ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Neeraj Chopra: ಬೆಳ್ಳಿ ಗೆದ್ದ ನೀರಜ್‌ ಚೋಪ್ರಾ, ಕೈ ಜಾರಿದ ಚಿನ್ನ!

Twitter
Facebook
LinkedIn
WhatsApp
Neeraj Chopra

Neeraj Chopra: ಪ್ರಸ್ತುತ ನಡೆಯುತ್ತಿರುವ 2024ರ ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತದ ಜಾವೆಲಿನ್ ಪಟು ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆಲ್ಲುವಲ್ಲಿ ವಿಫಲವಾದರೂ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಆದರೆ, ಇವರ ಬಲಿಷ್ಠ ಸ್ಪರ್ಧಿ ಪಾಕಿಸ್ತಾನದ ಅರ್ಷದ್‌ ಖಾನ್‌ ದಾಖಲೆಯ 92.97 ಮೀಟರ್ ಜಾವೆಲಿನ್‌ ಎಸೆಯುವ ಮೂಲಕ ಐತಿಹಾಸಿಕ ಚಿನ್ನದ ಪದಕವನ್ನು ಗೆದದ್ದುಕೊಂಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 5ನೇ ಪದಕ ದಕ್ಕಿದೆ. ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಸತತ ಎರಡನೇ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ ಈ ಬಾರಿ ಪದಕದ ಬಣ್ಣ ಬದಲಾಗಿದೆ. ಕಳೆದ ಬಾರಿಯ ಒಲಿಂಪಿಕ್ಸ್​ನಲ್ಲಿ ಅಂದರೆ 2020 ರಲ್ಲಿ ನಡೆದಿದ್ದ ಟೋಕಿಯೋ ಒಲಿಂಪಿಕ್ಸ್​ನಲ್ಲಿ 87.58 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದ ನೀರಜ್ ಚೋಪ್ರಾ, ಇದೀಗ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

ಇನ್ನು ಇದೇ ಸ್ಪರ್ಧೆಯಲ್ಲಿ ಕಳೆದ ಒಲಿಂಪಿಕ್ಸ್​ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದ ಪಾಕಿಸ್ತಾನದ ಅರ್ಷದ್ ನದೀಮ್ ಈ ಬಾರಿ ದಾಖಲೆಯ 92.97 ಮೀ. ದೂರ ಜಾವೆಲಿನ್ ಎಸೆದು ಇತಿಹಾಸ ನಿರ್ಮಿಸಿದಲ್ಲದೆ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಮೊದಲ ಪ್ರಯತ್ನದಲ್ಲಿ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಕಾಲು ಗೆರೆ ತಾಗಿದ್ದರ ಪರಿಣಾಮ ಫೌಲ್ ಆಗಿ ವಿಫಲರಾಗಿದ್ದರು. ಆದರೆ 2ನೇ ಪ್ರಯತ್ನದಲ್ಲಿ 89.45 ಮೀಟರ್ ಗಳಿಗೆ ಭರ್ಜಿ ಎಸೆದಿದ್ದರು. 3ನೇ ಪ್ರಯತ್ನದಲ್ಲಿ ಮತ್ತೆ ಫೌಲ್ ಆಗಿದ್ದರು.

ಪಾಕಿಸ್ತಾನದ ಅರ್ಶದ್ ನದೀಮ್ ಮೊದಲ ಪ್ರಯತ್ನದಲ್ಲೇ 92.97 ಮೀಟರ್ ಭರ್ಜಿ ಎಸೆದು ಒಲಿಂಪಿಕ್ಸ್ ದಾಖಲೆಯನ್ನು ಮುರಿದು, ಚಿನ್ನದ ಪದಕಕ್ಕೆ ಪ್ರಬಲ ಪೈಪೋಟಿ ನೀಡಿದ್ದರು. ಈ ನಂತರದ ಸ್ಥಾನದಲ್ಲಿ ನೀರಜ್ ಚೋಪ್ರಾ ಇದ್ದರು. 3,4,5 ನೇ ಪ್ರಯತ್ನದಲ್ಲಿಯೂ ನೀರಜ್ ಚೋಪ್ರಾ ಫೌಲ್ ಆದರು. ಜರ್ಮನಿಯ ಜೂಲಿಯನ್ ವೆಬರ್ 87.33 ಮೀಟರ್ ಭರ್ಜಿ ಎಸೆಯುವ ಮೂಲಕ 3 ನೇ ಸ್ಥಾನದಲ್ಲಿದ್ದರು.

ದಾಖಲೆ ಬರೆದ ನದೀಮ್

ಈ ಮೂಲಕ ಒಲಿಂಪಿಕ್ಸ್‌ನಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಅರ್ಷದ್ ನದೀಮ್ ಪಾತ್ರರಾಗಿದ್ದಾರೆ. 

ಇದರೊಂದಿಗೆ ಪಾಕಿಸ್ತಾನದ 32 ವರ್ಷಗಳ ಒಲಿಂಪಿಕ್ಸ್‌ ಪದಕದ ಬರವನ್ನು ನದೀಮ್ ನೀಗಿಸಿದ್ದಾರೆ. ಇದಕ್ಕೂ ಮುನ್ನ 1992ರ ಬಾರ್ಸಿಲೋನಾ ಒಲಿಂಪಿಕ್ಸ್‌ನಲ್ಲಿ ಪಾಕಿಸ್ತಾನ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದಿತ್ತು.

ಅಂದ ಹಾಗೆ ಪಾಕ್‌ ಜಾವೆಲಿನ್‌ ಪಟು ಎರಡು ಬಾರಿ 90 ಮೀಟರ್‌ಗಿಂತ ದೂರ ಜಾವೆಲಿನ್ ಎಸೆದಿದ್ದು ವಿಶೇಷ

ಇದಕ್ಕೂ ಮುನ್ನ ಆಗಸ್ಟ್‌ 6 ರಂದು ನಡೆದಿದ್ದ 2024ರ ಒಲಿಂಪಿಕ್ಸ್‌ ಜಾವೆಲಿನ್‌ ಥ್ರೋ ಅರ್ಹತಾ ಸುತ್ತಿನಲ್ಲಿ ಭಾರತದ ಚಿನ್ನದ ಹುಡುಗ ನೀರಜ್‌ ಚೋಪ್ರಾ ದಾಖಲೆಯ ದೂರ ಜಾವೆಲಿನ್ ಅನ್ನು ಎಸೆದು ಫೈನಲ್‌ ಸುತ್ತಿಗೆ ಅರ್ಹತೆ ಪಡೆದಿದ್ದರು. ಅರ್ಹತಾ ಸುತ್ತಿನ ‘ಬಿ’ ಗುಂಪಿನಲ್ಲಿ ತಮ್ಮ ಮೊದಲ ಪ್ರಯತ್ನದಲ್ಲಿಯೇ ನೀರಜ್‌ ಚೋಪ್ರಾ 89.34 ಮೀಟರ್‌ ದೂರ ಜಾವೆಲಿನ್ ಅನ್ನು ಎಸೆದಿದ್ದರು. ಆ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದರು. ಅರ್ಹತಾ ಸುತ್ತಿನಲ್ಲಿ ಅತ್ಯಂತ ದೂರ ಜಾವೆಲಿನ್‌ ಎಸೆದ ಕೀರ್ತಿಗೆ ನೀರಜ್‌ ಭಾಜನರಾಗಿದ್ದರು.

ಬೆಳ್ಳಿ ಪದಕವನ್ನು ತನ್ನದಾಗಿಸಿಕೊಳ್ಳುವುದರೊಂದಿಗೆ ನೀರಜ್, ಒಲಿಂಪಿಕ್ಸ್‌ನಲ್ಲಿ ಸತತ ಎರಡು ಪದಕ ಗೆದ್ದ ಭಾರತದ ನಾಲ್ಕನೇ ಅಥ್ಲೀಟ್ ಎನಿಸಿಕೊಂಡರು. ಮೂರು ವರ್ಷಗಳ ಹಿಂದೆ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ನೀರಜ್ 87.58 ಮೀಟರ್‌ ದೂರ ಎಸೆದು ಚಿನ್ನ ಗೆದ್ದಿದ್ದರು. ಫೈನಲ್‌ನಲ್ಲಿ, ನೀರಜ್ ಜೂಲಿಯನ್ ವೆಬರ್, ಜಾಕೋಬ್ ವಾಡ್ಲೆಚ್ ಮತ್ತು ಜೊಹಾನ್ಸ್ ವೆಟರ್ ಅವರನ್ನು ಹಿಂದಿಕ್ಕಿ ಈ ಐತಿಹಾಸಿಕ ಸಾಧನೆ ಮಾಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ