ಜುಲೈ 27 ರಂದು ಓಲಾ, ಊಬರ್, ಆಟೋ, ಟ್ಯಾಕ್ಸಿ ಸೇವೆ ಜೊತೆಗೆ ಖಾಸಗಿ ಬಸ್ ಸೇವೆಯೂ ಸ್ಥಗಿತ - ಬಂದ್ ಗೆ ಕರೆ!

ಬೆಂಗಳೂರು: ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳಲ್ಲೊಂದಾದ ಶಕ್ತಿಯೋಜನೆ(Shakti scheme)ಯನ್ನ ಜಾರಿಗೆ ತಂದಿದ್ದು, ಮಹಿಳೆಯರು ಇದರ ಸದುಪಯೋಗವನ್ನ ಪಡೆಯುತ್ತಿದ್ದಾರೆ. ಆದರೆ, ಇದರಿಂದ ಆಟೋ, ಟ್ಯಾಕ್ಸಿ, ಓಲಾ, ಉಬರ್ ಸೇರಿದಂತೆ ಖಾಸಗಿ ಬಸ್ಗಳಿಗೂ ದೊಡ್ಡ ಮಟ್ಟದ ತೊಂದರೆ ಉಂಟಾಗಿದ್ದು, ಖಾಸಗಿ ಸಾರಿಗೆ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನಲೆ ಇದೇ ಜುಲೈ 26ರ ಮಧ್ಯರಾತ್ರಿಯಿಂದ ಜುಲೈ 27ರ ಮಧ್ಯರಾತ್ರಿವರೆಗೆ ಶಕ್ತಿ ಯೋಜನೆ ವಿರೋಧಿಸಿ ಆಟೋ, ಟ್ಯಾಕ್ಸಿ, ಓಲಾ, ಉಬರ್ ಸೇವೆ ಜೊತೆಗೆ ಖಾಸಗಿ ಬಸ್ಗಳು ಕೂಡ ಸೇವೆ ನಿಲ್ಲಿಸಲಿವೆ. ಈ ಕುರಿತು ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆ ಒಕ್ಕೂಟದಿಂದ ಬಂದ್‌ಗೆ ಕರೆ ನೀಡಲಾಗಿದೆ.
ಇನ್ನು ಬಂದ್ ಕುರಿತು ಮಾತನಾಡಿದ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ‘ ಜುಲೈ 26 ನೇ ತಾರೀಖು ಮಧ್ಯರಾತ್ರಿ 12 ಗಂಟೆಯಿಂದ 27 ನೇ ತಾರೀಖು ರಾತ್ರಿ 12 ಗಂಟೆಯವರೆಗೂ ಆಟೋ, ಟ್ಯಾಕ್ಸಿ, ಓಲಾ, ಊಬರ್ ಯಾವುದೇ ವೆಹಿಕಲ್ ಓಡಾಟ ಮಾಡಲ್ಲ. ಇವತ್ತು ಖಾಸಗಿ ಸಾರಿಗೆಯ ಮಾಲೀಕರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಹಾಗಾಗಿ ಸರ್ಕಾರದ ಗಮನ ಸೆಳೆಯುತ್ತೆವೆ. ಇನ್ನು ಅಂದು ಖಾಸಗಿ ಬಸ್ಗಳು ಕೂಡ ಓಡಾಟ ಮಾಡಲ್ಲ ಎಂದರು.
ಬೆಂಗಳೂರಿನಲ್ಲಿ ಇರುವ ಖಾಸಗಿ ಮಾಲೀಕರಿಗೆ ಮನವಿ ಮಾಡುತ್ತೇವೆ. ಶಕ್ತಿ ಯೋಜನೆಯಿಂದ ತುಂಬಾ ಹೊಡೆತ ಬಿದ್ದಿದೆ. ಶಕ್ತಿಯೋಜನೆಗೆ ಒಂದು ಮಾರ್ಗಸೂಚಿ ಬಿಡುಗಡೆ ಮಾಡಿ, ಒಂದೂ ಮಾರ್ಗಸೂಚಿ ಇಲ್ಲದೇ ಇರುವುದರಿಂದ ನಮ್ಮ ಖಾಸಗಿ ಬಸ್ಗಳಿಗೆ ನಷ್ಟ ಆಗುತ್ತಿದೆ. ಅದರ ಬದಲು ಬಸ್ಗಳಲ್ಲಿ ಎಷ್ಟು ಸೀಟ್ ಇರುತ್ತದೆಯೋ ಅಷ್ಟೇ ಸೀಟ್ ಹಾಕಬೇಕು ಎಂದು ಮಾಡಿ. ಸರ್ಕಾರಿ ಬಸ್ಗಳಂತೆ ಖಾಸಗಿ ಬಸ್ಗಳನ್ನ ಕೂಡ ಶಕ್ತಿ ಯೋಜನೆಗೆ ಕಿಮೀ ಮಿತಿಯಲ್ಲಿ ಬಳಸಿಕೊಳ್ಳಿ ಎಂದರು.
ಇನ್ನು ಸರ್ಕಾರದ ಶಕ್ತಿ ಯೋಜನೆ ವಿರುದ್ದ ಬಂದ್‌ಗೆ ಕರೆ ನೀಡಿರುವ ಖಾಸಗಿ ವಾಹನಗಳ ಮಾಲೀಕರ ಬೆಂಬಲಕ್ಕೆ ಕನ್ನಡ ಸಂಘಟನೆಗಳು ಬೆಂಬಲ ಕೊಡಲು ಒಪ್ಪಿದ್ದಾರೆ. ಅವರು ಕೂಡ ಹೋರಾಟದಲ್ಲಿ ಪಾಲ್ಗೋಳ್ಳುತ್ತಾರೆ. ಜೊತೆಗೆ ನಾವು ಬೇರೆ ಬೇರೆ ಸಂಘಟನೆಗಳ ಬೆಂಬಲವನ್ನ ಕೋರಿದ್ದೆವೆ. ಬೇರೆ ಸಂಘಟನೆಗಳು ಕೂಡ ಬೆಂಬಲ ಕೊಡುತ್ತಾರೆ ಎಂದು ಆದರ್ಶ್ ಆಟೋ ಅಸೋಸಿಯೇಷನ್ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಿಗೆ ದಾವಣಗೆರೆ ಲಿಂಕ್? ಮತ್ತೊಬ್ಬ ಸಿಸಿಬಿ ವಶಕ್ಕೆ
ದಾವಣಗೆರೆ, ಜುಲೈ 20: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಸಿಸಿಬಿ ಪೊಲೀಸರು (CCB Police) ದಾವಣಗೆರೆಯಲ್ಲಿ (Davanagere) ಕಾರ್ಯಾಚರಣೆ ನಡೆಸಿ ಮತ್ತೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿದ್ದ ಶಂಕಿತರ ಉಗ್ರರಿಗೆ ದಾವಣಗೆರೆಯ ಲಿಂಕ್ ಇತ್ತಾ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಸಿಸಿಬಿ ವಶದಲ್ಲಿರುವ ದಾವಣಗೆರೆ ಅಜಾದ್ ನಗರದ ನಿವಾಸಿ ಫಯಾಜ್ ವುಲ್ಲಾನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಫಯಾಜ್ ವುಲ್ಲಾ (30) ಎಂಬ ವ್ಯಕ್ತಿಯನ್ನ ಇಂದು ಬೆಳಿಗ್ಗೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾವಣಗೆರೆ ಆಗಮಿಸಿ ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಅಕ್ರಮವಾಗಿ ಆಯುಧ ಮಾರಾಟ ವಿಚಾರವಾಗಿ ಇತನ ಮೇಲೆ ಐದು ಪ್ರಕರಣ ದಾಖಲಾಗಿದ್ದವು. ಜಾಮೀನು ಮೇಲೆ ಹೊರಗಿದ್ದ ಈತನನ್ನು ಮತ್ತೆ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಫಯಾಜ್ ವುಲ್ಲಾನನ್ನು ವಶಕ್ಕೆ ಪಡೆದಿದ್ದು, ಶಂಕಿತರಿಗೆ ಮತ್ತು ಫಯಾಜ್ಗೂ ಲಿಂಕ್ ಇತ್ತಾ ಎಂಬ ಸಂಶಯ ಮೂಡಿಸಿದೆ.
ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತರ ಉಗ್ರರನ್ನು ಜುಲೈ 19 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇವರ ಬಳಿ ಇದ್ದ 45 ಜೀವಂತ ಗುಂಡು, ಏಳು ಪಿಸ್ತೂಲ್, ವಾಕಿಟಾಕಿ, ಮೊಬೈಲ್ ಸಿಮ್ ಕಾರ್ಡ್ಗಳನ್ನು ವಶಕ್ಕೆ ಪಡೆಯಲಾಗಿತ್ತು. ಆ ಮೂಲಕ ರಾಜಧಾನಿಯಲ್ಲಿ ನಡೆಯುತ್ತಿದ್ದ ಉಗ್ರರ ಪ್ಲಾನ್ ಅನ್ನು ವಿಫಲಗೊಳಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದರು. ಬೆಂಗಳೂರಿನಲ್ಲಿ ಕುಕೃತ್ಯ ಎಸಗಲು ವಿದೇಶದಿಂದ ಹಣ ಬರುತ್ತಿತ್ತು ಎಂದು ತಿಳಿದುಬಂದಿದೆ.
ವ್ಯವಹಾರ ಸಂಬಧ 2017 ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ 21 ಮಂದಿ ಹದಿನೆಂಟು ತಿಂಗಳ ಕಾಲ ಜೈಲಿನಲ್ಲಿದ್ದರು. ಈ ವೇಳೆ ಉಗ್ರರ ಸಂಪರ್ಕಕ್ಕೆ ಬಂದ್ದಿದ್ದ ಅವರು ಬೆಂಗಳೂರಿನಲ್ಲಿ ಬ್ಲಾಸ್ಟ್ ಮಾಡುವ ಪ್ಲಾನ್ ಮಾಡಿದ್ದರು. 2020 ರಲ್ಲಿ ಜುನೈದ್ ಎಂಬಾತ ರಕ್ತ ಚಂದನ ಪ್ರಕರಣದಲ್ಲಿ ಐದು ತಿಂಗಳ ಕಾಲ ಜೈಲಿನಲ್ಲಿದ್ದು, ನಂತರ ಬಿಡುಗಡೆಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. ಈತನಿಂದಲೇ ಈ ಐವರಿಗೆ ಮಾರ್ಗದರ್ಶನ ನೀಡುತ್ತಿದ್ದ ಎಂಬ ಸ್ಫೋಟಕ ಮಾಹಿತಿಯನ್ನು ನಗರ ಪೊಲೀಸ್ ಆಯುಕ್ತರು ಬಿಚ್ಚಿಟ್ಟದ್ದರು.