ಜುಲೈ 25 ರಂದು ಪಾಲಿಬೆಟ್ಟ ಆಸ್ಪತ್ರೆಯಲ್ಲಿ ರಕ್ತದಾನ
ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜುಲೈ 25 ರಂದು ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಪತ್ರಕರ್ತರ ಸೇರಿದಂತೆ ಸಾರ್ವಜನಿಕರು ಅಂದು ರಕ್ತದಾನ ಮಾಡಲಿದ್ದಾರೆಂದು ಕಾರ್ಯಕ್ರಮ ಸಂಚಾಲಕ ಪುತ್ತಂ ಪ್ರದೀಪ್ ಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಅಚರಣಾ ಸಮಿತಿ, ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ಕೇಂದ್ರ, ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರ ಹಾಗೂ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಶಿಬಿರ ಆಯೋಜಿಸಲಾಗಿದೆ.
ಪಾಲಿಬೆಟ್ಟ ಆಸ್ಪತ್ರೆಗೆ ಬಂದು ರಕ್ತದಾನ ಮಾಡುವವರು ಜುಲೈ 20 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ತಮ್ಮ ಹೆಸರನ್ನು ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ವಿ.ವಿ. ಅರುಣ್ ಕುಮಾರ್ (9448331339) ಅವರಲ್ಲಿ ನೋಂದಾಯಿಸಿಕೊಳ್ಳಬಹುದು.
ಕೇಂದ್ರ ಕೊಡುವ ಅಕ್ಕಿಯಲ್ಲೂ ಕಡಿತ; ಅನ್ನಭಾಗ್ಯವಲ್ಲ ಇದು ಕನ್ನ ಭಾಗ್ಯ – ಬೊಮ್ಮಾಯಿ
ಬೆಂಗಳೂರು: ಕೇಂದ್ರ ಸರ್ಕಾರ ಕೊಡುವ ಅಕ್ಕಿಯಲ್ಲೂ ಕಾಂಗ್ರೆಸ್ (Congress) ಸರ್ಕಾರ 2 ಕೆಜಿ ಅಕ್ಕಿಯನ್ನು ಕಡಿತಗೊಳಿಸಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ (Basavaraj Bommai ) ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ (Anna Baghya) ಯೋಜನೆಯಲ್ಲಿ ಅಕ್ಕಿ ಕಡಿತ ಮಾಡಲಾಗಿದೆ. ಕಾಂಗ್ರೆಸ್ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ದೋಖಾ ಮಾಡಿದೆ. ಇದು ಅನ್ನಭಾಗ್ಯ ಯೋಜನೆಯಲ್ಲ, ಕನ್ನ ಭಾಗ್ಯ ಎಂದು ವ್ಯಂಗ್ಯ ಮಾಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿಯವರು ವರ್ಗಾವಣೆ ವಿಚಾರವಾಗಿ ರೇಟ್ ಫಿಕ್ಸ್ ದಾಖಲೆ ಕೊಟ್ಟಿದ್ದಾರೆ. ಅದಕ್ಕೂ ಮುಂಚೆಯೇ ನಾನು ಈ ವಿಚಾರ ಪ್ರಸ್ತಾಪಿಸಿದ್ದೆ. ಎಲ್.ಹೆಚ್, ವಿಧಾನಸೌಧ, ಕೆಕೆ ಗೆಸ್ಟ್ ಹೌಸ್ನಲ್ಲಿ ಜನರ ದಂಡು ಸೇರುತ್ತಿದೆ ಎಂದಿದ್ದೆ. ಈಗ ಅವರು ಒಂದು ಇಲಾಖೆಯ ದರ ಪಟ್ಟಿಯನ್ನೇ ಕೊಟ್ಟಿದ್ದಾರೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.