ಮೈಸೂರು ದಸರಾ- ತಪ್ಪಿದ ಭಾರೀ ಅನಾಹುತ!
ನಾಡಹಬ್ಬ ಮೈಸೂರು ದಸರಾಕ್ಕೆ ಕೌಂಟ್ಡೌನ್ ಶುರುವಾಗಿದೆ. ದಸರಾ ಉದ್ಘಾಟನೆಗೆ ಇನ್ನು ಎರಡೇ ದಿನ ಬಾಕಿ ಉಳಿದಿದ್ದು, ಈಗಾಗಲೇ ದಸರಾ ಆಚರಣೆಗೆ ಭರ್ಜರಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಆದ್ರೆ, ದಸರಾ ಆರಂಭಕ್ಕೂ ಮುನ್ನ ಅವಘಡವೊಂದು ಸಂಭವಿಸಿದೆ.
ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು, ಇದರಿಂದ ವಿದ್ಯುತ್ ದೀಪಾಲಂಕಾರದ ಕಂಬ ಉರುಳಿಬಿದ್ದಿರುವ ಘಟನೆ ನಡೆದಿದೆ.
ಅಪಘಾತ ವೇಳೆ ಬಸ್ವೊಂದು ದಸರಾ ದೀಪಾಲಂಕಾರ ಕಮಾನಿಗೆ ಗುದ್ದಿದೆ. ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಘಟನೆ ನಡೆದಿದೆ.
ವಿದ್ಯುತ್ ದೀಪಾಲಂಕಾರಕ್ಕಾಗಿ ಬೆಂಗಳೂರು ಮೈಸೂರು ರಿಂಗ್ ರಸ್ತೆ ಬಳಿ ಹಾಕಲಾಗಿದ್ದ ವಿದ್ಯುತ್ ಕಮಾನು ಬಿದಿದೆ. ಪರಿಣಾಮ ಕೆಎಸ್‌ಆರ್‌ಟಿಸಿ ಬಸ್ ಮುಂಭಾಗ ಜಖಂಗೊಂಡಿದೆ.
ಖಾಸಗಿ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಅಪಘಾತ ಅಪಘಾತ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಘಟನೆಯಿಂದ ಕೆಲ ಕಾಲ ವಾಹನ ಸಂಚಾರ ಸಮಸ್ಯೆಯಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ನರಸಿಂಹರಾಜ ಸಂಚಾರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು.
ರಾಜಧಾನಿ ಬೆಂಗಳೂರು ಹೆಬ್ಬಾಗಿಲಲ್ಲೇ ನಡೀತು ಸಿನಿಮಾ ಶೈಲಿಯ ಕಿಡ್ನಾಪ್, ಎರಡು ದಿನಗಳ ಬಳಿಕ ಯುವಕನ ಮೃತದೇಹ ಪತ್ತೆ
ನೆಲಮಂಗಲ, ಅ.13: ಕೆಲಸಕ್ಕೆ ಹೋದ ಮಗ ಮನೆಗೆ ಬರುವವರೆಗೆ ಪೋಷಕರಿಗೆ ನೆಮ್ಮದಿಯೇ ಇರಲ್ಲ. ಹಾಗಾಗಿದೆ ಬೆಂಗಳೂರಿನ (Bengaluru) ಪರಿಸ್ಥಿತಿ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಸಿನಿಮೀಯ ಶೈಲಿಯಲ್ಲಿ ಕಿಡ್ನಾಪ್ ಆಗಿದ್ದ ಯುವಕನ ಮೃತದೇಹ ನೆಲಮಂಗಲದ ಚಿಕ್ಕಚಿಕ್ಕನಹಳ್ಳಿ ಬಳಿ ಪತ್ತೆಯಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪೋಷಕರು ಮಿಸ್ಸಿಂಗ್ ದೂರು ಕೊಟ್ಟಾಗಲೇ ಅಪಹರಣ ಮತ್ತು ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.
ಡಿಪ್ಲೋಮಾದಲ್ಲಿ ಇಂಜಿನಿಯರಿಂಗ್ ಮಾಡಿದ್ದ ದಾವಣಗೆರೆ ಮೂಲದ ಯುವಕ ಲೋಕೇಶ್ ಎಂಬವರು ಪೀಣ್ಯ ಬಳಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಅಕ್ಟೋಬರ್ 5 ರಂದು ಕಚೇರಿ ಕೆಲಸ ಮುಗಿಸಿ ನಾಗಸಂದ್ರ ಬಳಿ ಬರುತ್ತಿದ್ದ ಲೋಕೇಶ್, ಇನ್ನೇನು ಮನೆಗೆ ತಲುಪುವ ವೇಳೆ ಕಿಡ್ನಾಪ್ ಆಗಿದ್ದಾರೆ.
ಇತ್ತ, ಮಗ ಮನೆಗೆ ಬಾರದ್ದನ್ನು ನೋಡಿ ಗಾಬರಿಗೊಂಡ ಪೋಷಕರು, ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ದಾರಿಯಲ್ಲಿದ್ದ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಿಡ್ನಾಫ್ ಆಗಿರುವುದು ತಿಳಿದು ಬಂದಿದೆ.
ಇಬ್ಬರು ವ್ಯಕ್ತಿಗಳು ಲೋಕೇಶ್ ಅವರನ್ನು ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಹೆದ್ದಾರಿ ಪಕ್ಕದಲ್ಲಿ ಬಲವಂತವಾಗಿ ಬೈಕ್ನಲ್ಲಿ ಕೂರಿಸಿ ಕಿಡ್ನಾಪ್ ಮಾಡಿದ್ದಾರೆ. ಅಕ್ಟೋಬರ್ 5 ರಂದು ಕಿಡ್ನಾಪ್ ಮಾಡಲಾಗಿದ್ದು, 8 ರಂದು ನೆಲಮಂಗಲದ ಚಿಕ್ಕಕುಕ್ಕನಹಳ್ಳಿ ಬಳಿ ಮೃತದೇಹ ಪತ್ತೆಯಾಗಿದೆ.
ಸದ್ಯ, ಪ್ರಕರಣ ದಾಖಲಿಸಿಕೊಂಡ ಮಾದನಾಯಕನಹಳ್ಳಿ ಠಾಣಾ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಲೋಕೇಶ್ ಅವನರನ್ನು ಕಿಡ್ನಾಪ್ ಮಾಡಿದ್ದು ಯಾರು? ಕೊಲೆ ಮಾಡಿದ್ದು ಯಾರು? ಕೊಲೆಯಾಗಿದ್ದು ಎಲ್ಲಿ ಎಂಬಿತ್ಯಾದಿ ವಿಚಾರವಾಗಿ ತನಿಖೆ ನಡೆಸುತ್ತಿದ್ದಾರೆ.