ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿಯ ನಾಲ್ವರ ಕೊಲೆ ಪ್ರಕರಣ ; ಸಂಜೆಯೊಳಗೆ ತನಿಖೆಯ ಸ್ಪಷ್ಟ ಚಿತ್ರಣ ಸಿಗಲಿದೆ - ಎಸ್ ಪಿ. ಡಾ. ಅರುಣ್

Twitter
Facebook
LinkedIn
WhatsApp
ಉಡುಪಿಯ ನಾಲ್ವರ ಕೊಲೆ ಪ್ರಕರಣ ; ಸಂಜೆಯೊಳಗೆ ತನಿಖೆಯ ಸ್ಪಷ್ಟ ಚಿತ್ರಣ ಸಿಗಲಿದೆ - ಎಸ್ ಪಿ. ಡಾ. ಅರುಣ್

ಉಡುಪಿ: ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಉಡುಪಿ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರವೀಣ್ ಅರುಣ್ ಚೌಗಲೆ ಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಉಡುಪಿ ಎಸ್ ಪಿ ಡಾ. ಅರುಣ್ ಹೇಳಿಕೆ ನೀಡಿದ್ದಾರೆ.

ಘಟನೆ ಕುರಿತು ಮಾತನಾಡಿದ ಅವರು ನಾಲ್ವರ ಹತ್ಯೆಗೆ ಸಂಬಂಧಿಸಿ ಪ್ರವೀಣ್ ಅರುಣ್ ಚೌಗಲೆ ಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ, ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದೇವೆ ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ಚೌಗಲೆ ಯನ್ನು ವಶಕ್ಕೆ ಪಡೆಯಲಾಗಿದ್ದು ಇದರೊಂದಿಗೆ ಹಲವಾರು ಶಂಕಿತರ ವಿಚಾರಣೆಯನ್ನೂ ಮಾಡುತ್ತಿದ್ದೇವೆ ಎಂದು ಹೇಳಿದರು.

ಘಟನೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಹೇಳಿದರು.

Drought: ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಜಯಪುರ ಜಿಲ್ಲೆಯ ಬರ ಅಧ್ಯಯನ

ವಿಜಯಪುರ: ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಕೈಗಾರಿಕೆ ಖಾತೆ ಹೊಂದಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಬುಧವಾರ ಅಧ್ಯಯನ ಪ್ರವಾಸ ಆರಂಭಿಸಿದ್ದಾರೆ.

ಇಂಡಿ ಶಾಸಕ ಯಶವಂತ್ರಾಯಗೌಡ ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಜೊತೆಗೂಡಿ ಜಿಲ್ಲೆಯ ಬರ ಪರಿಸ್ಥಿತಿ ಪರಿಶೀಲನೆ ನಡೆಸಿದರು.

ವಿಜಯಪುರ ತಾಲೂಕಿನ ತಿಡಗುಂದಿ ಗ್ರಾಮದ ಬಳಿ ಮುಳವಾಡ ಏತ ನೀರಾವರಿ ಯೋಜನೆ 2 ರ ಕಾಲುವೆ ವೀಕ್ಷಣೆ ನಡೆಸಿದರು.

ವಿವಿಧ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚುವರು, ಭೀಕರ ಬರಗಾಲ ಇರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕೆರೆಗೆ ನೀರು ತುಂಬಿಸಲು ಆದ್ಯತೆ ನೀಡುವಂತೆ ಸೂಚಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ