NIA: ದಕ್ಷಿಣ ಕನ್ನಡ ಸೇರಿದಂತೆ 5 ರಾಜ್ಯಗಳಲ್ಲಿ 14 ಕಡೆ ಏಕಕಾಲಕ್ಕೆ ಎನ್ಐಎ ದಾಳಿ!
ಬೆಂಗಳೂರು, (ಆಗಸ್ಟ್ 13): ಕರ್ನಾಟಕ (Karnataka) ಸೇರಿದಂತೆ ಇತರೆ 5 ರಾಜ್ಯಗಳ 14 ಸ್ಥಳಗಳಲ್ಲಿ ಏಕಕಾಲಕ್ಕೆ ಎನ್ಐಎ(NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಎಫ್ ಐ(PFI) ಹಾಗೂ ಇತರೆ ಸಂಘಟನೆಗಳು ಉಗ್ರ ಚಟುವಟಿಕೆ ಹಾಗೂ ಇನ್ನಿತರ ಅಕ್ರಮ ಚಟುವಟಿಕೆ ಭಾಗಿಯಾಗಿರುವ ಶಂಕೆಯಲ್ಲಿ ಎನ್ಐಎ ದಾಳಿ ಮಾಡಿದೆ ಎಂದು ತಿಳಿದುಬಂದಿದೆ. ಭಾರತದಲ್ಲಿ 2047ರೊಳಗೆ ಪಿಎಫ್ ಐ ಆರ್ಮಿ ಸ್ಥಾಪಿಸಲು ಮುಂದಾಗಿರುವ ಮಾಹಿತಿ ಸಿಕ್ಕಿರುವ ಹಿನ್ನೆಲೆಯಲ್ಲಿ ಕರ್ನಾಟಕದ ದಕ್ಷಿಣ ಕನ್ನಡ , ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಹಾಗೂ ಇತರ ರಾಜ್ಯಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ಮಾಡಿದೆ.
ಶಸ್ತ್ರಾಸ್ತ್ರ ತರಬೇತಿ, ಐರನ್ ರಾಡ್ಸ್ , ಕತ್ತಿಗಳ ತರಬೇತಿ ನೀಡಿದ ಬಗ್ಗೆ ಮಾಹಿತಿ ಹಿನ್ನಲೆ ಕೆಲ ಪಿಎಫ್ಐ ಏಜೆಂಟ್ಗಳನ್ನ ಎನ್ಐಎ ಬಂಧಿಸಿತ್ತು. ಅಲ್ಲದೇ ಈ ಹಿಂದೆ ಪಿಎಫ್ಐನ 19 ಜನರ ವಿರುದ್ಧ ಚಾರ್ಚ್ ಶೀಟ್ ಸಲ್ಲಿಕೆ ಮಾಡಿತ್ತು ಇವರ ತನಿಖೆ ವೇಳೆ ಯುವಕರಿಗೆ ಅತಿ ಹೆಚ್ಚು ಪ್ರೋತ್ಸಾಹ ನೀಡಿ ಶಸ್ತ್ರಾಸ್ತ್ರ ತರಬೇತಿ ನೀಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದೆ.
ಕರ್ನಾಟಕದ ದಕ್ಷಿಣ ಕನ್ನಡ, ಕೇರಳದ ಕಣ್ಣೂರು ಮತ್ತು ಮಲಪ್ಪುರಂ ಜಿಲ್ಲೆ, ಮಹಾರಾಷ್ಟ್ರದ ನಾಸಿಕ್ ಮತ್ತು ಕೊಲ್ಹಾಪುರ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಬಿಹಾರದ ಕತಿಹಾರ್‌ನಲ್ಲಿ ದಾಳಿ ನಡೆದಿದ್ದು, ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈ ಆಸ್ಪತ್ರೆಯಲ್ಲಿ ಒಂದೇ ದಿನ 18 ರೋಗಿಗಳ ಸಾವು – ತನಿಖೆಗೆ ಆದೇಶಿಸಿದ ಸಿಎಂ ಶಿಂಧೆ:
ಮುಂಬೈ: ಥಾಣೆಯ ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆಯಲ್ಲಿ (Hospital) ಒಂದೇ ದಿನ 18 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ರೀತಿ ಒಂದೇ ದಿನ ಸಾವಿನ ಸಂಖ್ಯೆ ಇಷ್ಟು ಏರಿಕೆಯಾಗಿರುವುದಕ್ಕೆ ಕಳವಳ ವ್ಯಕ್ತವಾಗಿದೆ.
ಮೃತರಲ್ಲಿ 10 ಮಹಿಳೆಯರು ಮತ್ತು ಎಂಟು ಪುರುಷರು ಸೇರಿದ್ದಾರೆ. ಸತ್ತವರಲ್ಲಿ 12 ಜನ 50 ವರ್ಷ ಮೇಲ್ಪಟ್ಟವರಾಗಿದ್ದಾರೆ. ಘಟನೆಯ ಬಗ್ಗೆ ಅಲ್ಲಿನ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರು ಮಾಹಿತಿ ಪಡೆದಿದ್ದಾರೆ. ಅಲ್ಲದೇ ಆರೋಗ್ಯ ಸೇವೆಗಳ ಆಯುಕ್ತರ ನೇತೃತ್ವದಲ್ಲಿ ಸ್ವತಂತ್ರ ತನಿಖಾ ಸಮಿತಿಯನ್ನು ಸ್ಥಾಪಿಸಲು ಆದೇಶಿಸಿದ್ದಾರೆ. ಈ ಸಮಿತಿಯಲ್ಲಿ ಜಿಲ್ಲಾಧಿಕಾರಿ, ನಾಗರಿಕ ಮುಖ್ಯಸ್ಥರು, ಆರೋಗ್ಯ ನಿರ್ದೇಶಕರು ಸೇರಿದಂತೆ ಮುಂಬೈನ ಸರ್ಕಾರಿ-ಜೆಜೆ ಆಸ್ಪತ್ರೆಯ ತಜ್ಞರು ಇರಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೈದ್ಯರ ನಿರ್ಲಕ್ಷದಿಂದ ಸಾವುಗಳು ಸಂಭವಿಸಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಇದರಿಂದಾಗಿ ಚಿಕಿತ್ಸೆಗೆ ಬಳಸಿದ ಔಷಧಿ ಹಾಗೂ ಸಿಬ್ಬಂದಿಗಳ ಮಾಹಿತಿ ಕಲೆಹಾಕಲಾಗಿದೆ. ಈ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಯ ಲೋಪವಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇನ್ನಷ್ಟೇ ಸಾವಿಗೆ ಕಾರಣ ತಿಳಿದು ಬರಬೇಕಿದೆ. ಅಲ್ಲದೇ ಈ ಘಟನೆಯ ಬಗ್ಗೆ ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಆರೋಗ್ಯ ಸಚಿವ ತಾನಾಜಿ ಸಾವಂತ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಆದೇಶಿಸಿದ್ದಾರೆ.500 ರೋಗಿಗಳ ಸಾಮಥ್ರ್ಯದ ಆಸ್ಪತ್ರೆಯಲ್ಲಿ 650 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಕೆಲವು ವೈದ್ಯರು ಡೆಂಗ್ಯೂನಿಂದ ಬಳಲುತ್ತಿದ್ದಾರೆ. ಇದರಿಂದ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಎದುರಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ