ಮಂಗಳೂರು ನಳಿನ್ ವಿರುದ್ಧ ಹರೀಶ್ ಕುಮಾರ್, ಉಡುಪಿ: ಜಯ ಪ್ರಕಾಶ್ ಹೆಗ್ಡೆ ವಿರುದ್ಧ ಮಧ್ವರಾಜ್ ಸ್ಪರ್ಧೆ?
ಮಂಗಳೂರು: ದೇಶಾದ್ಯಂತ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಕುತೂಹಲಗಳು ಇನ್ನಿಲ್ಲದಂತೆ ಹೆಚ್ಚಾಗಿದೆ. ಲೋಕಸಭಾ ಚುನಾವಣೆಯ 2024 ಮಂಗಳೂರು ಕ್ಷೇತ್ರ ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಗಳು ಯಾರಾಗಬಹುದೆಂಬ ಲೆಕ್ಕಾಚಾರಗಳು ನಡೆಯುತ್ತಿವೆ.
ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ (BJP) ಅಭ್ಯರ್ಥಿಯಾಗಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೊಮ್ಮೆ ಆಯ್ಕೆಯಾಗುವುದು ಪಕ್ಕ ಎನ್ನಲಾಗುತ್ತಿದೆ. ಸಂಘಟನಾತ್ಮಕವಾಗಿ ನಳಿನ್ ಪ್ರಬಲವಾಗಿರುವುದೇ ಹಾಗೂ ಹೈಕಮಾಂಡ್ ಕೃಪಾಕಟಾಕ್ಷ ಈ ಆಯ್ಕೆಗೆ ಕಾರಣ ಎನ್ನಲಾಗುತ್ತಿದೆ. ಇನ್ನೊಂದು ಕಡೆ ಮಂಗಳೂರಿನ ಕಾಂಗ್ರೆಸ್ (CONGRESS) ಲೋಕಸಭಾ ಅಭ್ಯರ್ಥಿಯಾಗಿ ಹಾಲಿ ಎಂಎಲ್ಸಿ ಹರೀಶ್ ಕುಮಾರ್ ಆಯ್ಕೆ ಆಗುವ ಸಂಭವವಿದೆ ಎನ್ನಲಾಗುತ್ತಿದೆ. (Nalin Vs Harish Kumar)
ವಿಧಾನ ಪರಿಷತ್ತಿನಲ್ಲಿ ಜನಸಾಮಾನ್ಯರ ರೆವಿನ್ಯೂ ವಿಷಯಗಳಿಗೆ ಸಂಬಂಧಪಟ್ಟಂತೆ ಹಲವಾರು ಪ್ರಶ್ನೆಗಳನ್ನು ಎತ್ತಿರುವುದು ಹಾಗೂ ಪಕ್ಷದ ಒಳಗೆ ಎಲ್ಲರೊಂದಿಗೆ ಚೆನ್ನಾಗಿ ಇರುವುದು ಹರೀಶ್ ಕುಮಾರ್ ಅವರಿಗೆ ಪ್ಲಸ್ ಪಾಯಿಂಟ್ ಎನ್ನಲಾಗುತ್ತಿದೆ.
ಇತ್ತ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಆಯ್ಕೆಯಾಗುವ ಸಂಭವವಿದೆ ಎನ್ನಲಾಗುತ್ತಿದೆ. ಆಡಳಿತದ ಬಗ್ಗೆ ಉತ್ತಮ ಜ್ಞಾನ ಹೊಂದಿರುವ ಜಯಪ್ರಕಾಶ್ ಹೆಗ್ಡೆ ಜನಪ್ರಿಯತೆಯನ್ನು ಗಳಿಸಿಕೊಂಡಿರುವ ರಾಜಕೀಯ ನಾಯಕ. ಇರುವವರಿಗೆ ಪೂರಕವಾದ ಅಂಶ ಆಗಿದೆ ಎನ್ನಲಾಗುತ್ತಿದೆ.
ಈ ಬಾರಿ ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಮೋದ್ಮ ಮಧ್ವರಾಜ್ ಆಯ್ಕೆ ಆಗುವ ಸಂಭವವಿದೆ ಎನ್ನಲಾಗುತ್ತಿದೆ. ಶಾಸಕರಾಗಿ, ಮಂತ್ರಿಯಾಗಿ ಉತ್ತಮ ಕೆಲಸವನ್ನು ಮಾಡಿರುವ ಪ್ರಮೋದ್ ಮಧ್ವರಾಜ್ ಬಗ್ಗೆ ಜನರಲ್ಲಿ ಉತ್ತಮ ಒಲವು ಇದೆ ಎನ್ನಲಾಗುತ್ತಿದೆ. (Jaya Prakash Hegde Vs Madhwaraj)
ಉಡುಪಿ ಚಿಕ್ಕಮಗಳೂರು ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರವನ್ನು ಎರಡು ಪಕ್ಷಗಳು ಗಂಭೀರವಾಗಿ ಪರಿಗಣಿಸಿದ್ದು ರಣತಂತ್ರವನ್ನು ರೂಪಿಸುತ್ತಿವೆ.