ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಲ್ಕಿ: ನಿವೃತ್ತ ಶಿಕ್ಷಕ ಕೃಷ್ಣರಾವ್ ಕುಸಿದು ಬಿದ್ದು ನಿಧನ!

Twitter
Facebook
LinkedIn
WhatsApp
ಮುಲ್ಕಿ: ನಿವೃತ್ತ ಶಿಕ್ಷಕ ಕೃಷ್ಣರಾವ್ ಕುಸಿದು ಬಿದ್ದು ನಿಧನ!

ಮುಲ್ಕಿ: ಇಲ್ಲಿಗೆ ಸಮೀಪದ ಪಡುಪಣಂಬೂರು ಬೆಳ್ಳಾಯರು ಗೋಂಟು ನಿವಾಸಿ ನಿವೃತ್ತ ಶಿಕ್ಷಕ ಕೃಷ್ಣರಾವ್ (63) ಹೃದಯಾಘಾತದಿಂದ ಶನಿವಾರ ನಿಧನರಾದರು.ಅವರು ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಪುನರೂರು ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಬೆಳ್ಳಾಯರು ಶ್ರೀ ಚಂದ್ರ ಮೌಳೀಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಬಹಳಷ್ಟು ಶ್ರಮಿಸಿದ್ದರು.

ಬೆಳ್ಳಾಯರು ಗೋಂಟು ಪುತ್ರನ್ ಮೂಲ ಸ್ಥಾನದ ಸಹ ಅರ್ಚಕರಾಗಿ, ಕೆಂಚನಕೆರೆ ಹಾಲು ಉತ್ಪಾದಕರ ಸಂಘದ ಸದಸ್ಯರಾಗಿ, ಹೈನುಗಾರರಾಗಿ, ಕೃಷಿಕರಾಗಿ, ಉತ್ತಮ ಸಾಮಾಜಿಕ ಕಾರ್ಯಕರ್ತರಾಗಿ ಕೊಡುಗೈದಾನಿಯಾಗಿ ಜನಾನುರಾಗಿಯಾಗಿದ್ದರು.

ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು,ಶಾಸಕ ಉಮಾನಾಥ ಕೋಟ್ಯಾನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಬೆಳ್ಳಾಯರು ಶ್ರೀ ಚಂದ್ರ ಮೌಳೀಶ್ವರ ದೇವಸ್ಥಾನದ ಆಡಳಿತ ಮೊಕೇಸರ ಪಾದೆ ಮನೆ ಜಯಂತ ರೈ ಸಮಿತಿಯ ಪದಾಧಿಕಾರಿಗಳಾದ ಶೇಖರ್ ಶೆಟ್ಟಿ, ಅಕ್ಷಯ್ ರಾವ್, ವಿನೋದ್ ಸಾಲ್ಯಾನ್ ಬೆಳ್ಳಾಯರು, ವಿಜಯ ಶೆಟ್ಟಿ ಕೋಲ್ನಾಡು, ರಾಮಚಂದ್ರ ನಾಯಕ್, ಪ್ರವೀಣ್ ಶೆಟ್ಟಿ, ಗೌತಮ್ ಜೈನ್ ಮುಲ್ಕಿ ಅರಮನೆ,ಪತ್ರಕರ್ತ ಪುನೀತ್ ಕೃಷ್ಣ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ