ಏಕದಿನ ವಿಶ್ವಕಪ್ ಗೆ ಭಾರತ ತಂಡ ಪ್ರಕಟ; ಕೆಎಲ್ ರಾಹುಲ್ ಇನ್ - ಸಂಜು ಸ್ಯಾಮ್‌ಸನ್ ಔಟ್!
ಅಕ್ಟೋಬರ್ 5ರಿಂದ ಐಸಿಸಿ ಏಕದಿನ ವಿಶ್ವಕಪ್ ಮೆಗಾ ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಗೆ ಇಂದು ಐಸಿಸಿ ಎಲ್ಲಾ ಮಂಡಳಿಗಳಿಗೆ ತಂಡವನ್ನು ಪ್ರಕಟಿಸಲು ಅಂತಿಮ ಗಡುವು ನೀಡಿತ್ತು. ಅದರ ಭಾಗವಾಗಿ ಬಿಸಿಸಿಐ ಸಹ ಟೀಂ ಇಂಡಿಯಾವನ್ನು ಪ್ರಕಟಿಸಿದೆ.
ಬಿಸಿಸಿಐ ವಿಶ್ವಕಪ್ 2023ಗೆ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ. 15 ಜನರ ವಿಶ್ವಕಪ್ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಅವರನ್ನು ಮುನ್ನಡೆಸಲಿದ್ದು, ಹಾರ್ದಿಕ್ ಪಾಂಡ್ಯ ಉಪನಾಯಕರಾಗಿರಲಿದ್ದಾರೆ.
ಗಾಯದಿಂದ ಗುಣಮುಖರಾಗಿರುವ ಕೆಎಲ್ ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಆದರೆ ಸಂಜು ಸ್ಯಾಮ್ಸನ್ ಮತ್ತೊಮ್ಮೆ ನಿರಾಸೆ ಅನುಭವಿಸಿದ್ದಾರೆ. ಇಶಾನ್ ಕಿಶನ್ ಕೂಡ ವಿಶ್ವಕಪ್ ತಂಡದಲ್ಲಿ ಎರಡನೇ ವಿಕೆಟ್ ಕೀಪರ್ ಆಗಿ ಸೇರ್ಪಡೆಗೊಂಡಿದ್ದಾರೆ.
ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ಸ್ಥಾನ ಪಡೆದಿದ್ದಾರೆ. ಇತ್ತ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್. ಕೆಎಲ್ ರಾಹುಲ್ ಭಾರತದ ಬ್ಯಾಟಿಂಗ್ ಲೈನ್ ಅಪ್ ಅನ್ನು ಮುನ್ನಡೆಸಲಿದ್ದಾರೆ.
ಇನ್ನು, ಏಕದಿನ ವಿಶ್ವಕಪ್ ಇದೇ ವರ್ಷ ಅಕ್ಟೋಬರ್ 5ರಿಂದ ಆರಂಭವಾಗಿ ನವೆಂಬರ್ 19ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿ ವಿಶ್ವಕಪ್ ಸಂಪೂರ್ಣವಾಗಿ ಭಾರತದಲ್ಲಿ ನಡೆಯಲಿದ್ದು, ಒಟ್ಟೂ 10 ಮೈದಾನದಲ್ಲಿ ಪಂದ್ಯಗಳು ನಡೆಯಲಿದೆ.
ಏಕದಿನ ವಿಶ್ವಕಪ್ ತಂಡದಿಂದ ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಮತ್ತು ಪ್ರಸಿದ್ಧ್ ಕೃಷ್ಣ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅಚ್ಚರಿಯೆಂಬಂತೆ ವಾಷಿಂಗ್ಟನ್ ಸುಂದರ್ ಮತ್ತು ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಚಹಾಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವಕಪ್ ಪ್ರಾರಂಭವಾಗುವ ಒಂದು ದಿನದ ಮೊದಲು ಉದ್ಘಾಟನಾ ಸಮಾರಂಭವನ್ನು ನಡೆಯಲಿದೆ. ಅಕ್ಟೋಬರ್ 5ರಂದು ಮೊದಲ ಪಂದ್ಯ ನಡೆಯಲಿದೆ. ಬಳಿಕ ಅಕ್ಟೋಬರ್ 14ರಂದು ಭಾರತ ಮತ್ತು ಪಾಕಿಸ್ತಾನ ಪಂದ್ಯ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.