ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್, ಸಿಟಿ ರವಿಗೆ ರಾಜ್ಯಾಧ್ಯಕ್ಷ ಪಟ್ಟ?
ನವದೆಹಲಿ: ಭಾರತೀಯ ಜನತಾ ಪಕ್ಷ (BJP) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ (CT Ravi) ಅವರಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ (BL Santosh) ಅವರನ್ನು ಮುಂದುವರೆಸಲಾಗಿದೆ. ಇನ್ನು ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯ ನಾಯಕರ ಮೇಲೆ ಮುನಿಸಿಕೊಂಡಿದೆಯಾ ಹೈಕಮಾಂಡ್ ?
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 66 ಕ್ಷೇತ್ರಗಳಲ್ಲಿ ಗೆಲ್ಲುವ ಮುಖಾಂತರ ಹೀನಾಯವಾಗಿ ಸೋಲು ಕಂಡಿತು. ಇದರಿಂದ ಬಿಜೆಪಿ ನಾಯಕರಿಗೆ ಭಾರಿ ಮುಖಭಂಗವಾಯಿತು ಎನ್ನಲಾಗುತ್ತಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರ ಮೇಲೆ ಮುನಿಸಿಕೊಂಡು, ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯಲ್ಲಿ ಕರ್ನಾಟಕದ ಬಿಎಲ್ ಸಂತೋಷ್ ಹೊರತು ಪಡಿಸಿ ಬೇರೆಯವರಿಗೆ ಸ್ಥಾನ ನೀಡಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ.
भाजपा राष्ट्रीय अध्यक्ष श्री @JPNadda ने निम्नलिखित केंद्रीय पदाधिकारियों के नामों की घोषणा की है- pic.twitter.com/0aaArxHF30
— BJP (@BJP4India) July 29, 2023
ಸದ್ಯದಲ್ಲೆ ಬದಲಾಗುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ?
ಇನ್ನು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅಧಿಕಾರವಧಿ ಮುಗಿದಿದ್ದು, ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಮುಂದುವರೆಸಲಾಗಿತ್ತು. ಇದೀಗ ಚುನಾವಣೆ ಮುಗಿದಿದ್ದು, ಅಧ್ಯಕ್ಷ ಸ್ಥಾನ ಬದಲಾವಣೆಯಾಗಬೇಕು ಎಂಬ ಮಾತು ಬಿಜೆಪಿ ಪಾಳಯದಲ್ಲೇ ಕೇಳಿಬರುತ್ತಿದೆ. ಹೀಗಾಗಿ ಸಿ.ಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಿಂದ ಕೈಬಿಟ್ಟು, ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಬಿಜೆಪಿ ಕೇಂದ್ರ ನಾಯಕರು ಪ್ಲಾನ್ ರೂಪಿಸಿದ್ದಾರಾ ಎಂಬ ಪ್ರಶ್ನೆ ಉದ್ಭವವಾಗಿದೆ. ಆದರೆ ಈ ಅಧ್ಯಕ್ಷ ಕುರ್ಚಿ ಮೇಲೆ ರಾಜ್ಯ ಕೆಲ ಹಿರಿಯ ನಾಯಕರು ಈಗಾಗಲೆ ಟವಲ್ ಹಾಕಿದ್ದಾರೆ. ಅವರನ್ನು ಬಿಟ್ಟು ಒಂದು ವೇಳೆ ಸಿ.ಟಿ ರವಿ ಅಧ್ಯಕ್ಷ ಸ್ಥಾನದಲ್ಲಿ ಕೂತರೇ ಮಾಜಿ ಪ್ರಧಾನಿ ದೇವೇಗೌಡರು ನುಡಿದ ಭವಿಷ್ಯವಾಣಿ ನಿಜವಾಗಲಿದೆ.
Karnataka Congress: ಶಾಸಕರು ಸೇರಿದಂತೆ ರಾಜ್ಯದ 25 ನಾಯಕರಿಗೆ ದೆಹಲಿ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ
ದೆಹಲಿ, ಜು 29: ರಾಜ್ಯ ಕಾಂಗ್ರೆಸ್ ಶಾಸಕರ (Congress MLAs) ಪತ್ರ ವ್ಯವಹಾರ ದೆಹಲಿ ಕಾಂಗ್ರೆಸ್ ನಾಯಕರಿಗೆ ದೊಡ್ಡ ತಲೆನೋವುವಾಗಿದೆ, ಸಿಎಂ ಸಿದ್ಧರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ಶಾಸಕರು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು, ಈ ಸಭೆಯಲ್ಲಿ ರಾಜೀನಾಮೆ ಬೆದರಿಕೆಗಳು ಕೂಡ ಮಾಡಲಾಗಿತ್ತು ಎಂದು ಹೇಳಲಾಗಿದೆ. ಇದೀಗ ಸಚಿವರ ವಿರುದ್ಧ ಅಸಹಕಾರ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ ನೀಡಿದೆ. ಶಾಸಕಾಂಗ ಪಕ್ಷದ ಸಭೆಯ ನಂತರ ಈ ಬೆಳವಣಿಗೆ ನಡೆದಿದೆ. ಇದೀಗ ಸಚಿವರು ಮತ್ತು ಪ್ರಮುಖ ನಾಯಕರು ಆಗಸ್ಟ್ 2ಕ್ಕೆ ದೆಹಲಿಗೆ ಬರುವಂತೆ ಹೈಕಮಾಂಡ್ ತಿಳಿಸಿದೆ. ಸಚಿವರ ವಿರುದ್ಧ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಕೆಲ ಶಾಸಕರು, ಸಚಿವರಿಗೆ ಹಾಗೂ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ ಬಿ.ಕೆ.ಹರಿಪ್ರಸಾದ್, ಬಿ.ಎಲ್.ಶಂಕರ್ ಅವರಿಗೆ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಹೈಕಮಾಂಡ್ ಈ ಶಾಸಕರು , ಸಚಿವರು, ಹಿರಿಯರ ನಾಯಕರ ಜತೆಗೆ ಕಾಂಗ್ರೆಸ್ ಶಾಸಕರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮತ್ತು ಶಾಸಕಾಂಗ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಚರ್ಚೆ ನಡೆಸಲಿದೆ ಎಂದು ನ್ಯೂಸ್9 ವರದಿ ಮಾಡಿದೆ.
ಇನ್ನೂ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಕಾರ್ಯಕ್ರಮವೊಂದರಲ್ಲಿ ಶಾಸಕ ಹರಿಪ್ರಸಾದ್ ನನಗೆ ಸಿಎಂ ಮಾಡಲು ಗೊತ್ತು, ಸ್ಥಾನದಿಂದ ಇಳಿಸಲು ಗೊತ್ತು ಎಂಬ ಹೇಳಿಕೆಯ ಬಗ್ಗೆಯು ಹೈಕಮಾಂಡ್ ಈ ಸಭೆಯಲ್ಲಿ ಚರ್ಚೆ ನಡೆಸಬಹುದು ಎಂದು ವರದಿ ಹೇಳಿದೆ. ವರದಿಗಳ ಪ್ರಕಾರ ಶಾಸಕರ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಸಮನ್ವಯ ಸಮಿತಿಯನ್ನು ರಚಿಸಬಹುದು. ಸರ್ಕಾರ ಮತ್ತು ಪಕ್ಷದ ನಾಯಕರ ನಡುವೆ ಸೇತುವೆಯಾಗಿ ಕೆಲಸ ಮಾಡಲು ಗೃಹ ಸಚಿವ ಡಾ ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಬಹುದು ಎಂದು ಹೇಳಲಾಗಿದೆ.