ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ಟೋಬರ್ 25 ರಂದು ಡಿ.ವಿ. ಸದಾನಂದಗೌಡಗೆ ಹೈಕಮಾಂಡ್‌ ಬುಲಾವ್‌...!

Twitter
Facebook
LinkedIn
WhatsApp
ಅಕ್ಟೋಬರ್ 25 ರಂದು ಡಿ.ವಿ. ಸದಾನಂದಗೌಡಗೆ ಹೈಕಮಾಂಡ್‌ ಬುಲಾವ್‌...!

ಬೆಂಗಳೂರು, ಅಕ್ಟೋಬರ್‌ 21: 2024 ರ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಗೆ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಕಮಲ-ದಳ ನಾಯಕರಲ್ಲೇ ಮೈತ್ರಿ ಗೆ ವಿರೋಧಿಸಿ ಬಹಿರಂಗವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ ವಿ ಸದಾನಂದಗೌಡರು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ ಬುಲಾವ್‌ ನೀಡಿದೆ.

ಹೌದು, ಅಕ್ಟೋಬರ್‌ 25 ರಂದು ದೆಹಲಿ ಬಂದು ಭೇಟಿ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ದೆಹಲಿಗೆ ತೆರಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಡಿ ವಿ ಸದಾನಂದಗೌಡ ಅವರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಬಿಜೆಪಿ ಸೋಲು ಕಂಡಿದ್ದು, ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಸ್ಥಾನವನ್ನು ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ರಾಜ್ಯ ಕಾಂಗ್ರೆಸ್‌ ನಾಯಕರು ಭರ್ಜರಿಯಾಗಿ ತಂತ್ರಗಾರಿಕೆಯನ್ನ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಠಕ್ಕರ್‌ ನೀಡಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರ ಮಾಡಿಕೊಂಡಿದ್ದು, ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದ ಡಿವಿ ಸದಾನಂದ ಗೌಡರು, ಹೈಕಮಾಂಡ್ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಬಹಿರಂಗವಾಗಿಯೇ ಬೇಸರ ಹೊರ ಹಾಕಿದ್ದರು.

ಈಗಾಗಲೇ ಜೆಡಿಎಸ್‌ ಜೊತೆಗಿನ ಮೈತ್ರಿಯಿಂದಾಗಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಡಿ ವಿ ಸದಾನಂದಗೌಡ ಅವರು ಕಾಂಗ್ರೆಸ್‌ ಪಕ್ಷವನ್ನು ಸೇರ್ತಾರಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಈ ಚರ್ಚೆಯ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ ಡಿ ವಿ ಸದಾನಂದಗೌಡ ಅವರ ಅಸಮಾಧಾನವನ್ನ ಶಮನಗೊಳಿಸುವ ನಿಟ್ಟಿನಲ್ಲಿ ದೆಹಲಿಗೆ ಬರುವಂತೆ ಬುಲಾವ್‌ ನೀಡಿದೆ.

ಇನ್ನೂ ಈ ಬಾರೀ ಬಿಜೆಪಿಯಲ್ಲಿ 12 ಜನ ಸಂಸದರಿಗೆ ಈ ಬಾರೀ ಟಿಕೆಟ್‌ ಕೈತಪ್ಪಲಿದೆ ಎಂಬ ವರದಿಯಾಗಿದ್ದು, ಆ 12 ಜನ ಸಂಸದರ ಪೈಕಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ ವಿ ಸದಾನಂದಗೌಡ ಅವರಿಗೆ ಈ ಬಾರೀ ಟಿಕೆಟ್‌ ಕೈ ತಪ್ಪಲಿದೆ ಎನ್ನಲಾಗಿದೆ. ಇನ್ನೂಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಆಕ್ಟಿವ್ ಆಗಿರೋ ಸದಾನಂದ ಗೌಡರು ಬಿಜೆಪಿಯ ಪ್ರತಿಭಟನೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಸಾಲು ಸಾಲು ಪ್ರತಿಭಟನೆಯನ್ನು ಸದನಾಂದ ಗೌಡರು ಭಾಗಿಯಾಗಿದ್ದಾರೆ.

ಮೈತ್ರಿ ಕುರಿತು ಡಿ ವಿ ಸದಾನಂದಗೌಡರು ಹೇಳಿದ್ದೇನು?

ಹೌದು, 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಕರ್ನಾಟಕದ ಆಡಳಿತರೂಢ ಕಾಂಗ್ರೆಸ್‌ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್‌ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಮ್ಮ ಕರ್ನಾಟಕದ ಯಾವುದೇ ಬಿಜೆಪಿ ನಾಯಕರ ಜೊತೆಗೂ ವರಿಷ್ಠರು ಚರ್ಚೆ ಮಾಡಿಲ್ಲ. ನಮ್ಮನ್ನು ಹೊರಗಿಟ್ಟೇ ಅವರೇ ಜೆಡಿಎಸ್‌ ಜೊತೆಗಿನ ಮೈತ್ರಿ ಬಗ್ಗೆ ತೀರ್ಮಾನ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದರಾದ ಸದಾನಂದಗೌಡ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ