ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು.! ವಿಡಿಯೋ ವೈರಲ್
ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ
ಜಾತ್ರೆಯಲ್ಲಿ ದೇವರ ರಥ ಹೋಗುವ ದಾರಿಯಲ್ಲಿ ವಾಹನಗಳನ್ನ ಪಾರ್ಕ್ ಮಾಡಲಾಗಿತ್ತು. ಹೀಗಾಗಿ ರಥ ಹೋಗಲು ಸ್ಥಳವಿಲ್ಲದಂತೆ ಆಗಿತ್ತು. ಈ ಕಾರಣದಿಂದ ರಥ ಹೋಗಲು ದಾರಿ ಮಾಡುವ ಉದ್ದೇಶದಿಂದ ಭಕ್ತರು ಪಾರ್ಕ್ ಮಾಡಿದ ಕಾರು, ರಿಕ್ಷಾ , ಬೈಕ್ ಗಳನ್ನು ಬದಿಗೆ ದೂಡಿ ಹಾಕಿದ್ದು, ಇದರಿಂದಾಗಿ ವಾಹನಗಳೂ ಜಖಂಗೊಂಡಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ನೆಲ್ಯಾಡಿ: ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಮದುವೆ ದಿಬ್ಬಣಕ್ಕೆ ತೆರಳಿದ ಬಸ್..!
ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್‍ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.