ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್, ಸಿಟಿ ರವಿಗೆ ರಾಜ್ಯಾಧ್ಯಕ್ಷ ಪಟ್ಟ?

Twitter
Facebook
LinkedIn
WhatsApp
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್, ಸಿಟಿ ರವಿಗೆ ರಾಜ್ಯಾಧ್ಯಕ್ಷ ಪಟ್ಟ?

ನವದೆಹಲಿ: ಭಾರತೀಯ ಜನತಾ ಪಕ್ಷ (BJP) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ (CT Ravi) ಅವರಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್​.ಸಂತೋಷ್ (BL Santosh) ಅವರನ್ನು ಮುಂದುವರೆಸಲಾಗಿದೆ. ಇನ್ನು ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ರಾಜ್ಯ ನಾಯಕರ ಮೇಲೆ ಮುನಿಸಿಕೊಂಡಿದೆಯಾ ಹೈಕಮಾಂಡ್ ?

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 66 ಕ್ಷೇತ್ರಗಳಲ್ಲಿ ಗೆಲ್ಲುವ ಮುಖಾಂತರ ಹೀನಾಯವಾಗಿ ಸೋಲು ಕಂಡಿತು. ಇದರಿಂದ ಬಿಜೆಪಿ ನಾಯಕರಿಗೆ ಭಾರಿ ಮುಖಭಂಗವಾಯಿತು ಎನ್ನಲಾಗುತ್ತಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್​​​ ರಾಜ್ಯ ಬಿಜೆಪಿ ನಾಯಕರ ಮೇಲೆ ಮುನಿಸಿಕೊಂಡು, ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯಲ್ಲಿ ಕರ್ನಾಟಕದ ಬಿಎಲ್​ ಸಂತೋಷ್​ ಹೊರತು ಪಡಿಸಿ ಬೇರೆಯವರಿಗೆ ಸ್ಥಾನ ನೀಡಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ.

ಸದ್ಯದಲ್ಲೆ ಬದಲಾಗುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ?

ಇನ್ನು ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಅವರ ಅಧಿಕಾರವಧಿ ಮುಗಿದಿದ್ದು, ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಮುಂದುವರೆಸಲಾಗಿತ್ತು. ಇದೀಗ ಚುನಾವಣೆ ಮುಗಿದಿದ್ದು, ಅಧ್ಯಕ್ಷ ಸ್ಥಾನ ಬದಲಾವಣೆಯಾಗಬೇಕು ಎಂಬ ಮಾತು ಬಿಜೆಪಿ ಪಾಳಯದಲ್ಲೇ ಕೇಳಿಬರುತ್ತಿದೆ. ಹೀಗಾಗಿ ಸಿ.ಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಿಂದ ಕೈಬಿಟ್ಟು, ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಬಿಜೆಪಿ ಕೇಂದ್ರ ನಾಯಕರು ಪ್ಲಾನ್​ ರೂಪಿಸಿದ್ದಾರಾ ಎಂಬ ಪ್ರಶ್ನೆ ಉದ್ಭವವಾಗಿದೆ. ಆದರೆ ಈ ಅಧ್ಯಕ್ಷ ಕುರ್ಚಿ ಮೇಲೆ  ರಾಜ್ಯ ಕೆಲ ಹಿರಿಯ ನಾಯಕರು ಈಗಾಗಲೆ ಟವಲ್​ ಹಾಕಿದ್ದಾರೆ. ಅವರನ್ನು ಬಿಟ್ಟು ಒಂದು ವೇಳೆ ಸಿ.ಟಿ ರವಿ ಅಧ್ಯಕ್ಷ ಸ್ಥಾನದಲ್ಲಿ ಕೂತರೇ ಮಾಜಿ ಪ್ರಧಾನಿ ದೇವೇಗೌಡರು ನುಡಿದ ಭವಿಷ್ಯವಾಣಿ ನಿಜವಾಗಲಿದೆ.

Karnataka Congress: ಶಾಸಕರು ಸೇರಿದಂತೆ ರಾಜ್ಯದ 25 ನಾಯಕರಿಗೆ ದೆಹಲಿ ಬರುವಂತೆ ಕಾಂಗ್ರೆಸ್​ ಹೈಕಮಾಂಡ್ ಸೂಚನೆ

ದೆಹಲಿ, ಜು 29: ರಾಜ್ಯ ಕಾಂಗ್ರೆಸ್​​ ಶಾಸಕರ (Congress MLAs) ಪತ್ರ ವ್ಯವಹಾರ ದೆಹಲಿ ಕಾಂಗ್ರೆಸ್​​ ನಾಯಕರಿಗೆ ದೊಡ್ಡ ತಲೆನೋವುವಾಗಿದೆ, ಸಿಎಂ ಸಿದ್ಧರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ಶಾಸಕರು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು, ಈ ಸಭೆಯಲ್ಲಿ ರಾಜೀನಾಮೆ ಬೆದರಿಕೆಗಳು ಕೂಡ ಮಾಡಲಾಗಿತ್ತು ಎಂದು ಹೇಳಲಾಗಿದೆ. ಇದೀಗ ಸಚಿವರ ವಿರುದ್ಧ ಅಸಹಕಾರ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ ನೀಡಿದೆ. ಶಾಸಕಾಂಗ ಪಕ್ಷದ ಸಭೆಯ ನಂತರ ಈ ಬೆಳವಣಿಗೆ ನಡೆದಿದೆ. ಇದೀಗ ಸಚಿವರು ಮತ್ತು ಪ್ರಮುಖ ನಾಯಕರು ಆಗಸ್ಟ್​ 2ಕ್ಕೆ ದೆಹಲಿಗೆ ಬರುವಂತೆ ಹೈಕಮಾಂಡ್ ತಿಳಿಸಿದೆ. ಸಚಿವರ ವಿರುದ್ಧ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಕೆಲ ಶಾಸಕರು, ಸಚಿವರಿಗೆ ಹಾಗೂ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ ಬಿ.ಕೆ.ಹರಿಪ್ರಸಾದ್, ಬಿ.ಎಲ್.ಶಂಕರ್ ಅವರಿಗೆ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಹೈಕಮಾಂಡ್ ಈ  ಶಾಸಕರು , ಸಚಿವರು, ಹಿರಿಯರ ನಾಯಕರ ಜತೆಗೆ ಕಾಂಗ್ರೆಸ್​ ಶಾಸಕರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮತ್ತು ಶಾಸಕಾಂಗ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ  ಚರ್ಚೆ ನಡೆಸಲಿದೆ ಎಂದು ನ್ಯೂಸ್​​9 ವರದಿ ಮಾಡಿದೆ.

ಇನ್ನೂ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಕಾರ್ಯಕ್ರಮವೊಂದರಲ್ಲಿ ಶಾಸಕ ಹರಿಪ್ರಸಾದ್ ನನಗೆ ಸಿಎಂ ಮಾಡಲು ಗೊತ್ತು, ಸ್ಥಾನದಿಂದ ಇಳಿಸಲು ಗೊತ್ತು ಎಂಬ ಹೇಳಿಕೆಯ ಬಗ್ಗೆಯು ಹೈಕಮಾಂಡ್ ಈ ಸಭೆಯಲ್ಲಿ ಚರ್ಚೆ ನಡೆಸಬಹುದು ಎಂದು ವರದಿ ಹೇಳಿದೆ. ವರದಿಗಳ ಪ್ರಕಾರ ಶಾಸಕರ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಸಮನ್ವಯ ಸಮಿತಿಯನ್ನು ರಚಿಸಬಹುದು. ಸರ್ಕಾರ ಮತ್ತು ಪಕ್ಷದ ನಾಯಕರ ನಡುವೆ ಸೇತುವೆಯಾಗಿ ಕೆಲಸ ಮಾಡಲು ಗೃಹ ಸಚಿವ ಡಾ ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಬಹುದು ಎಂದು ಹೇಳಲಾಗಿದೆ.

ಈ ಸಭೆಯಲ್ಲಿ ಮಂಡಳಿ ಮತ್ತು ನಿಗಮಗಳ ಮುಖ್ಯಸ್ಥರನ್ನು ನೇಮಕಾ ಮಾಡುವ ಬಗ್ಗೆ ಸಭೆಯಲ್ಲಿ ಕಾಂಗ್ರೆಸ್​​ ನಾಯಕರು ಚರ್ಚೆ ಮಾಡಬಹುದು ಎಂದು ಹೇಳಲಾಗಿದೆ. ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಸಭೆ ನಡೆಸಲಾಗುವುದು ಮತ್ತು ಸಭೆಯಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ಕೂಡ ಭಾಗವಹಿಸುವ ಸಾಧ್ಯತೆ ಇದೆ. ಇದರ ಜತೆಗೆ 2024ರ ಲೋಕಸಭೆ ಚುನಾವಣೆ ಕಾರ್ಯತಂತ್ರದ ಬಗ್ಗೆಯು ಚರ್ಚೆ ನಡೆಯಬಹುದು ಎಂದು ಹೇಳಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist