ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
Twitter
Facebook
LinkedIn
WhatsApp
ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರ್ ಪೇಟೆಯ ಕೂಟೇಲು ಸೇತುವೆ ಸಮೀಪ ನೇತ್ರಾವತಿ ನದಿಯಲ್ಲಿ ಸುಮಾರು 48 ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಪುರಸಭಾ ಸದಸ್ಯ ಮೊಹಮ್ಮದ್ ಇಕ್ಬಾಲ್ ಅವರು ಬಂಟ್ವಾಳ ಪೇಟೆ ಕಡೆ ಹೋಗುತ್ತಿರುವ ಸಂದರ್ಭದಲ್ಲಿ ಕೂಟೇಲು ಸೇತುವೆ ಸಮೀಪದಲ್ಲಿ ಮಹಿಳೆಯ ಚಪ್ಪಲಿ ಕಂಡು ಬಂದ ಕಾರಣಕ್ಕಾಗಿ ನದಿಯಲ್ಲಿ ನೋಡಿದಾಗ ಮಹಿಳೆಯ ಮೃತದೇಹ ಕವಚಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು , ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಪರಿಚಿತ ಮಹಿಳೆಯ ಬಗ್ಗೆ ಗುರುತು ಪತ್ತೆಗಾಗಿ ಪೋಲೀಸರು ಮನವಿ ಮಾಡಿದ್ದು, ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.