ಮುಂಬೈ: ಸನಾತನ ಮೆರವಣಿಗೆ ವೇಳೆ ದೊಣ್ಣೆಗಳನ್ನು ಹಿಡಿದು ದುಷ್ಕರ್ಮಿಗಳ ದಾಳಿ; ಧಾರ್ಮಿಕ ಧ್ವಜ ಹರಿದು ಗಲಾಟೆ
ಮುಂಬೈನಲ್ಲಿ ನಡೆದ ಸನಾತನ ಮೆರವಣಿಗೆ ಮೇಲೆ ಕೆಲ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಧಾರ್ಮಿಕ ಧ್ವಜವನ್ನು ಹರಿದುಹಾಕಿರುವ ಘಟನೆ ನಡೆದಿದೆ. ಅಯೋಧ್ಯೆಯಲ್ಲಿ ಇಂದು ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಮ ಭಕ್ತರು ಸನಾತನ ಮೆರವಣಿಗೆ ನಡೆಸುತ್ತಿದ್ದಾರೆ.
ಮುಂಬೈನ ಭಾಯಂದರ್‌ನಲ್ಲಿ ಸನಾತನ ಧರ್ಮ ಯಾತ್ರೆ ಹೊರಡುವಾಗ ಗಲಾಟೆ ನಡೆದಿತ್ತು. ತಮ್ಮ ಕಾರಿನಲ್ಲಿ ರಾಮ ಮತ್ತು ಹನುಮಂತನ ಧ್ವಜಗಳೊಂದಿಗೆ ಸಾಗುತ್ತಿದ್ದ ಜನರು ಜೈ ಶ್ರೀ ರಾಮ್ ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಈ ಸಮಯದಲ್ಲಿ ದೊಣ್ಣೆಗಳನ್ನು ಹಿಡಿದು ಬಂದ ದುಷ್ಕರ್ಮಿಗಳು ಕಾರುಗಳ ಮೇಲೆ ದಾಳಿ ನಡೆಸಿದ್ದಾರೆ.
ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ, ದಾಳಿ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಬೇಕು ಎನ್ನುವ ಆಗ್ರಹ ಕೇಳಿಬಂದಿದೆ. ಯಾತ್ರೆಯಲ್ಲಿ ಭಾಗವಹಿಸಿದ ಮಹಿಳೆಯರನ್ನೂ ಬಿಡದೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಸನಾತನ ಯಾತ್ರೆ ನಡೆಸುತ್ತಿರುವ ಜನರು ಧಾರ್ಮಿಕ ಧ್ವಜವನ್ನು ಹಿಡಿದು ಶಾಂತಿಯುತವಾಗಿ ಸಾಗುತ್ತಿದ್ದರು ಎಂದು ಹೇಳುತ್ತಾರೆ. ಮೀರಾ-ಭಾಯಂದರ್ ಮೂಲಕ ಹಾದು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ನಿರ್ದಿಷ್ಟ ಸಮುದಾಯದ ಕೆಲವರು ಯಾತ್ರೆಯಲ್ಲಿ ಪ್ರಯಾಣಿಸುತ್ತಿದ್ದ ಕಾರುಗಳ ಮುಂದೆ ನಿಂತರು. ಅವರು ಕಾರುಗಳ ಮೇಲೆ ದಾಳಿ ಮಾಡಿದ್ದರು.
Rioting has apparently started. This is Mira Road in North Mumbai. You can see vehicles carrying the Ram Dhwaj being attacked some time back. Please be careful. pic.twitter.com/MZfDjYKR9C
— Abhijit Iyer-Mitra (@Iyervval) January 21, 2024
ಸಣ್ಣ ವಿಷಯಕ್ಕೆ ಜಗಳವಾಗಿದೆ, ಇದನ್ನು ಹೊರತುಪಡಿಸಿ ಯಾವುದೇ ದೊಡ್ಡ ಸಮಸ್ಯೆ ಇಲ್ಲಿ ಉದ್ಭವಿಸಲಿಲ್ಲ. ಜನರು ವದಂತಿಗಳಿಗೆ ಗಮನ ಕೊಡಬೇಡಿ ಎಂದು ಅವರು ವಿನಂತಿಸಿದ್ದಾರೆ ಮತ್ತು ಘಟನೆಗೆ ಸಂಬಂಧಿಸಿದಂತೆ ಯಾವುದೇ ಕೋಮುಗಲಭೆ ವರದಿಯಾಗಿಲ್ಲ ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.
ಈ ಬಗ್ಗೆ ಪೊಲೀಸರು ತನಿಖೆಗೆ ಆದೇಶಿಸಿದ್ದಾರೆ. ತನಿಖೆಯ ಆಧಾರದ ಮೇಲೆ ಮಾತ್ರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ನಡೆಯಲಿರುವ ಕಾರ್ಯಕ್ರಮಗಳನ್ನು ಶಾಂತಿಯುತವಾಗಿ ನಡೆಸಲು ಅಧಿಕಾರಿಗಳು ಎಚ್ಚರಿಕೆ ವಹಿಸಿದ್ದಾರೆ.
ಪೊಲೀಸರು ಎಲ್ಲೆಡೆ ನಿಗಾ ಇರಿಸಿದ್ದಾರೆ. ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಂಡಿದೆ. ಇಂದು, ಪ್ರಾಣ ಪ್ರತಿಷ್ಠೆಯ ನಂತರ, ರಾಮ ಭಕ್ತರಿಗಾಗಿ ದೇವಾಲಯವನ್ನು ತೆರೆಯಲಾಗುತ್ತದೆ.