ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ODI: 2022 ರಿಂದ ದಾಖಲೆಯ 17 ಮೇಡನ್ ಓವರ್‌ಗಳನ್ನು ಎಸೆದ ಸಿರಾಜ್..! ಭಾರತದ ಯಶಸ್ವಿ ಬೌಲರ್

Twitter
Facebook
LinkedIn
WhatsApp
siraj 2

ಸದ್ಯ ಏಕದಿನ ಕ್ರಿಕೆಟ್​ನಲ್ಲಿ ಟೀಂ ಇಂಡಿಯಾದ ಆಪತ್ಬಾಂಧವ ಎನಿಸಿಕೊಂಡಿರುವ ವೇಗಿ ಮೊಹಮ್ಮದ್ ಸಿರಾಜ್ ಅವರಿಗೆ ಕಳೆದ ವರ್ಷದಿಂದಲೂ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. 1 ವರ್ಷದಿಂದ ಅದೇ ಫಾರ್ಮ್ ಅನ್ನು ಮುಂದುವರೆಸಿರುವ ಅವರು ಈ ವರ್ಷವನ್ನು ಅಬ್ಬರದಿಂದ ಆರಂಭಿಸಿದ್ದಾರೆ. ಈ ಮೂಲಕ ಸಿರಾಜ್ ಪವರ್‌ಪ್ಲೇಯ ರಾಜ ಎನಿಸಿಕೊಂಡಿದ್ದು, ರನ್ ನೀಡುವಲ್ಲಿ ಜಿಪುಣ ಕೂಡ ಆಗಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡಿದ ಸಿರಾಜ್, ಆರು ಓವರ್‌ಗಳ ಸ್ಪೆಲ್‌ನಲ್ಲಿ, ಕೇವಲ 10 ರನ್‌ಗಳನ್ನು ನೀಡುವ ಮೂಲಕ ಒಂದು ವಿಕೆಟ್ ಪಡೆದರು. ಈ ಸ್ಪೆಲ್‌ನಲ್ಲಿ ಅವರು ಮೊದಲ ಓವರ್ ಮೇಡನ್ ಆಗಿತ್ತು. ಮೊದಲ ಏಕದಿನ ಪಂದ್ಯದಲ್ಲೂ ಸಿರಾಜ್ ಮೇಡನ್ ಓವರ್ ಬೌಲ್ ಮಾಡಿದ್ದರು.

ಈ ಮೂಲಕ 2022 ರಿಂದ ಇಲ್ಲಿಯವರೆಗೆ ಅತಿ ಹೆಚ್ಚು ಮೇಡನ್ ಓವರ್‌ಗಳನ್ನು ಬೌಲ್ ಮಾಡಿದ ಬೌಲರ್ ಎಂಬ ದಾಖಲೆಯನ್ನು ಸಿರಾಜ್ ಬರೆದಿದ್ದಾರೆ. 2022 ರಿಂದ ಸಿರಾಜ್ ಒಟ್ಟು 17 ಮೇಡನ್ ಓವರ್‌ಗಳನ್ನು ಎಸೆದಿದ್ದು, ಪ್ರಸ್ತುತ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇವರ ನಂತರ, 14 ಮೇಡನ್ ಓವರ್‌ಗಳನ್ನು ಎಸೆದಿರುವ ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್ ಎರಡನೇ ಸ್ಥಾನದಲ್ಲಿದ್ದಾರೆ. ಹಾಗೆಯೇ 10 ಮೇಡನ್‌ಗಳನ್ನು ಹಾಕಿರುವ ಟ್ರೆಂಟ್ ಬೌಲ್ಟ್ ಮೂರನೇ ಸ್ಥಾನದಲ್ಲಿದ್ದಾರೆ.

ಸಿರಾಜ್ ಈ ವರ್ಷ ಇದುವರೆಗೆ ಐದು ಪಂದ್ಯಗಳನ್ನು ಆಡಿದ್ದು, ಅದರಲ್ಲಿ 15 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಈ ವರ್ಷ ಭಾರತದ ಅತ್ಯಂತ ಯಶಸ್ವಿ ಬೌಲರ್ ಕೂಡ ಎನಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ