ್ದಾರೆ. ಆಕೆಯ ಕಿರುಚಾಟವನ್ನು ತಡೆಯಲು ಆಕೆಯ ಬಾಯಿಯ ಮೇಲೆ ತನ್ನ ಕೈಗಳನ್ನು ಬಿಗಿಯಾಗಿ ಇಟ್ಟಿದ್ದ. ಬಾಲಕಿ ಸಾವನ್ನಪ್ಪಿದ್ದು, ಬಳಿಕ ಆಕೆಯನ್ನು ಕಾರಿನ ಹಿಂಬದಿಯಲ್ಲಿ ಬಚ್ಚಿಟ್ಟಿದ್ದಾನೆ.

ಬಳಿಕ ಗೋವಿಂದ್ ನಾಥ್ ಎಂದಿನಂತೆ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದರು. ತರಗತಿಗಳು ಮುಗಿದ ನಂತರ, ಅವನು ಕಾರಿಗೆ ಹಿಂತಿರುಗಿದನು, ಆಕೆಯ ಸಾಮಾನುಗಳನ್ನು ಶಾಲೆಯ ಗೇಟ್ ಬಳಿ ಎಸೆದು ಬಾಲಕಿಯ ಶವವನ್ನು ತರಗತಿಯ ಹಿಂದೆ ಬಿಟ್ಟು ಹೋಗಿದ್ದಾನೆ.

ಸೆಪ್ಟೆಂಬರ್ 19 ರಂದು ಸಂಜೆ ಸ್ಥಳೀಯರೊಂದಿಗೆ ಬಾಲಕಿಯ ಪೋಷಕರು ಶಾಲೆಗೆ ತಲುಪಿದಾಗ ಗೇಟ್ ಬಳಿ ಆಕೆಯ ಸಾಮಾನುಗಳು ಮತ್ತು ಶಾಲೆಯ ಕಾಂಪೌಂಡ್‌ನಲ್ಲಿ ಆಕೆಯ ಶವ ಪತ್ತೆಯಾಗಿದೆ.

 

ಪುಲ್ವಾಮಾ ದಾಳಿಯ ಪ್ರಮುಖ ಆರೋಪಿ ಹೃದಯಾಘಾತದಿಂದ ಸಾವು:

ಶ್ರೀನಗರ: 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್‌ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಮೃತನನ್ನು ಕಾಕಪೋರಾದ ಹಾಜಿಬಲ್ ಗ್ರಾಮದ ಬಿಲಾಲ್ ಅಹ್ಮದ್ ಕುಚೇ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ 19 ಮಂದಿಯ ಮೇಲೆ ಆರೋಪ ಹೊರಿಸಲಾಗಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಆರೋಪಿ ಸೆ.17 ರಂದು ಕಿಶ್ತ್ವಾರ್ ಜಿಲ್ಲಾ ಕಾರಾಗೃಹದಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆತ ಸೋಮವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೆ.14, 2019 ರಂದು ಪುಲ್ವಾಮಾದ ಲೆಥ್‍ಪೋರಾದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್‍ನ ಭಯೋತ್ಪಾದಕ ತನ್ನ ಸ್ಫೋಟಕ ತುಂಬಿದ ಕಾರನ್ನು ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆಸಿದ್ದ. ಇದರಿಂದ 40 ಸಿಆರ್‌ಪಿಎಫ್‌ ಸಿಬ್ಬಂದಿ ಸಾವನ್ನಪ್ಪಿ, 8 ಮಂದಿ ಗಾಯಗೊಂಡಿದ್ದರು.

2020ರ ಆ.25 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಕುಚೇ ಮತ್ತು ಪ್ರಕರಣದ ಇತರ 18 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಿತ್ತು. ಪ್ರಕರಣದಲ್ಲಿ ಬಂಧಿಸಲಾದ 7 ಆರೋಪಿಗಳಲ್ಲಿ ಈತನೂ ಸೇರಿದ್ದ.

ಆರೋಪಿಗಳಾದ ಶಾಕಿರ್ ಬಶೀರ್, ಇನ್ಶಾ ಜಾನ್ ಮತ್ತು ಪೀರ್ ತಾರಿಕ್ ಅಹ್ಮದ್ ಶಾ ಹಾಗೂ ಮೃತ ಆರೋಪಿ ದಾಳಿ ನಡೆಸಿದ್ದ ಉಗ್ರನಿಗೆ ಮತ್ತು ಜೆಎಂ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದರು.

ದಾಳಿಯಲ್ಲಿ ಭಾಗಿಯಾದ ಮೂವರು ಪಾಕಿಸ್ತಾನಿಯರು ಸೇರಿದಂತೆ 6 ಭಯೋತ್ಪಾದಕರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟಿದ್ದರೆ, ಜೆಎಂ ಸಂಸ್ಥಾಪಕ ಮಸೂದ್ ಅಜರ್ ಸೇರಿದಂತೆ ಇನ್ನೂ 6 ಮಂದಿ ತಲೆಮರೆಸಿಕೊಂಡಿದ್ದಾರೆ.

ನರ್ಸಿಂಗ್ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ!

ಶಹಜಹಾನ್ ಪುರ: ಕಟ್ಟಡ ನಿರ್ಮಾಣ ಕಾರ್ಮಿಕ ಹಾಗೂ ಆತನ ಸಹಚರ ಗನ್ ತೋರಿಸಿ ಬೆದರಿಕೆ ಹಾಕಿ ನರ್ಸಿಂಗ್ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ.

ಓರ್ವ ಆರೋಪಿ ಬಂಧನಕ್ಕೆ ಒಳಗಾಗಿದ್ದರೆ, ಮತ್ತೋರ್ವನ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಜಲಾಲಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ವಿದ್ಯಾರ್ಥಿಯು ಚೌಕ್ ಕೊತ್ವಾಲಿ ಪ್ರದೇಶದಲ್ಲಿರುವ ಕಾಲೇಜಿನಲ್ಲಿ ನರ್ಸಿಂಗ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಸಂಜಯ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಟೈಲ್ ಗುತ್ತಿಗೆದಾರ ಸುರೇಶ್ ಕುಮಾರ್ (35) ಮತ್ತು ಅವರ ಪಾಲುದಾರ ಅನ್ಮೋಲ್ ಕಾಲೇಜಿನ ವಾಶ್ ರೂಂನಲ್ಲಿ ವಿದ್ಯಾರ್ಥಿನಿಯನ್ನು ಹಿಡಿದು ಕಿರುಕುಳ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿನಿ ಕೂಗಾಡಲು ಮುಂದಾದಾಗ ಸುರೇಶ್ ಆಕೆಯ ಬಾಯಿ ಬಿಗಿದು ಬಂದೂಕನ್ನು ತೋರಿಸಿದ,” ಎಂದು ಹೇಳಿದ ಸಂಜಯ್ ಕುಮಾರ್, ”ಆದರೂ ಧೈರ್ಯ ತೋರಿದ ವಿದ್ಯಾರ್ಥಿನಿ ಆರೋಪಿಯ ಕೈ ಕಚ್ಚಿ ಕಿರುಚಾಡುತ್ತಾ ಬಾತ್ ರೂಂನಿಂದ ಹೊರಗೆ ಓಡಿಹೋದಳು ಎಂದು ತಿಳಿಸಿದ್ದಾರೆ.

ಬಾಲಕಿಯ ಕಿರುಚಾಟ ಕೇಳಿ ನರ್ಸಿಂಗ್ ಕಾಲೇಜು ಸಿಬ್ಬಂದಿ ಹಾಗೂ ಇತರೆ ವಿದ್ಯಾರ್ಥಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅವರನ್ನು ನೋಡಿದ ಇಬ್ಬರೂ ಓಡಿಹೋಗಲು ಪ್ರಾರಂಭಿಸಿದರು, ಆದರೆ ಸುರೇಶ್ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕೊಲೆ ಯತ್ನ ಮತ್ತು ಕಿರುಕುಳಕ್ಕೆ ಸಂಬಂಧಿಸಿದ ಸಂಬಂಧಿತ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್‌ಗಳ ಅಡಿಯಲ್ಲಿ ಇಬ್ಬರೂ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಅನ್ಮೋಲ್ ಗಾಗಿ ಶೋಧ ನಡೆಸುತ್ತಿದ್ದೇವೆ ಎಂದು ಎಎಸ್ಪಿ ಕುಮಾರ್ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist