ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಬೈ : ಲಿವ್ ಇನ್ ಪಾರ್ಟ್ನರ್‌ಳನ್ನು ಕೊಂದು ದೇಹವನ್ನು ಪೀಸ್ ಪೀಸ್ ಮಾಡಿದ ವ್ಯಕ್ತಿ

Twitter
Facebook
LinkedIn
WhatsApp
a

ಮುಂಬೈ: ಲಿವ್ ಇನ್ ಪಾರ್ಟ್ನರ್ ಳನ್ನು ಕೊಲೆಗೈದು ಬಳಿಕ ದೇಹವನ್ನು ಪೀಸ್ ಪೀಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು (Mumbai Police) ಬುಧವಾರ ಸಂಜೆ ಬಂಧಿಸಿದ್ದಾರೆ.

ಬಂಧಿತನನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದೆ. ಈತ ಕಳೆದ ಮೂರು ವರ್ಷಗಳಿಂದ ಮೀರಾ ರೋಡ್ ಪ್ರದೇಶದ ಆಕಾಶಗಂಗಾ ಕಟ್ಟಡದ ಬಾಡಿಗೆ ಫ್ಲಾಟ್‍ನಲ್ಲಿ ಸರಸ್ವತಿ ವೈದ್ಯ ಎಂಬಾಕೆಯೊಂದಿಗೆ ವಾಸವಾಗಿದ್ದ.

ಇತ್ತ ಕಟ್ಟಡದ ನಿವಾಸಿಗಳು ಬುಧವಾರ ನಯಾನಗರ ಪೊಲೀಸ್ ಠಾಣೆ (Nayanagar Police Station) ಗೆ ಕರೆ ಮಾಡಿದ್ದು, ದಂಪತಿಯ ಫ್ಲಾಟ್‍ನಿಂದ ದುರ್ವಾಸನೆ ಬರುತ್ತಿದೆ ಎಂದು ದೂರಿದ್ದಾರೆ. ಅಂತೆಯೇ ಥಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರಿಗೆ ಭಯಾನಕ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. 

ಪ್ರಾಥಮಿಕ ತನಿಖೆಯಿಂದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮುಂಬೈನ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಜಯಂತ್ ಬಜ್ಬಲೆ ಪ್ರತಿಕ್ರಿಯಿಸಿ, ಪೊಲೀಸರು ಮೀರಾ ರೋಡ್ ಪ್ರದೇಶದಲ್ಲಿನ ಸೊಸೈಟಿಯಿಂದ ತುಂಡಾಗಿ ಕತ್ತರಿಸಿದ ಮಹಿಳೆಯ ಶವವನ್ನು ಪತ್ತೆ ಮಾಡಿದ್ದಾರೆ. ಇಲ್ಲಿ ದಂಪತಿ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ