ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉರುಳಿ ಬಿದ್ದ ಸಾರಿಗೆ ಬಸ್; ಇಬ್ಬರಿಗೆ ಗಂಭೀರ ಗಾಯ

Twitter
Facebook
LinkedIn
WhatsApp
ಉರುಳಿ ಬಿದ್ದ ಸಾರಿಗೆ ಬಸ್; ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ: ಸುವರ್ಣ ವಿಧಾನಸೌಧದ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ನಗರ ಸಾರಿಗೆ ಬಸ್ ಉರುಳಿ ಬಿದ್ದ ಪರಿಣಾಮ ಇಬ್ಬರಿಗೆ ಗಂಭೀರ ಗಾಯವಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಬಸ್ ನಲ್ಲಿ ಹತ್ತು ಜನ ಪ್ರಯಾಣಿಕರು ಸಂಚರಿಸುತ್ತಿದ್ದರು. ಈ ಸಂದರ್ಭದಲ್ಲಿ ಬಸ್ ಪಲ್ಟಿಯಾಗಿದ್ದು ಕಂಡಕ್ಟರ್ ಹಾಗೂ ಸಹನಾ ಎಂಬ ಬಾಲಕಿಗೆ ಗಂಭೀರ ಗಾಯವಾಗಿವೆ.

ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

13 ವರ್ಷ ಭಾರತಾಂಬೆಯ ಸೇವೆ ಮಾಡಿದ ಕೊಡಗಿನ ಯೋಧ ಅನಾರೋಗ್ಯದಿಂದ ನಿಧನ

ಮಡಿಕೇರಿ: ಬೆಂಗಳೂರಿನ (Bengaluru) ಮಿಲಿಟರಿ (Military) ಎಂಇಜಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧರೊಬ್ಬರು (Soldier) ಶುಕ್ರವಾರ ಅನಾರೋಗ್ಯದಿಂದ (Illness) ನಿಧನರಾಗಿದ್ದಾರೆ.

ಮಡಿಕೇರಿ (Madikeri) ತಾಲೂಕಿನ ಭಾಗಮಂಡಲ ಸಮೀಪದ ಸಣ್ಣಪುಲಿಕೋಟು ಗ್ರಾಮದ ಜಿತಿನ್ (31) ಮೃತಪಟ್ಟ ಯೋಧ. ಸಣ್ಣಪುಲಿಕೋಟು ಗ್ರಾಮದ ಕಾಳಪ್ಪ ಮತ್ತು ದಮಯಂತಿ ಪುತ್ರರಾಗಿರುವ ಜಿತಿನ್ 2012ರಲ್ಲಿ ಮಿಲಿಟರಿ ಸೇವೆಗೆ ಸೇರಿದ್ದು, 11 ವರ್ಷಗಳ ಸೇವೆಯನ್ನು ಪೂರೈಸಿದ್ದಾರೆ. ಆರಂಭದಲ್ಲಿ ಬೆಂಗಳೂರಿನಲ್ಲಿ ತರಬೇತಿಗೆ ಸೇರಿದ್ದು, ಜಮ್ಮು ಹಾಗೂ ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಬೆಂಗಳೂರಿನಲ್ಲಿ ನಾಯಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ವಿದೇಶಕ್ಕೆ ತೆರಳುವ ಉದ್ದೇಶದಿಂದ ಜಿತಿನ್ ಹೆಚ್ಚಿನ ತರಬೇತಿಯನ್ನು ಪಡೆಯುತ್ತಿದ್ದರು. ಪ್ಯಾರಾಚೂಟ್ ತರಬೇತಿ ಪಡೆಯುತ್ತಿದ್ದ ಸಂದರ್ಭ ಬಿದ್ದು ಅವರ ಕಿಡ್ನಿಗೆ ತೊಂದರೆಯಾಗಿತ್ತು. ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆದಿದ್ದರು. ತರಬೇತಿ ಮುಕ್ತಾಯ ಹಂತದಲ್ಲಿದ್ದು, ಕೊನೆಯ ದಿನವಾದ ಶುಕ್ರವಾರ ಬೆಳಗ್ಗಿನ ಜಾವ ಓಟದ ಸಂದರ್ಭ ಕುಸಿದು ಬಿದ್ದಿದ್ದಾರೆ. ಅವರನ್ನು ಕಮಾಂಡೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಐಸಿಯುಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. 

ಒಂದೂವರೆ ವರ್ಷಗಳ ಹಿಂದಷ್ಟೇ ಜಿತಿನ್ ವನಿತಾ ಎಂಬವರನ್ನು ವಿವಾಹವಾಗಿದ್ದರು. ಅವರ ಪತ್ನಿ ವೀರಾಜಪೇಟೆ ಎಸ್‌ಬಿಐ ಬ್ಯಾಂಕ್ ಉದ್ಯೋಗಿಯಾಗಿದ್ದು, ಆ ಕೆಲಸ ಬಿಟ್ಟು ಒಂದು ವರ್ಷದಿಂದ ಬೆಂಗಳೂರಿನಲ್ಲಿ ಪತಿಯೊಂದಿಗೆ ವಾಸವಿದ್ದರು. ಜಿತಿನ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಸೇನಾ ಗೌರವ ಸಲ್ಲಿಸಿ ಶುಕ್ರವಾರ ಸಂಜೆ ಬೆಂಗಳೂರಿನಿಂದ ಕಳುಹಿಸಿಕೊಡಲಾಗಿದೆ. ಶನಿವಾರ ಸಣ್ಣಪುಲಿಕೋಟು ಮೇಲ್ಕಟ್ಟು ಶಾಲೆಯ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ