ಶುಕ್ರವಾರ, ಡಿಸೆಂಬರ್ 27, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ; ಕೃಷ್ಣ ಬೈರೇಗೌಡ

Twitter
Facebook
LinkedIn
WhatsApp
ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ; ಕೃಷ್ಣ ಬೈರೇಗೌಡ

ಬೆಂಗಳೂರು: ಕಂದಾಯ ಇಲಾಖೆಯ (Revenue Department) ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ (Village Accountant) ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಮಾಹಿತಿ ನೀಡಿದರು. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ (Karnataka Budget 2024) ಕುಂದಾಪುರ ಶಾಸಕ ಕಿರಣ್ ಕುಮಾರ್ ಕೂಡ್ಲಿ ಅವರ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು.

“ತಾಲೂಕುಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜನೆಗೊಳಿಸಲಾಗುತ್ತಿದೆ. ಉದ್ಯೋಗಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸವಾಗುತ್ತಿಲ್ಲ” ಎಂದು ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೂಡ್ಲಿ ಪ್ರಶ್ನಿಸಿದ್ದರು.

“ಇತರೆ ಇಲಾಖೆಗಳಿಗೆ ಹೋಲಿಸಿದರೆ ಕಂದಾಯ ಇಲಾಖೆಯಲ್ಲಿ ನೌಕರರ ಸಂಖ್ಯೆ ಅಧಿಕವಿದೆ. ಅಲ್ಲದೆ, ಸಾರ್ವಜನಿಕರಿಗೆ ಶೀಘ್ರ ಸೇವೆ ನೀಡುವ ಉದ್ದೇಶಿದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಹಸಿರು ನಿಶಾನೆ ನೀಡಿದ್ದಾರೆ” ಎಂದು ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

ನಿಯೋಜನೆಯ ಮೇಲೆ ಬೇರೆಡೆ ತೆರಳುವುದು ಸರಿಯಲ್ಲ

ನಿಯೋಜನೆ ಮೇಲೆ ಅಧಿಕಾರಿಗಳು ಬೇರೆಡೆ ಕೆಲಸಕ್ಕೆ ತೆರಳುವ ಬಗ್ಗೆಯೂ ಗಮನ ಸೆಳೆದ ಸಚಿವ ಕೃಷ್ಣ ಬೈರೇಗೌಡ, “ಸರ್ಕಾರಕ್ಕೆ ಸಾರ್ವಜನಿಕರ ಹಿತ ಮುಖ್ಯ. ಹೀಗಾಗಿ ಕಂದಾಯ ಇಲಾಖೆ ನೌಕರರು ನಿಯೋಜನೆಯ ಮೇಲೆ ಬೇರೆಡೆ ತೆರಳುವುದು ಸರಿಯಲ್ಲ. ಅವರು ಸರ್ಕಾರ ನೌಕರಿ ಕೊಟ್ಟ ಕಡೆ ಕೆಲಸ ಮಾಡಲಿ” ಎಂದು ಅಭಿಪ್ರಾಯಪಟ್ಟರು.

“ಕಳೆದ ಸರ್ಕಾರ ತುಂಬಾ ಜನರನ್ನು ಬೇರೆಡೆ ನಿಯೋಜನೆ ಮಾಡಿದ್ದಾರೆ. ನನಗೂ ಕನಿಷ್ಠ 2000 ಉದ್ಯೋಗಿಗಳ ನಿಯೋಜನೆಗೆ ಮನವಿ ಸಲ್ಲಿಸಲಾಗಿದೆ. ಆದರೆ, ನಾನು ಈವರೆಗೆ ಒಬ್ಬರನ್ನೂ ನಿಯೋಜನೆ ಮಾಡಿಲ್ಲ. ಯಾರನ್ನೂ ಮೂಲ ಸ್ಥಾನದಿಂದ ನಿಯೋಜನೆಗೊಳಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಎಲ್ಲ ಜಿಲ್ಲಾಧಿಕಾರಿಗಳಿಗೂ ಈಗಾಗಲೇ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ವಿವೇಚನೆ ಮೇಲೆ ಗರಿಷ್ಠ 5 ಸ್ಥಾನಗಳನ್ನು ಹೊರತುಪಡಿಸಿ ಉಳಿದ ಎಲ್ಲ ನೌಕರರನ್ನೂ ಮೂಲ ಸ್ಥಾನಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಜನರಿಗೆ ಸರಳ ಹಾಗೂ ಶೀಘ್ರ ಸೇವೆ ಒದಗಿಸಲು ಸೂಚಿಸಲಾಗಿದೆ” ಎಂದು ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist