ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೆಣ್ಣುಮಕ್ಕಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಅಗತ್ಯವಿಲ್ಲ : ನಟಿ ಕಂಗನಾ ರಣಾವತ್

Twitter
Facebook
LinkedIn
WhatsApp
ಹೆಣ್ಣುಮಕ್ಕಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಅಗತ್ಯವಿಲ್ಲ : ನಟಿ ಕಂಗನಾ ರಣಾವತ್

ಮುಟ್ಟು(Menstruation) ಎಂಬುದು ಹೆಣ್ಣಿನ ದೇಹದಲ್ಲಾಗುವ ಸಹಜ ಪ್ರಕ್ರಿಯೆ ಅದೊಂದು ರೋಗವಲ್ಲ ಹೀಗಾಗಿ ಹೆಣ್ಣುಮಕ್ಕಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಅಗತ್ಯವಿಲ್ಲ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್(Kangana Ranaut) ಹೇಳಿದ್ದಾರೆ. ನಿನ್ನೆಯಷ್ಟೇ ಈ ಕುರಿತು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಮಾತನಾಡಿ, ಮುಟ್ಟು ಎಂಬುದು ಅಂಗವೈಕಲ್ಯವಲ್ಲ ಸಹಜ ಪ್ರಕ್ರಿಯೆ ಹೀಗಾಗಿ ವೇತನ ಸಹಿತ ಮುಟ್ಟಿನ ರಜೆ ನೀಡುವ ಪ್ರಸ್ತಾಪವೇ ಇಲ್ಲ ಎಂದಿದ್ದರು.

ಇದೀಗ ಕಂಗನಾ ಕೂಡ ಸ್ಮೃತಿ ಇರಾನಿ ಹೇಳಿಕೆಗೆ ದನಿಗೂಡಿಸಿದ್ದಾರೆ. ಕಂಗನಾ ಯಾವಾಗಲೂ ತನ್ನ ನಿಲುವು, ಅಭಿಪ್ರಾಯವನ್ನು ಹೇಳಲು ಹಿಂಜರಿಯುವುದಿಲ್ಲ. ಮಾನವ ಇತಿಹಾಸದಲ್ಲಿ ಕೆಲಸ ಮಾಡದ ಮಹಿಳೆ ಇಲ್ಲ, ಹೊಲ, ಗದ್ದೆಗಳಲ್ಲಿ ಕೆಲಸ ಮಾಡುವುದರಿಂದ ಹಿಡಿದು ಮನೆಯನ್ನು, ಮಕ್ಕಳನ್ನು ನೋಡಿಕೊಳ್ಳುವವರೆಗೆ ಎಲ್ಲವನ್ನೂ ಆಕೆ ಮಾಡುತ್ತಾಳೆ ಎಂದಿದ್ದಾರೆ.

ಸ್ಮೃತಿ ಇರಾನಿ ಸದನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ಮಹಿಳೆಗೆ ಮುಟ್ಟು ಎಂಬುದು ಎಂದೂ ಕೆಲಸಕ್ಕೆ ಅಡ್ಡಿ ಮಾಡಿಲ್ಲ. ಅದು ಆಕೆಯ ಜೀವನ ಪಯಣದ ಒಂದು ಭಾಗವಾಗಿರುತ್ತದೆ. ದುಡಿಯುವ ಮಹಿಳೆ ಮುಟ್ಟಿನ ಹೆಸರಿನಲ್ಲಿ ರಜೆ ಹಾಕುವುದು ಅರ್ಥಹೀನ, ಇದೀಗ ಮಹಿಳೆಗೂ ಸಮಾನ ಹಕ್ಕು ಬೇಕೆಂದು ಹೋರಾಟ ನಡೆಯುತ್ತಿರುವ ಸಮಯದಲ್ಲಿ ಈ ರಜೆಯು ತಾರತಮ್ಯಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ಋತುಚಕ್ರವು ಮಹಿಳೆಯರ ಕೆಲಸಕ್ಕೆ ಎಂದೂ ಅಡ್ಡಿಯಾಗುವುದಿಲ್ಲ, ಅದು ಅಂಗವೈಕಲ್ಯವಲ್ಲ, ಇದು ಮಹಿಳೆಯರ ಜೀವನದ ಒಂದು ಭಾಗ ಹಾಗೂ ಸಹಜ ಪ್ರಕ್ರಿಯೆ ಎಂದು ಹೇಳಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಟ್ಟಿನ ನೈರ್ಮಲ್ಯದ ಕರಡು ನೀತಿಯನ್ನು ಸಿದ್ಧಪಡಿಸಿದೆ ಎಂದರು. 10-19 ವಯೋಮಾನದ ಬಾಲಕಿಯರಲ್ಲಿ ಮುಟ್ಟಿನ ನೈರ್ಮಲ್ಯವನ್ನು ಉತ್ತೇಜಿಸಲು ಕೇಂದ್ರವು ಈಗಾಗಲೇ ಯೋಜನೆಯನ್ನು ಜಾರಿಗೊಳಿಸುತ್ತಿದೆ ಎಂದು ಅವರು ಸದನಕ್ಕೆ ತಿಳಿಸಿದರು.

ಮಾಸಿಕ ರಜೆ ಬೇಡವೆಂದ ಕೇಂದ್ರ ಸಚಿವೆ ಸ್ತ್ರೀ ನೋವಿಗೆ ಸ್ಮೃತಿ ಕಳೆದುಕೊಂಡಿದ್ದಾರೆ – ಆಂಧ್ರ ಶಾಸಕಿ ಕವಿತಾ ಕಿಡಿಕಿಡಿ

ಮಹಿಳಾ ಉದ್ಯೋಗಿಗಳಿಗೆ ಮಾಸಿಕ ರಜೆ (Menstrual Leave) ನೀಡುವ ಪ್ರಸ್ತಾವನೆ ಕುರಿತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೇಳಿಕೆಗೆ ಬಿಆರ್‌ಎಸ್ ಎಂಎಲ್‌ಸಿ ಕಲ್ವಕುಂಟ್ಲ ಕವಿತಾ (BRS MLC Kavitha) ವಾಗ್ದಾಳಿ ನಡೆಸಿದರು. ಇತ್ತೀಚೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ (Union Minister Smriti Irani) ಅವರು ರಾಜ್ಯಸಭೆಯಲ್ಲಿ ಮಾಸಿಕ ರಜೆಯ (Menstruation) ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಬ್ಬ ಮಹಿಳೆಯಾಗಿ ಆಕೆ ಇಂತಹ ಟೀಕೆಗಳನ್ನು ಮಾಡುವುದು ಸೂಕ್ತವಲ್ಲ. ಈ ಬಗ್ಗೆ ಕವಿತಾ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ಎಕ್ಸ್ ನಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕವಿತಾ ಟ್ವೀಟ್ ಮಾಡಿ, ಮಹಿಳೆಯರ ಅನುಭವಗಳ ಬಗ್ಗೆ ಸಚಿವೆಯಿಂದ ಸಹಾನುಭೂತಿಯ ಕೊರತೆಯನ್ನು ಎತ್ತಿ ತೋರಿಸಿದ್ದಾರೆ – ಋುತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಅನುಭವಿಸುತ್ತಿರುವ ನೋವನ್ನು ಗಮನಿಸಿ ರಜೆ ಮಂಜೂರು ಮಾಡಬೇಕೆಂಬ ಮನವಿಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರಸ್ಕರಿಸಿರುವುದು ಬೇಸರದ ಸಂಗತಿ. ಒಬ್ಬ ಮಹಿಳೆಯಾಗಿ, ಮಹಿಳೆಯರ ಸಂಕಟದ ಬಗ್ಗೆ ಇಂತಹ ಅಸಡ್ಡೆ ತೋರುವುದನ್ನು ನೋವುಂಟುಮಾಡುತ್ತದೆ. ಮುಟ್ಟು ನಮ್ಮ ಆಯ್ಕೆಯಲ್ಲ. ಇದು ನೈಸರ್ಗಿಕ ಜೈವಿಕ ಪ್ರಕ್ರಿಯೆ. ವೇತನ ಸಹಿತ ರಜೆ ನಿರಾಕರಿಸುವುದು ಅಸಂಖ್ಯಾತ ಮಹಿಳೆಯರ ಸಂಕಷ್ಟವನ್ನು ನಿರ್ಲಕ್ಷಿಸಿದಂತೆ ಎಂದು ಕವಿತಾ ಟ್ವಿಟರ್ ಎಕ್ಸ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಂಎಲ್‌ಸಿ ಕವಿತಾ ಮಾತನಾಡಿ, ಜೈವಿಕ ವಾಸ್ತವತೆಯನ್ನು ಗುರುತಿಸಿ ಮಹಿಳೆಯರ ಯೋಗಕ್ಷೇಮಕ್ಕೆ ಪೂರಕವಾದ ನೀತಿಗಳನ್ನು ಜಾರಿಗೆ ತರುವ ಸಮಯ ಬಂದಿದೆ.

ಇದೇ ವೇಳೆ ಅವರು ಈ ಹಿಂದೆಯೂ ಅಯೋಧ್ಯೆ ದೇಗುಲ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಮುಂದಿನ ತಿಂಗಳು ಅಯೋಧ್ಯೆ ರಾಮಮಂದಿರದಲ್ಲಿ ಶ್ರೀ ಸೀತಾರಾಮಚಂದ್ರ ಸ್ವಾಮಿಯ ಮೂರ್ತಿ ಪ್ರತಿಷ್ಠಾಪನೆಯಿಂದ ಕೋಟ್ಯಂತರ ಹಿಂದೂಗಳ ಕನಸು ನನಸಾಗಲಿದೆ ಎಂದು ಬಿಆರ್ ಎಸ್ ಎಂಎಲ್ ಸಿ ಕಲ್ವಕುಂಟ್ಲ ಕವಿತಾ ಹೇಳಿದರು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಬಿಡುಗಡೆ ಮಾಡಿದ ಆದೇಶದಲ್ಲಿ ಅಯೋಧ್ಯೆಯ ಗರ್ಭಗುಡಿಯ ಫೋಟೋಗಳನ್ನು ಕವಿತಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

ಟ್ರಸ್ಟ್ ಬಿಡುಗಡೆ ಮಾಡಿದ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯ ಫೋಟೋಗಳೊಂದಿಗೆ ಮಾಡಿದ ವೀಡಿಯೊವನ್ನು ಪೋಸ್ಟ್‌ಗೆ ಲಗತ್ತಿಸಲಾಗಿದೆ. ಈ ಶುಭ ಸಮಯದಲ್ಲಿ, ತೆಲಂಗಾಣದ ಎಲ್ಲಾ ಜನರು ಹಾಗೂ ದೇಶದ ಜನರು ಈ ಶುಭ ಸಮಯವನ್ನು ಸ್ವಾಗತಿಸಬೇಕು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂಬ ಹಿಂದೂಗಳ ಆಶಯ ಶೀಘ್ರವೇ ಈಡೇರುವುದು ಸಂತಸ ತಂದಿದೆ. ರಾಮಮಂದಿರಕ್ಕೆ ಭೇಟಿ ನೀಡಲು ಸಾಕಷ್ಟು ಮಂದಿ ಕಾಯುತ್ತಿದ್ದಾರೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist