ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಂದಿನ ಎಲೆಕ್ಷನ್‌ಗೆ ಸ್ಪರ್ಧಿಸಲ್ಲ; ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ: ಸಿಎಂ ಸಿದ್ದರಾಮಯ್ಯ

Twitter
Facebook
LinkedIn
WhatsApp
ಮುಂದಿನ ಎಲೆಕ್ಷನ್‌ಗೆ ಸ್ಪರ್ಧಿಸಲ್ಲ; ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಚುನಾವಣಾ ರಾಜಕೀಯ ನಿವೃತ್ತಿ (Political retirement) ಬಗ್ಗೆ ಈಗಾಗಲೇ ತೀರ್ಮಾನ ಮಾಡಿದ್ದೇನೆ. ಮುಂದಿನ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ಜನರು ಪ್ರೀತಿಯಿಂದ ಮತ್ತೆ ಮತ್ತೆ ಸ್ಪರ್ಧೆ ಮಾಡಿ ಎಂದು ಕೇಳಿದರು. ಆದರೆ, ನನ್ನ ಆರೋಗ್ಯದ ದೃಷ್ಟಿಯಿಂದ ಸ್ಪರ್ಧೆ ಮಾಡಲಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಚುನಾವಣಾ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ. ಲೋಕಸಭಾ ಚುನಾವಣೆಯ (Lok Sabha Election 2024) ಹೊತ್ತಿನಲ್ಲಿ ಅವರ ಈ ಹೇಳಿಕೆಯು ಮಹತ್ವವನ್ನು ಪಡೆದುಕೊಂಡಿದೆ.

 

ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚುನಾವಣೆಗೆ ಸ್ಪರ್ಧೆ ಮಾಡುವ ಬಗ್ಗೆ ನನಗೆ ಆತಂಕ ಇದ್ದರೆ ತಾನೇ ಟೆನ್ಷನ್ ಆಗುವುದು. ನನಗೆ ಯಾವ ಆತಂಕವೂ ಇಲ್ಲ. ಹೀಗಾಗಿ ನಾನು ಕೂಲ್ ಆಗಿ ಇದ್ದೇನೆ. ಅದು ಕೂಡ ನನ್ನ ಆರೋಗ್ಯದ ಗುಟ್ಟು. ಜನರು ಪ್ರೀತಿಯಿಂದ ಮತ್ತೆ ಮತ್ತೆ ಸ್ಪರ್ಧೆ ಮಾಡಿ ಎಂದು ಕೇಳಿದರು. ಆದರೆ, ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ. ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವಯಸ್ಸು ಆಗಿ ಬಿಡುತ್ತದೆ. 83 ವಯಸ್ಸು ಆದ ಮೇಲೆ ಇಷ್ಟೊಂದು ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂಬುದು ಗೊತ್ತಿದೆ. ನನ್ನ ದೇಹದ ಸ್ಥಿತಿ ನನಗೆ ಮಾತ್ರ ಗೊತ್ತಿರುತ್ತದೆ. ಇದಕ್ಕಾಗಿತೇ ಚುನಾವಣಾ ರಾಜಕಾರಣ ಸಾಕು ಎಂದಿಕೊಂಡಿದ್ದೇನೆ ಎಂದು ಹೇಳಿದರು.

ರಾಜ್ಯದ ಜನರಿಗೆ ಬರ ಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ರಾಜ್ಯದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ಆದರೆ, ಮಾಜಿ ಮುಖ್ಯಮಂತ್ರಿ ಈ ಬಗ್ಗೆ ಚಕಾರವೆತ್ತದೆ, ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ. ಕೇಂದ್ರದ ಈ ಧೋರಣೆ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಬಿಜೆಪಿಯವರ ಈ ಧೋರಣೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಮಿತ್ ಶಾ ಅವರು ಬರ ಪರಿಹಾರಕ್ಕೆ ಸಮ್ಮತಿ ಸೂಚಿಸಿಲ್ಲ. ಮೇಕೆದಾಟು ಯೋಜನೆ, ಮಹದಾಯಿ ಯೋಜನೆಗೂ ಇದುವರೆಗೆ ಅನುಮತಿ ನೀಡಿದ್ದಾರೆಯೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಅಮಿತ್ ಶಾ ವಿರುದ್ಧ ನೀಡಿದ್ದ ಗೂಂಡಾ ಹೇಳಿಕೆಗಾಗಿ ಚುನಾವಣಾ ಆಯೋಗದಿಂದ ನೋಟಿಸ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಚುನಾವಣಾ ಆಯೋಗ ನೀಡಿರುವ ನೋಟಿಸ್‌ಗೆ ನನ್ನ ಮಗ ಉತ್ತರ ಕೊಟ್ಟಿದ್ದಾನೆ. ಸಿಬಿಐನವರು ನೀಡಿರುವ ವರದಿಯ ಮೇಲೆ ಅವರು ಹೇಳಿಕೆಯನ್ನು ನೀಡಿದ್ದು, ಈ ಬಗ್ಗೆ ಸ್ಪಷ್ಟೀಕರಣವನ್ನು ಈಗಾಗಲೇ ನೀಡಲಾಗಿದೆ. ಈ ಬಗ್ಗೆ ಹೆಚ್ಚಿಗೆ ಮಾತನಾಡಲು ನನಗೆ ಇಷ್ಟವಿಲ್ಲ ಎಂದರು.

ಕಾಂಗ್ರೆಸ್ ಸರ್ಕಾರದ ಸಾಧನೆಗಳ ಮೇಲೆ ಚುನಾವಣೆ

ರಾಜ್ಯದಲ್ಲಿ ಜನಪರ ಯೋಜನೆಗಳು ,ಅಭಿವೃದ್ಧಿ ಕಾರ್ಯಗಳು ಮುಂದುವರೆಯಬೇಕಾದರೆ ನಮ್ಮ ಸರ್ಕಾರವೇ ಅಸ್ತಿತ್ವದಲ್ಲಿರಬೇಕು. ಬಿಜೆಪಿಯವರು ಅಧಿಕಾರಕ್ಕೆ ಬಂದಲ್ಲಿ, ಜನಪರ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಜನರಿಗೆ ಮನವರಿಕೆ ಮಾಡಿಸಿದ್ದೇನೆ. ಬಿಜೆಪಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಮಾಡಿರುವ ಸಾಧನೆಗಳ ಆಧಾರದ ಮೇಲೆ ಮತ ಕೇಳುತ್ತಿದ್ದು, ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲಿದ್ದಾರೆ ಎಂಬ ಭರವಸೆಯಿದೆ

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ

ರಾಜ್ಯದಲ್ಲಿ ಬರದಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಮಾಧ್ಯಮಗಳು ಊಹಾಪೋಹಗಳ ಮೇಲೆ ವರದಿ ಮಾಡಬಾರದು. ರಾಜ್ಯದ ಯಾವುದೇ ಭಾಗದಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist