ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Onion Price Hike :ಬೆಳ್ಳುಳ್ಳಿ ಏರಿಕೆ ಬೆನ್ನಲ್ಲೇ ಈರುಳ್ಳಿ ಬೆಲೆ ದಿಢೀರ್ ಏರಿಕೆ ಸಾಧ್ಯತೆ..!

Twitter
Facebook
LinkedIn
WhatsApp
Onion Price Hike :ಬೆಳ್ಳುಳ್ಳಿ ಏರಿಕೆ ಬೆನ್ನಲ್ಲೇ ಈರುಳ್ಳಿ ಬೆಲೆ ದಿಢೀರ್ ಏರಿಕೆ ಸಾಧ್ಯತೆ..!

ಬೆಳ್ಳುಳ್ಳಿ ದರ ಏರಿಕೆಯಾಗಿದ್ದ ಬೆನ್ನಲ್ಲೇ ಇದೀಗ ಈರುಳ್ಳಿ ಬೆಲೆಯು ದಿಢೀರನೆ ಹೆಚ್ಚಳವಾಗುವ ಮೂಲಕ ಜನಸಾಮಾನ್ಯರ ಜೇಬಿಗೆ ಇನ್ನಷ್ಟು ಹೊರೆ ಬಿದ್ದಂತಾಗಿದೆ. ಈರುಳ್ಳಿ ಬೆಲೆ ಏರಿಕೆಯಿಂದ ಅಡುಗೆ ಮನೆ ಹಾಗೂ ರೆಸ್ಟೋರೆಂಟ್‌ ಗಳಲ್ಲಿಯೂ ಬಿಸಿ ಮುಟ್ಟುವಂತಾಗಿದೆ.

ಈರುಳ್ಳಿ ರಫ್ತು ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದಾಗಿ ವರದಿ ತಿಳಿಸಿದೆ. ದೇಶದ ಅತೀ ದೊಡ್ಡ ಈರುಳ್ಳಿ ಮಾರುಕಟ್ಟೆಯಾದ ಲಾಸಲ್‌ ಗಾಂವ್‌ ಕೃಷಿ ಉತ್ಪಾದನಾ ಮಾರುಕಟ್ಟೆ(ಎಪಿಎಂಸಿ)ಯಲ್ಲಿ ಈರುಳ್ಳಿ ರಖಂ ಮಾರಾಟ ಬೆಲೆ ಶೇ.40ರಷ್ಟು ಏರಿಕೆ ಕಂಡಿರುವುದಾಗಿ ವರದಿ ತಿಳಿಸಿದೆ.

ಈರುಳ್ಳಿ ಪ್ರತಿ ಕ್ವಿಂಟಾಲ್‌ ಬೆಲೆ 1,280 ರೂಪಾಯಿಯಿಂದ 1,800 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ ಕನಿಷ್ಠ ಬೆಲೆಯ 1,000 ಹಾಗೂ ಗರಿಷ್ಠ ಬೆಲೆ ಕ್ವಿಂಟಾಲ್‌ ಗೆ 2,100 ರೂಪಾಯಿಗೆ ಹೆಚ್ಚಳವಾಗಿರುವುದಾಗಿ ವರದಿ ವಿವರಿಸಿದೆ.

ಈರುಳ್ಳಿ ಬೆಳೆ ಲಭ್ಯತೆ ಕುರಿತು ನಿಗಾ ಇರಿಸಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದ್ದು, ಅದೇ ರೀತಿ ಗ್ರಾಹಕರು ಮತ್ತು ರೈತರಿಗೆ ಹೆಚ್ಚಿನ ಲಾಭ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.

ಉತ್ತರಪ್ರದೇಶದಲ್ಲಿ ಇತ್ತೀಚೆಗೆ ಬೆಳ್ಳುಳ್ಳಿ ಬೆಲೆ ಒಂದು ಕೆಜಿಗೆ 550 ರೂಪಾಯಿಗೆ ಏರಿಕೆಯಾಗಿತ್ತು. ರಖಂ ದೇಶದ ಹಲವು ನಗರಗಳಲ್ಲಿ ಬೆಳ್ಳುಳ್ಳಿ ಚಿಲ್ಲರೆ ಮಾರಾಟ ಬೆಲೆ ಕೆಜಿಗೆ 400 ರೂಪಾಯಿಗೆ ಹೆಚ್ಚಳವಾಗಿತ್ತು ಎಂದು ವರದಿ ವಿವರಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ