ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ; ಡಿಸೆಂಬರ್ 6 ರ ಬಳಿಕ ಮುಂದಿನ ನಡೆ ಬಗ್ಗೆ ತಿಳಿಸುತ್ತೇನೆ - ವಿ ಸೋಮಣ್ಣ

Twitter
Facebook
LinkedIn
WhatsApp
ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ; ಡಿಸೆಂಬರ್ 6 ರ ಬಳಿಕ ಮುಂದಿನ ನಡೆ ಬಗ್ಗಿ ತಿಳಿಸುತ್ತೇನೆ - ವಿ ಸೋಮಣ್ಣ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ವಿ ಸೋಮಣ್ಣ  ಪಕ್ಷದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಸ್ಪಷ್ಟವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಡಿಸೆಂಬರ್ 6 ನೇ ತಾರೀಖಿನವರೆಗೆ ಯಾವುದೇ ಹೇಳಿಕೆ ನೀಡದಂತೆ ತಿಳಿಸಿರುವುದರಿಂದ ಅಲ್ಲಿಯವರೆಗ ಏನೂ ಮಾತಾಡಲ್ಲ ಅಂತ ಹೇಳಿದರು.

ಆಸಮಾಧಾನಗೊಂಡಿರುವ ನಾಯಕರು ತಮ್ಮ ಕೋಪ ಹೊರಹಾಕಿದ್ದಾರೆ, ಸೋಮಣ್ಣ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಅಂತ ಕೇಳಿದಾಗ ನಿನ್ನೆ ಹಿರಿಯ ನಾಯಕರಾಗಿರುವ ಅರವಿಂದ ಲಿಂಬಾವಳಿ (Aravind Limbavali) ಹೇಳಿದ್ದು ಅಕ್ಷರಶಃ ಸತ್ಯ, ಹಿಂದೆ ಕೇಂದ್ರ ಸಚಿವರಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಮೊದಲಾದವರೆಲ್ಲ ತಮ್ಮ ಅಸಮಾಧಾನ ಪ್ರದರ್ಶಿಸಿದ್ದಾರೆ

ಎಂದು ಹೇಳಿದ ಅವರು ರಾಜ್ಯ ಬಿಜೆಪಿ ಸೋಮನಹಳ್ಳಿ ಮುದುಕಿ ಕತೆಯನ್ನು ಹೋಲುತ್ತದೆ ಎಂದರು. 6ನೇ ತಾರೀಖಿನ ಬಳಿಕ ಎಲ್ಲ ತಿಳಿಸುವುದಾಗಿ ಮಾಜಿ ಸಚಿವ ಹೇಳಿದರು.

ನನ್ನ ವಿರೋಧಿಸಿದರೆ ಮೋದಿಯನ್ನು ವಿರೋಧಿಸಿದಂತೆ: ಈ ಹೇಳಿಕೆಗೆ ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು, (ನವೆಂಬರ್ 23): ನನ್ನನ್ನು ವಿರೋಧಿಸಿದರೆ ಮೋದಿಯವರನ್ನು (Narendra Modi) ವಿರೋಧಿಸಿದಂತೆ ಎಂಬ ತಮ್ಮ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY vijayendra) ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಾಜ್ಯಾಧ್ಯಕ್ಷರಾಗಿ ನನ್ನನ್ನು ಆಯ್ಕೆ ಮಾಡಿದ್ದು ಯಡಿಯೂರಪ್ಪನವರಲ್ಲ. ನಮ್ಮ ಪಕ್ಷದ ವರಿಷ್ಠರು ಹಾಗೂ ಎಲ್ಲಾ ಹಿರಿಯರು ಆಯ್ಕೆ ಮಾಡಿದ್ದಾರೆ. ಈ ಹಿನ್ನೆಲೆ ಪಕ್ಷ ಹಾಗೂ ದೇಶದ ಹಿತದಿಂದ ಒಂದಾಗಿ ಹೋಗಬೇಕು. ಈ ಉದ್ದೇಶದಿಂದ ಹಾಗೇ ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಪಕ್ಷದಲ್ಲಿ ಎಲ್ಲರನ್ನೂ ಜೊತೆಗೆ ಕರೆದೊಯ್ಯುವುದು ನನ್ನ ಜವಾಬ್ದಾರಿ. ಜಾರಕಿಹೊಳಿ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು. ಕೆಲವು ಬಾರಿ ಶಾಸಕ ರಮೇಶ್ ಅಸಮಾಧಾನ ತೋಡಿಕೊಂಡಿದ್ದರು. ಹೀಗಾಗಿ ರಮೇಶ್ ಭೇಟಿ ಮಾಡಿ ಅರ್ಧಗಂಟೆ ಚರ್ಚೆ ಮಾಡಿದ್ದೇನೆ. ಕೆಲವು ಸಣ್ಣಪುಟ್ಟ ಅಸಮಾಧಾನಗಳಿದ್ದವು, ಅದರ ಬಗ್ಗೆ ಚರ್ಚಿಸಿದ್ದೇವೆ. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗಬೇಕು. ಪಕ್ಷದಲ್ಲಿ ಸಹಕಾರ ಕೊಡುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ ಎಂದರು.

ಇನ್ನು ಇದೇ ವೇಳೆ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಸೋಮಣ್ಣ ಅಸಮಾಧಾನದ ಬಗ್ಗೆ ಮಾತನಾಡಿ, ಪಕ್ಷದ ಹಿರಿಯರು ಏನೇ ಮಾತಾಡಿದರೂ ಆಶೀರ್ವಾದ ಅಂದುಕೊಳ್ಳುತ್ತೇನೆ. ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.

ನನ್ನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದವರು ಯಾರು? ಯಡಿಯೂರಪ್ಪನಾ? ಅದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ. ಕರ್ನಾಟಕದ ಎಲ್ಲಾ 28 ಸೀಟುಗಳನ್ನು ಗೆದ್ದು ಮೋದಿ ಅವರಿಗೆ ತಲುಪಿಸುವುದು ನನ್ನ ಕೆಲಸ. ಯಾರಾದರೂ ನನ್ನನ್ನು ವಿರೋಧಿಸಿದರೆ ಅವರು ಮೋದಿಯನ್ನು ವಿರೋಧಿಸಿದಂತೆ ಎಂದು ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist