ಕಾಂಗ್ರೆಸ್ ರಾಜ್ಯ ಸಾಮಾಜಿಕ ಜಾಲತಾಣದ ಸಹ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯಾಗಿ ನಿಕೇತ್ ರಾಜ್ ಮೌರ್ಯನೇಮಕ
ಬೆಂಗಳೂರು: ಯುವನಾಯಕ ನಿಕೇತ್ ರಾಜ್ ಮೌರ್ಯಾರವರನ್ನು ರಾಜ್ಯ ಕೆಪಿಸಿಸಿ ಸಹ ಅಧ್ಯಕ್ಷರನ್ನಾಗಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಈ ಮೊದಲು ರಾಜ್ಯ ವಕ್ತಾರರಾಗಿ ನಿಕೇತ್ ರಾಜ್ ಮೌರ್ಯ ಕೆಲಸ ಮಾಡಿದ್ದರು. ಅಪ್ರತಿಮ ಭಾಷಣಕಾರರಾಗಿರುವ ಮೌರ್ಯ ರವರನ್ನು ಕಾಂಗ್ರೆಸ್ ಈಗ ಹೊಸ ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸಿದೆ.
ಮುಂದಿನ ರಾಜಕೀಯ ನಡೆ ಘೋಷಿಸುವ ಬಗ್ಗೆ ಸಂದೇಶ ರವಾನಿಸಿದ ಸುಮಲತಾ!
ಮಂಡ್ಯ, ಏಪ್ರಿಲ್ 02 : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ ಹಾಗೂ ಆಡಳಿತರೂಢ ಕಾಂಗ್ರೆಸ್ ನಡುವೆ ನೇರ ಹಣಾಹಣೆ ಏರ್ಪಟ್ಟಿದೆ. ಈಗಾಗಲೇ ಹಾಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನ ಮಾಜಿ ಹೆಚ್ ಡಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಏಪ್ರಿಲ್ 3 ರಂದು ಸುಮಲತಾ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.
ಇನ್ನು ಅಂತಿಮ ನಿರ್ಧಾರ ಕೈಗೊಳ್ಳುವ ಸಲುವಾಗಿ ಸುಮಲತಾ ಅಂಬರೀಶ್ ಅವರು ತಮ್ಮ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದು, ನಾಳಿನ ಮಹತ್ವದ ಸಭೆಗೆ ಆಹ್ವಾನಿಸಿದ್ದಾರೆ. ಹಾಗಾದ್ರೆ ಸುಮಲತಾ ಅಂಬರೀಶ್ ಅವರು ತಮ್ಮ ಅಭಿಮಾನಿಗಳಿಗೆ ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ.
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.
ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ,
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) April 2, 2024
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.
ಚುನಾವಣೆಗೆ ಸ್ಪರ್ಧಿಸುವ… pic.twitter.com/65Wte90LWJ
ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ.
ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ. ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.