ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೀರಜ್ ಚಂದ್ರ ಪಾಲ್ ಸಹಿತ ನಾಲ್ವರಿಗೆ ಮೂಡಾ ಸದಸ್ಯರಾಗಿ ನಾಮನಿರ್ದೇಶನ

Twitter
Facebook
LinkedIn
WhatsApp
ನೀರಜ್ ಚಂದ್ರ ಪಾಲ್ ಸಹಿತ ನಾಲ್ವರಿಗೆ ಮೂಡಾ ಸದಸ್ಯರಾಗಿ ನಾಮನಿರ್ದೇಶನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರಜ್ ಪಾಲ್ ಸೇರಿ ನಾಲ್ಕು ಮಂದಿಯನ್ನು ಮಂಗಳೂರು ಅಭಿವೃದ್ದಿ ಪ್ರಾಧಿಕಾರದ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಲಾಗಿದೆ.

ಸಬಿತಾ ಮಿಸ್ಕಿತ್, ಬೆಂಗ್ರೆಯ ಸುಮನ್ ದಾಸ್, ಕೃಷ್ಣಾಪುರದ ಅಬ್ದುಲ್ ಜಲೀಲ್ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಾಮ ನಿರ್ದೇಶನ ಮಾಡಿ ಆದೇಶಿಸಲಾಗಿದೆ.

ಅಕಾಡಮಿಗಳಿಗೆ ಅಧ್ಯಕ್ಷರ ನೇಮಕ

ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ತಾರನಾಥ್ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಶಿಕ್ಷಣ ತಜ್ಞ ಉಮರ್ ಯು.ಎಚ್. ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಸಮಾಜ ಸೇವಕ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಅವರನ್ನು ನೇಮಿಸಿದೆ.

ತುಳು ಅಕಾಡೆಮಿಯ ಸದಸ್ಯರಾಗಿ ಪೃಥ್ವಿರಾಜ್, ಕುಂಬ್ರ ದುರ್ಗಪ್ರಸಾದ್ ರೈ, ಮೋಹನ್ ದಾಸ್ ಕೊಟ್ಟಾರಿ, ಅಕ್ಷಯ್ ಆರ್. ಶೆಟ್ಟಿ, ಶೈಲೇಶ್ ಬಿನ್ ಭೋಜ ಸುವರ್ಣ, ಕಿಶೋರ್ ಬಿನ್ ಗುಡ್ಡಪ್ಪ ಗೌಡ, ಬೂಬ ಪೂಜಾರಿ, ರೋಹಿತಾಶ್ವ ಯು. ಕಾಪಿಕಾಡ್, ನಾಗೇಶ್ ಕುಮಾರ್ ಉದ್ಯಾವರ, ಸಂತೋಷ್ ಶೆಟ್ಟಿ ನೇಮಕಗೊಂಡಿದ್ದಾರೆ.

ಬ್ಯಾರಿ ಅಕಾಡೆಮಿಯ ಸದಸ್ಯರಾಗಿ ಬಿ.ಎಸ್.ಮುಹಮ್ಮದ್ ಚಿಕ್ಕಮಗಳೂರು, ಹಫ್ಸಾ ಬಾನು 0ಬೆಂಗಳೂರು, ಸಾರಾ ಅಲಿ ಪರ್ಲಡ್ಕ, ಶಮೀರಾ ಜಹಾನ್, ಯು.ಎಚ್. ಖಾಲಿದ್ ಉಜಿರೆ, ತಾಜುದ್ದೀನ್, ಅಬೂಬಕರ್ ಅನಿಲಕಟ್ಟೆ, ಅಬ್ದುಲ್ ಶರೀಫ್, ಹಮೀದ್ ಹಸನ್ ಮಾಡೂರು, ಸಮೀರ್ ಮುಲ್ಕಿ ಅವರನ್ನು ನೇಮಕ ಮಾಡಲಾಗಿದೆ.

ಕೊಂಕಣಿ ಅಕಾಡೆಮಿಯ ಸದಸ್ಯರಾಗಿ ವಂ.ಪ್ರಕಾಶ್ ಮಾಡ್ತಾ, ರೊನಾಲ್ಡ್ ಕ್ರಾಸ್ತಾ, ಡಾ. ವಿಜಯಲಕ್ಷ್ಮಿ ನಾಯಕ್, ನವೀನ್ ಲೋಬೋ, ಸಪ್ನಾಮೇ ಕ್ರಾಸ್ತಾ, ಸಮರ್ಥ್ ಭಟ್, ಸುನಿಲ್ ಸಿದ್ದಿ, ಜೇಮ್ಸ್ ಲೋಪಿಸ್, ದಯಾನಂದ ಮುಡೈಕರ್, ಪ್ರಮೋದ್ ಪಿಂಟೋ ನೇಮಕಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ