ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ; ತಿದ್ದುಪಡಿ ಇದ್ದಲ್ಲಿ ಇಲ್ಲಿದೆ ಸಂಪೂರ್ಣ ಮಾಹಿತಿ

Twitter
Facebook
LinkedIn
WhatsApp
ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ; ತಿದ್ದುಪಡಿ ಇದ್ದಲ್ಲಿ ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯ ಆಹಾರ ಇಲಾಖೆ ರೇಷನ್ ಕಾರ್ಡ್​​ ತಿದ್ದುಪಡಿಗೆ ಆದೇಶ ನೀಡಿದೆ. ಇಂದಿನಿಂದ 9 ದಿನಗಳ ಕಾಲ ರೇಷನ್ ಕಾರ್ಡ್​ ತಿದ್ದುಪಡಿಗೆ ಮಾಡಿಕೊಳ್ಳಬಹುದಾಗಿದೆ.ರೇಷನ್​ ಕಾರ್ಡ್​ ತಿದ್ದುಪಡಿ ನೀಡುತ್ತಿದ್ದಂತೆ ಹಲವರು ಹೊಸ ರೇಷನ್ ಕಾರ್ಡ್​​ಗೆ ಸರ್ಕಾರ ಯಾವಾಗ ಅರ್ಜಿಗಳನ್ನು ಬಿಡುಗಡೆ ಮಾಡುತ್ತೆ ಅಂತ ಪ್ರಶ್ನೆ ಮಾಡ್ತಿದ್ದಾರೆ.

ಹೊಸ ರೇಷನ್ ಕಾರ್ಡ್​ಗಳಿಗೆ ಅರ್ಜಿ ಬಿಡುಗಡೆ ಮಾಡುವಂತೆ ಕೇಳ್ತಿದ್ದ ಜನರಿಗೆ ಆಹಾರ ಇಲಾಖೆ ಗುಡ್​ನ್ಯೂಸ್​ ನೀಡಿದ್ದು, ಹೊಸ ರೇಷನ್​ ಕಾರ್ಡ್ ಸಲ್ಲಿಕೆಗೆ ಶೀಘ್ರವೇ ಅರ್ಜಿಗಳನ್ನು ಕರೆಯುವುದಾಗಿ ತಿಳಿಸಿದೆ. ಹೌದು, ಬಿಪಿಎಲ್ ಕಾರ್ಡ್ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಬಹುದು. ಆದರೆ ನೀವು ಸರ್ಕಾರ ಗ್ಯಾರಂಟಿ ಯೋಜನೆಗಳ ಫಲಾನುಭವಿ ಆಗಲು ಸಾಧ್ಯವಿಲ್ಲ. ತುರ್ತು ಸಂದರ್ಭದಲ್ಲಿ ಅಂದರೇ ಅನಾರೋಗ್ಯದ ಸಂದರ್ಭದಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಬಿಪಿಎಲ್ ಕಾರ್ಡ್​ ಪಡೆದುಕೊಳ್ಳಬಹುದಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಕಾರ್ಡ್​​ಗಳನ್ನು ಕೊಡಲು ಸಿದ್ಧವಾಗಿದೆ. 

ಚಿಕಿತ್ಸೆ ದೃಷ್ಟಿಯಿಂದ ರೇಷನ್​ ಕಾರ್ಡ್​ಗಳ ಮೂಲಕ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಅಡಿ ಶಸ್ತ್ರ ಚಿಕಿತ್ಸೆ ಸೇರಿದಂತೆ ವಿವಿಧ ಆರೋಗ್ಯ ಯೋಜನೆಗಳನ್ನು ಸೌಲಭ್ಯಗಳನ್ನು ಜನರು ಪಡೆದುಕೊಳ್ಳಬಹುದಾಗಿದೆ. ಇನ್ನು, ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿರುವ ಆಹಾರ ಇಲಾಖೆ, ಸರ್ವರ್ ಸಮಸ್ಯೆಗೂ ಮುಕ್ತಿ ಕೊಡಲು ಮುಂದಾಗಿದೆ. ಎರಡೇ ತಿಂಗಳಿನಲ್ಲಿ ಹೊಸ ಸರ್ವರ್ ಪಡೆದುಕೊಳ್ಳಲು ಆಹಾರ ಇಲಾಖೆ ಮುಂದಾಗಿದೆ. 

ಬೆಂಗಳೂರು ವಲಯದ ಜಿಲ್ಲೆಗಳಲ್ಲಿ ಅಕ್ಟೋಬರ್ 5 ರಿಂದ 7 ರವರೆಗೆ ಅವಕಾಶ

ಅಕ್ಟೋಬರ್ 5 ರಿಂದ ಅಕ್ಟೋಬರ್ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ 3 ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.ಬೆಂಗಳೂರು ಒನ್, ಕರ್ನಾಟಕ ಒನ್ , ಗ್ರಾಮ ಒನ್ ಕೇಂದ್ರದಲ್ಲಿ ಜನರು BPL ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು.

 ಅ.11 ರಿಂದ 13 ರವರೆಗೆ ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಗದಗ, ಕಾವೇರಿ, ಕೊಡಗು , ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಯಲ್ಲಿ ಅವಕಾಶ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಿಪಿಎಲ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು. ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ, ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ, ಸದಸ್ಯರ ಹೆಸರು ತಿದ್ದುಪಡಿಗೆ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಿದ್ದು, ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ.

ಅ.11 ರಿಂದ 13 ರವರೆಗೆ ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೀದರ್, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಶಿವಮೊಗ್ಗ, ರಾಮನಗರ, ಯಾದಗಿರಿ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ