ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಬದಲಿಸಲು ಇನ್ನು 26 ದಿನ ಮಾತ್ರ ಬಾಕಿ..!

Twitter
Facebook
LinkedIn
WhatsApp
ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಬದಲಿಸಲು ಇನ್ನು 26 ದಿನ ಮಾತ್ರ ಬಾಕಿ..!

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ನಂಬರ್‌ ಪ್ಲೇಟ್‌-High Security Registration Number Plate- HSRP) ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ ಈಗಾಗಲೇ ಅಧಿಸೂಚನೆ ಹೊರಡಿಸಿತ್ತು. ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಾಗಿ (HSRP Number Plate) ಅರ್ಜಿ ಸಲ್ಲಿಸಲು ನ. 17 ಕೊನೇ ದಿನ ಎಂದು ತಿಳಿಸಲಾಗಿತ್ತು. ಇಲ್ಲದಿದ್ದರೆ ಪ್ರತಿ ಬಾರಿ ಪೊಲೀಸರು ಹಿಡಿದಾಗಲೂ 500 ರೂಪಾಯಿಯಿಂದ 1 ಸಾವಿರ ರೂಪಾಯಿ ವರೆಗೆ ದಂಡ ಕಟ್ಟಬೇಕಿತ್ತು. ಆದರೆ, ಸರ್ಕಾರ ಗಡುವನ್ನು ವಿಸ್ತರಣೆ ಮಾಡಿದ್ದು, ಫೆಬ್ರವರಿ 17ರವರೆಗೂ ಕಾಲಾವಕಾಶ ನೀಡಿದೆ. ಆದರೆ, ಇದಕ್ಕೆ ಇನ್ನಿರುವುದು ಒಂದು ತಿಂಗಳಷ್ಟೇ ಬಾಕಿ.

ರಾಜ್ಯದಲ್ಲಿನ ಹಳೇ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಹಾಕಿಸಲು ಇದೇ ನವೆಂಬರ್ 17 ಕೊನೆಯ ದಿನವಾಗಿತ್ತು. ಆದರೆ, ನಾವು ಈಗ ಈ ಅವಧಿಯನ್ನು ವಿಸ್ತರಣೆ ಮಾಡಲು ಚಿಂತನೆ ನಡೆಸಿದ್ದೇವೆ. ನವೆಂಬರ್ 17ರ ಬದಲಿಗೆ ಫೆಬ್ರವರಿ 17ರವರೆಗೂ ಸಮಯಾವಕಾಶ ನೀಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದರು. ಹೀಗಾಗಿ ಇನ್ನು ನಿಮಗೆ ಸಿಗುವುದು ಕೇವಲ ಎರಡೂವರೆ ತಿಂಗಳು ಮಾತ್ರ ಎಂಬುದನ್ನು ಮರೆಯುವಂತಿಲ್ಲ.

ಅಧಿಸೂಚನೆ ಹೊರಡಿಸಿದ್ದ ಸರ್ಕಾರ

2019ರ ಏಪ್ರಿಲ್‌ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು (High Security Registration Plate-ಎಚ್‌ಎಸ್‌ಆರ್‌ಪಿ) ಕಡ್ಡಾಯವಾಗಿ ಅಳವಡಿಸಬೇಕು ಎಂದು ಆಗಸ್ಟ್‌ 17ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದೇ ರೀತಿ ಆ.18ರಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಹೀಗಾಗಿ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕಾಗಿದೆ.

ಅರ್ಜಿ ಸಲ್ಲಿಕೆಗೆ ನವೆಂಬರ್‌ 17 ಕೊನೇ ದಿನವಾಗಿತ್ತು

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ನ. 17ರೊಳಗೆ ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಬಗ್ಗೆ ಈಚೆಗೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಯೋಗೇಶ್ ಎ.ಎಂ ಮಾಹಿತಿ ನೀಡಿದ್ದರು. ಆದರೆ, ಈಗ ಸ್ವತಃ ಸಾರಿಗೆ ಸಚಿವರೇ ಈ ಹಿಂದೆ ನೀಡಲಾಗಿದ್ದ ಗಡುವನ್ನು ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ಇನ್ನೂ ನೋಂದಣಿ ಮಾಡಿಸಿಕೊಳ್ಳದ ವಾಹನ ಸವಾರರು ಕೊಂಚ ನಿಟ್ಟುಸಿರು ಬಿಡುವಂತೆ ಆಗಿದೆ.

ಏನಿದು ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌?

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

ಎಚ್ಎಸ್ಆರ್‌ಪಿ ಪಡೆಯುವುದು ಹೇಗೆ?
  1. ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರರ್ಸ್‌ (ಎಸ್‌ಐಎಎಂ) ವೆಬ್‌ಸೈಟ್‌ ಭೇಟಿ ನೀಡಿ ಮತ್ತು Book HSRP ಅನ್ನು ಕ್ಲಿಕ್‌ ಮಾಡಿ.
  2. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
  3. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  4. HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
  5. HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ, ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  6. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ ರವಾನಿಸಲಾಗುವುದು.
  7. ನಿಮ್ಮ ಅನುಕೂಲಕ್ಕೆ ತಕ್ಕಂತಹ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
  8. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
  9. ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆಯನ್ನು ಹೊಂದಬಹುದು.
ಪ್ರಮುಖ ಅಂಶಗಳು
  1. ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಎಸ್‌ಐಎಎಂ ವೆಬ್‌ಸೈಟ್‌ ಮೂಲಕ HSRP ಅಳವಡಿಕೆಗೆ ಕಾಯ್ದಿರಿಸಿಕೊಳ್ಳಿ.
  2. ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND ಮಾರ್ಕ್ ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP, ಒಂದೇ ರೀತಿಯ ಪ್ಲೇಟ್‌ಗಳು, ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.
  3. HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು, ನಮೂದು, ರದ್ದತಿ, ಅರ್ಹತಾಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳಿಗೆ ಅನುಮತಿಸುವುದಿಲ್ಲ.
  4. ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ ಎಚ್‌ಎಸ್‌ಆರ್‌ಪಿ ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿರುವುದಿಲ್ಲ.
  5. HSRP ಅಳವಡಿಕೆಗೆ ನವೆಂಬರ್‌ 17 ಆಗಿದ್ದು, ಕೂಡಲೇ ಅರ್ಜಿ ಸಲ್ಲಿಸಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist