ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ಳಂಬೆಳಗ್ಗೆ ಭತ್ತದ ಗದ್ದೆಯಲ್ಲಿ ನಾಟಿ ಮಾಡಿದ ರಾಹುಲ್‌ ಗಾಂಧಿ!

Twitter
Facebook
LinkedIn
WhatsApp
photo 1616353071588 708dcff912e2 25

ಚಂಡೀಗಢ: ದೇಶದ ಹಲವು ರಾಜ್ಯಗಳಲ್ಲಿ ಮಳೆಗಾಲ ಆರಂಭವಾಗಿದ್ದು, ಕೃಷಿ ಚಟುವಟಿಕೆ ಗರಿಗೆದರಿದೆ. ರೈತರು (Farmers) ಪ್ರಾದೇಶಿಕ ಬೆಳೆಗಳನ್ನ ಬೆಳೆಯಲು ಶುರು ಮಾಡಿದ್ದಾರೆ. ಶನಿವಾರ ಬೆಳ್ಳಂಬೆಳಗ್ಗೆ ಹರಿಯಾಣದ ಸೋನಿಪತ್‌ನ ಮದೀನಾ ಗ್ರಾಮಕ್ಕೆ ಭೇಟಿ ನೀಡಿದ್ದ ರಾಹುಲ್‌ ಗಾಂಧಿ (Rahul Gandhi) ರೈತರೊಂದಿಗೆ ಗದ್ದೆಗಿಳಿದು ಭತ್ತದ ನಾಟಿ ಮಾಡಿದ್ದಾರೆ.

ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದ ರಾಹುಲ್‌ ಗಾಂಧಿ ಭತ್ತದ ಗದ್ದೆಯಲ್ಲಿ ರೈತರು ನಾಟಿ ಮಾಡುತ್ತಿರುವುದನ್ನ ಕಂಡಿದ್ದಾರೆ. ಈ ವೇಳೆ ಕಾರು ನಿಲ್ಲಿಸಿ, ಹಳ್ಳಿ ಹುಡುಗನಂತೆ ಮೊಣಕಾಲುದ್ದಕ್ಕೆ ಪ್ಯಾಂಟ್‌ ಮಡಿಸಿಕೊಂಡು ರೈತರೊಂದಿಗೆ ಗದ್ದೆಗಿಳಿದು ಅವರಿಗೆ ನಾಟಿ ಮಾಡಲು ಸಹಾಯ ಮಾಡಿದ್ದಾರೆ. ಕಾಂಗ್ರೆಸ್‌ ಮುಖಂಡರೂ ಸಹ ರೈತರೊಂದಿಗೆ ಸೇರಿಕೊಂಡು ಟ್ರ್ಯಾಕ್ಟರ್‌ ಮೂಲಕ ಗದ್ದೆ ಉಳುಮೆ ಮಾಡಿ ಭತ್ತದ ನಾಟಿಗೆ ಸಹಕರಿಸಿದ್ದಾರೆ. ಬಳಿಕ ರೈತರೊಂದಿಗೆ ಸಂವಾದ ನಡೆಸಿ, ಕಷ್ಟ ಸುಖಗಳನ್ನ ವಿಚಾರಿಸಿದ್ದಾರೆ.

photo 1616353071588 708dcff912e2 26

2024ರ ಲೋಕಸಭೆ ಚುನಾವಣೆ (Lok Sabha Polls 2024) ಹಿನ್ನೆಲೆಯ ಭರ್ಜರಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿರುವ ರಾಹುಲ್‌ ಗಾಂಧಿ ಸಮಾಜದ ಎಲ್ಲ ಹಂತದ ಜನರನ್ನ ಭೇಟಿಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಬೈಕ್ ಮೆಕ್ಯಾನಿಕ್ ಕಾರ್ಯಾಗಾರಕ್ಕೆ ಭೇಟಿ ನೀಡಿದ್ದರು. ವರ್ಕ್‌ಶಾಪ್‌ನಲ್ಲಿ ಮೆಕ್ಯಾನಿಕ್‌ಗಳೊಂದಿಗೆ ಸಂಭಾಷಣೆ ನಡೆಸಿದ್ದರು. ಈ ವೇಳೆ ಮೋಟಾರ್‌ ಸೈಕಲ್‌ಗಳನ್ನು ರಿಪೇರಿ ಮಾಡೋದನ್ನ ಪ್ರಯತ್ನಿಸಿದ್ದರು. ಕರ್ನಾಟಕದಲ್ಲೂ ರಾಹುಲ್‌ ಗಾಂಧಿ ಬಸ್ಸಿನಲ್ಲಿ ಕುಳಿತು ಮಹಿಳಾ ಪ್ರಯಾಣಿಕರೊಂದಿಗೆ, ವಿದ್ಯಾರ್ಥಿಗಳೊಂದಿಗೆ ಹಾಗೂ ಸ್ವಿಗ್ಗಿ ಡೆಲಿವರಿ ಬಾಯ್ಸ್‌ಗಳೊಂದಿಗೆ ಸಂವಾದ ನಡೆಸಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದರು.

ಮಾನನಷ್ಟ ಕೇಸ್‌ನಲ್ಲಿ ರಾಹುಲ್‌ ಗಾಂಧಿಗೆ ಹಿನ್ನಡೆ:
ಮಾನನಷ್ಟ ಪ್ರಕರಣದಲ್ಲಿ (Defamation Case) ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ, 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದ ಸೂರತ್ ನ್ಯಾಯಾಲಯ ಆದೇಶವನ್ನು ಶುಕ್ರವಾರ ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿತ್ತು. ಅವರ ವಿರುದ್ಧ ಇನ್ನೂ 10 ಕ್ರಿಮಿನಲ್ ಕೇಸ್‌ಗಳು ಬಾಕಿ ಇವೆ ಎಂದು ಆದೇಶದ ವೇಳೆ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ತಿಳಿಸಿದ್ದರು.

ಗುಜರಾತ್ ಹೈಕೋರ್ಟ್ ಕೆಳಹಂತದ ನ್ಯಾಯಾಲಯದ ಆದೇಶ ಎತ್ತಿ ಹಿಡಿದಿರುವ ಹಿನ್ನಲೆ ಅವರ ರಾಜಕೀಯ ಭವಿಷ್ಯ ಏನಾಗಬಹುದು ಎಂಬುದು ಎಲ್ಲರ ಕುತೂಹಲವಾಗಿದೆ.

ಹಿನ್ನೆಲೆ ಏನು?
ಕೆಳ ಹಂತದ ಆದೇಶವನ್ನು ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿರುವ ಹಿನ್ನಲೆ ಸದ್ಯ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶಗಳಿದೆ. ಮೊದಲು ಅವರು ಜಾಮೀನು ಅರ್ಜಿ ಸಲ್ಲಿಸಬೇಕಾಗುತ್ತದೆ. ಜಾಮೀನು ಅರ್ಜಿ ಪುರಸ್ಕರಿಸಿ ಪ್ರಕರಣದ ವಿಚಾರಣೆ ನಡೆಸಿದರೆ ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್ ಸಿಗಲಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಜಾಮೀನು ನೀಡಲು ನಿರಾಕರಿಸಿದರೆ ಅವರು ಜೈಲಿಗೆ ಹೋಗಬೇಕಾದ ಅನಿವಾರ್ಯ ಸೃಷ್ಟಿಯಾಗಲಿದೆ ಎಂದು ಹೇಳಿತ್ತು.

ಪ್ರಕರಣದ ಸುದೀರ್ಘ ವಿಚಾರಣೆ ಬಳಿಕ ರಾಹುಲ್ ಗಾಂಧಿ ಅವರನ್ನು ದೋಷಮುಕ್ತಗೊಳಿಸಿದರೆ ಇಡಿ ಪ್ರಕರಣದಿಂದ ಅವರು ಪಾರಾಗಲಿದ್ದಾರೆ. ಒಂದು ವೇಳೆ ಅವರು ತಪ್ಪಿತಸ್ಥರು ಎಂದು ಸುಪ್ರೀಂಕೋರ್ಟ್ ಕೂಡಾ ಆದೇಶ ನೀಡಿದರೆ ಅವರ ರಾಜಕೀಯ ಜೀವನ ಮಸುಕಾಗಲಿದೆ. ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ 2 ವರ್ಷದ ಶಿಕ್ಷೆ ನೀಡಿರುವ ಹಿನ್ನಲೆ 2 ವರ್ಷದ ಸೆರೆವಾಸದ ಜೊತೆಗೆ ಅವರು ಜನಪ್ರತಿನಿಧಿಗಳ ಕಾನೂನಿನ ಪ್ರಕಾರ 6 ವರ್ಷ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗಲಿದ್ದಾರೆ. ಒಟ್ಟು 8 ವರ್ಷಗಳ ರಾಜಕೀಯ ಬದುಕು ನಾಶವಾಗಲಿದೆ. ಅವರ ಪ್ರಧಾನಿಯಾಗಬೇಕು ಎಂಬ ಕನಸಿಗೆ ದೊಡ್ಡ ಹಿನ್ನಡೆಯಾಗಲಿದೆ.

ಇಂತಹ ಪ್ರಕರಣ ನ್ಯಾಯಾಲಯದ ಮುಂದೆ ಬಂದಿತ್ತು. 2013 ಮತ್ತು 2018ರ ಲಿಲಿ ಥಾಮಸ್ ಮತ್ತು ಲೋಕ ಪ್ರಹಾರಿ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್, ಕೆಳ ಹಂತದ ನ್ಯಾಯಾಲಯಗಳ ಶಿಕ್ಷೆಯನ್ನು ಅಮಾನತುಗೊಳಿಸಿದರೆ ಅಥವಾ ಮೇಲ್ಮನವಿ ನ್ಯಾಯಾಲಯವು ಶಿಕ್ಷೆಗೆ ತಡೆ ನೀಡಿದರೆ, ಜನಪ್ರತಿನಿಧಿ ಕಾಯ್ದೆಯಡಿ ಸಾರ್ವಜನಿಕ ಪ್ರತಿನಿಧಿಯ ಅನರ್ಹತೆಯನ್ನು ರದ್ದುಗೊಳಿಸಬಹುದು ಎಂದು ಅಭಿಪ್ರಾಯಪಟ್ಟಿತ್ತು.

ಬಜೆಟ್‍ನಲ್ಲಿ ಪ್ರಸ್ತಾಪವಿಲ್ಲ ಟನಲ್ ರೋಡ್- ಡಿಕೆಶಿ ಕನಸಿಗೆ ನೀರೆರಚಿದ ಸಿಎಂ

ಬೆಂಗಳೂರು: ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಅವರು ಟನಲ್ (Tunnel) ನಿರ್ಮಾಣ ಮಾಡೋ ಕನಸು ಕಂಡಿದ್ರು. ಆದರೆ ಬಜೆಟ್ (Karnataka Budget 2023) ನಲ್ಲಿ ಟನಲ್ ಬಗ್ಗೆ ಪ್ರಸ್ತಾವೇ ಇಲ್ಲ. ಈ ಮೂಲಕ ಸಿದ್ದರಾಮಯ್ಯ ಅವು ಡಿಕೆ ಶಿವಕುಮಾರ್ ಕನಸಿಗೆ ನೀರೆರಚಿದ್ದಾರೆ.

ಹೌದು. ಬ್ರಾಂಡ್ ಬೆಂಗಳೂರು (Brand Bengaluru) ನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರ ನಾನಾ ಯೋಜನೆಗಳನ್ನ ಹಾಕಿಕೊಳ್ತಾ ಇದೆ. ಅದರಲ್ಲೂ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಹಲವಾರು ಯೋಜನೆಗಳನ್ನ ಹಾಕಿಕೊಳ್ಳುತ್ತಿದ್ದಾರೆ. ಕಸದ ಸಮಸ್ಯೆ ನಿವಾರಣೆ, ರಸ್ತೆ ಗುಂಡಿ ನಿವಾರಣೆ ಮತ್ತು ಟ್ರಾಫಿಕ್ ಸಮಸ್ಯೆ (Traffic Problem) ನಿವಾರಣೆ ಹಲವು ಯೋಜನೆ ಹಾಕಿಕೊಂಡಿದ್ದಾರೆ. ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣಕ್ಕೆ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ರು. ಆದರೆ ಬಜೆಟ್‍ನಲ್ಲಿ ಟನಲ್ ನಿರ್ಮಾಣದ ಪ್ರಸ್ತಾವೇ ಇಲ್ಲ. 50 ಕಿಮೀ ಉದ್ದದ ಸುರಂಗ ನಿರ್ಮಾಣಕ್ಕೆ ಎರಡು ಹಂತದಲ್ಲಿ ನಿರ್ಮಾಣ ಮಾಡೋ ಪ್ಲ್ಯಾನ್ ಮಾಡಿದ್ರು. 22 ಸಾವಿರ ಕೋಟಿ ವೆಚ್ಚ ಆಗ್ತಿತ್ತು. ಆದರೆ ಟನಲ್ ಪ್ಲ್ಯಾನ್ ಬಿಟ್ಟು ವೈಟ್ ಟಾಪಿಂಗ್ ಮೊರೆ ಹೋಗಿದ್ದಾರೆ.

ಈಗಾಗಲೇ ನಗರದಲ್ಲಿ ವೈಟ್ ಟ್ಯಾಪಿಂಗ್ (White Taping Road) ರಸ್ತೆಗಳು ಹಲವು ಕಡೆ ನಿರ್ಮಾಣ ಆಗಿವೆ. ವೈಟ್ ಟ್ಯಾಪಿಂಗ್ ಗುಂಡಿಮುಕ್ತ ರಸ್ತೆ ಆಗಬಹುದು. ಆದರೆ ಟ್ರಾಫಿಕ್ ಸಮಸ್ಯೆ ನಿವಾರಣೆ ಇದರಿಂದ ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ 100 ಕಿಮೀ ವೈಟ್ ಟ್ಯಾಪಿಂಗ್ ಮಾಡೋದಾಗಿ ಘೋಷಣೆ ಮಾಡಿದ್ದಾರೆ. ಹೀಗಾಗಿ ರಸ್ತೆಗಳ ಅಭಿವೃದ್ಧಿ ಆಗಲಿದೆ. ಕಾಮಗಾರಿಯಿಂದ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಜೊತೆಗೆ ವಾಹನ ಸವಾರರಿಗೆ ಕಿರಿ ಕಿರಿ ಆಗಲಿದೆ. ಟನಲ್ ನಿರ್ಮಾಣ ಐದು ವರ್ಷ ಸಮಯ ತೆಗೆದುಕೊಳ್ಳುತ್ತಿತ್ತು. ಆದರೆ ವೈಟ್‍ಟಾಪಿಂಗ್ ಮೂರ್ನಾಲ್ಕು ತಿಂಗಳಲ್ಲೆ ಮುಗಿಯಲಿದ್ದು ಸರ್ಕಾರ ವೈಟ್ ಟಾಪಿಂಗ್ ನಿರ್ಮಾಣದಿಂದ ಮತ್ತೆ ಕಿರಿ ಕಿರಿ ಸಾಧ್ಯತೆ. 

ಬೆಂಗಳೂರಿಗೆ ಬಜೆಟ್‍ನಲ್ಲಿ ದೊಡ್ಡ ಪ್ರಮಾಣದ ಯೋಜನೆಯನ್ನ ಘೋಷಿಸಿಲ್ಲ. ಕೇವಲ ವೈಟ್ ಟಾಪಿಂಗ್ ಬಿಟ್ರೆ ಬೇರೇನೂ ಇಲ್ಲ ಎಂದು ಬಿಜೆಪಿ (BJP) ಕಿಡಿಕಾರಿದೆ. ಒಟ್ಟಾರೆ ಸುರಂಗ ರಸ್ತೆ ನಿರ್ಮಾಣ ಮಾಡೋದಕ್ಕೆ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡ್ತಾ ಇದ್ರು. ಆದರೆ ಬಜೆಟ್ ಪ್ರಸ್ತಾಪ ಇಲ್ಲ. ಮುಂದಿನ ದಿನಗಳಲ್ಲಿ ಟನಲ್ ನಿರ್ಮಾಣದ ಬಗ್ಗೆ ತೀರ್ಮಾನ ಕೈಗೊಳ್ತಾರಾ ಕಾದು ನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ